ಕಾಡುತ್ತಿದೆ ರೇಬಿಸ್‌ ಔಷಧ ಕೊರತೆ

ಆರು ಜಿಲ್ಲೆಗಳಲ್ಲಿ ಔಷಧ ಸಂಗ್ರಹ ಶೂನ್ಯ | ಕಳೆದೊಂದು ವರ್ಷದಿಂದ ಟೆಂಡರ್‌ ಪ್ರಕ್ರಿಯೆ ನಡೆದೇ ಇಲ್ಲ

Team Udayavani, Jul 24, 2019, 9:35 AM IST

BNG-TDY-1

ಬೆಂಗಳೂರು: ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್‌ ಆ್ಯಂಡ್‌ ವೇರ್‌ ಹೌಸಿಂಗ್‌ ಸೊಸೈಟಿಯಿಂದ ಕರೆಯಲಾಗುವ ಟೆಂಡರ್‌ ಪ್ರಕ್ರಿಯೆಗಳು ತಡವಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆ್ಯಂಟಿ ರೇಬಿಸ್‌ ಔಷಧದ ಕೊರತೆ ಹೆಚ್ಚಾಗಿದೆ. ಪ್ರಮುಖ ಆರು ಜಿಲ್ಲೆಗಳ ಸೊಸೈಟಿಯ ಔಷಧ ಉಗ್ರಾಣದಲ್ಲಿ ಮಾರಣಾಂತಿಕವಾಗಿ ನಾಯಿ ಕಚ್ಚಿದ ಗಂಭೀರ ಪ್ರಕರಣಗಳಿಗೆ ನೀಡುವ ರೇಬಿಸ್‌ ಇಮ್ಯುನೊಗ್ಲೋಬಿನ್‌ ಔಷಧದ ಸಂಗ್ರಹಣೆಯೇ ಇಲ್ಲ.

ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್‌ ಆ್ಯಂಡ್‌ ವೇರ್‌ ಹೌಸಿಂಗ್‌ ಸೊಸೈಟಿಯಿಂದಲೇ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಔಷಧ ಪೂರೈಕೆಯಾಗುತ್ತದೆ. ಒಂದು ವರ್ಷದಿಂದ ಟೆಂಡರ್‌ ಪ್ರಕ್ರಿಯೆ ಆಗದ ಹಿನ್ನೆಲೆಯಲ್ಲಿ ಸೊಸೈಟಿಯಲ್ಲಿ ನಾಯಿ ಕಚ್ಚಿದ ಪ್ರಕರಣಗಳ ಚುಚ್ಚುಮದ್ದುವಿನ (ಆ್ಯಂಟಿ ರೇಬಿಸ್‌ ಲಸಿಕೆ) ಕೊರತೆಯಾಗಿದೆ. ಆರೋಗ್ಯ ಇಲಾಖೆ ಕಳೆದ ತಿಂಗಳು ತಮಿಳುನಾಡಿನಿಂದ ಈ ಔಷಧವನ್ನು ತರಿಸಿ ರಾಜ್ಯದ ವಿವಿಧ ಆಸ್ಪತ್ರೆಗಳಿಗೆ ವಿತರಿಸಿತ್ತು. ಆದರೆ, ಈಗ ಮಾರಣಾಂತಿಕವಾಗಿ ನಾಯಿ ಕಚ್ಚುವ ಪ್ರಕರಣಗಳಲ್ಲಿ ಅಂದರೆ ದೇಹದ ಭಾಗದ ಮಾಂಸ ಕಿತ್ತು ಬರುವಂತೆ ನಾಯಿ ಕಚ್ಚಿದ ಸಂದರ್ಭದಲ್ಲಿ ನೀಡುವ ರೇಬಿಸ್‌ ಇಮ್ಯುನೊಗ್ಲೋಬಿನ್‌ ಎಂಬ ಚುಚ್ಚುಮದ್ದಿನ ಮೂಲಕ ನೀಡುವ ಔಷಧ ಕೊರತೆಯಾಗಿದೆ.

ಎಲ್ಲೆಲ್ಲಿ ಶೂನ್ಯ ಸಂಗ್ರಹ?: ಸದ್ಯ ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್‌ ಆ್ಯಂಡ್‌ ವೇರ್‌ ಹೌಸಿಂಗ್‌ ಸೊಸೈಟಿಯ ಜಿಲ್ಲಾ ಕೇಂದ್ರಗಳಲ್ಲಿ ರೇಬಿಸ್‌ ಇಮ್ಯುನೊಗ್ಲೋಬಿನ್‌ ಔಷಧ ಶೇ.14.88ರಷ್ಟು ಮಾತ್ರ ಸಂಗ್ರಹವಿದೆ. ಸೊಸೈಟಿಯ ದಾಖಲೆ ಪ್ರಕಾರ ಬೆಂಗಳೂರು, ಬೆಳಗಾವಿ, ಧಾರವಾಡ, ಕೊಪ್ಪಳ, ಮೈಸೂರು ಮತ್ತು ರಾಯಚೂರು ಸರ್ಕಾರಿ ಆಸ್ಪತ್ರೆಗಳಲ್ಲಿ ರೇಬಿಸ್‌ ಇಮ್ಯುನೊಗ್ಲೋಬಿನ್‌ ಔಷಧ ಸಂಗ್ರಹವಿಲ್ಲ. ಇನ್ನು, ಈ ರೇಬಿಸ್‌ ಇಮ್ಯುನೊಗ್ಲೋಬಿನ್‌ ಒಂದು ವಾಯಿಲ್ಸ್ಗೆ 4,000ರೂ. ಇದ್ದು, ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಂದ ದುಪ್ಪಟ್ಟು ಹಣ ವಸೂಲಿ ಮಾಡುತ್ತಾರೆ. ಜತೆಗೆ ಚಿಕಿತ್ಸೆ ಶುಲ್ಕವೂ ಹೆಚ್ಚಾಗುತ್ತದೆ.

ಉಳಿದಂತೆ ಚಿತ್ರದುರ್ಗ-2, ಗದಗ-6, ಬಾಗಲ.ಕೋಟೆ-9, ಹಾವೇರಿ-10, ಬಳ್ಳಾರಿ-10, ಬೀದರ್‌-11, ಗೋಕಾಕ್‌-11, ರಾಮನಗರ-14, ದಾವಣಗೆರೆ-15, ವಿಜಯಪುರ-19, ಮಡಿಕೇರಿ-19, ಕಲಬುರಗಿ-25, ಯಾದಗಿರಿ-43, ಬೆಂ.ಗ್ರಾಮಾಂತರ- 94, ಹಾಸನ-155, ಕೋಲಾರ-153, ಮಂಗಳೂರು-243, ಶಿವಮೊಗ್ಗ-45, ತುಮಕೂರು-131 ವಯಲ್ (ಒಂದು ವಯಲ್ನಲ್ಲಿ 10 ಚುಚ್ಚುಮದ್ದು ಅಥವಾ 150 ಮಿ.ಲೀ. ಇರುತ್ತದೆ) ಗಳಷ್ಟು ಔಷಧ ಸಂಗ್ರಹವಿದೆ.

ಬಿಲ್ ಪಾವತಿ ತಡ ಆರೋಪ:

ಕರ್ನಾಟಕ ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್‌ ಆ್ಯಂಡ್‌ ವೇರ್‌ ಹೌಸಿಂಗ್‌ ಸೊಸೈಟಿಯಿಂದ ನಿಗದಿತ ಸಮಯಕ್ಕೆ ಬಿಲ್ ಪಾವತಿಯಾಗುವುದಿಲ್ಲ ಹಾಗೂ ಹಣ ನೀಡುವ ಸಂದರ್ಭದಲ್ಲಿ ಕೆಲ ಅಧಿಕಾರಿಗಳು ಕಮಿಷನ್‌ ಕೇಳುತ್ತಾರೆ ಎಂದು ಗುತ್ತಿಗೆದಾರರು ಟೆಂಡರ್‌ನಲ್ಲಿ ಭಾಗವಹಿಸಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.
ಸರ್ಕಾರಿ ಆಸ್ಪತ್ರೆಗಳೇ ಈ ಲಸಿಕೆಯನ್ನು ಸ್ಥಳೀಯವಾಗಿ ಖರೀದಿಸುವ ಮೂಲಕ ರೋಗಿಗಳಿಗೆ ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಕಂಪನಿಗಳ ಜತೆ ಮಾತುಕತೆ ನಡೆಸಿದ್ದು, ಮುಂದಿನ ಎರಡು ತಿಂಗಳಲ್ಲಿ ಅಗತ್ಯ ಪ್ರಮಾಣದಷ್ಟು ಔಷಧ ಲಭ್ಯವಾಗಲಿದೆ.•ಸಿ.ನಾಗರಾಜ್‌,ಅಪರ ನಿರ್ದೇಶಕ, ಸ್ಟೇಟ್ ಡ್ರಗ್ಸ್ ಲಾಜಿಸ್ಟಿಕ್‌ ಆ್ಯಂಡ್‌ ವೇರ್‌ ಹೌಸಿಂಗ್‌ ಸೊಸೈಟಿ

ಕರಾವಳಿಯಲ್ಲಿ ರೇಬಿಸ್‌ ಔಷಧ ಕೊರತೆಯಿಲ್ಲ:

 ರಾಜ್ಯಾದ್ಯಂತ ರೇಬಿಸ್‌ ರೋಗ ಮತ್ತು ವಿಷದ ಹಾವು ಕಡಿತಕ್ಕೆ ಪ್ರತ್ಯೌಷಧ ಕೊರತೆ ಇದ್ದರೂ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿಲ್ಲ ಎಂದು ದ.ಕ.ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್‌ ತಿಳಿಸಿದ್ದಾರೆ. ಎಲ್ಲ ಪ್ರಾಥಮಿಕ ಕೇಂದ್ರಗಳಲ್ಲಿ ಕೂಡ ಆಯಾ ಕೇಂದ್ರದ ವೈದ್ಯಾಧಿಕಾರಿಗಳೇ ನೇರವಾಗಿ ಔಷಧಗಳನ್ನು ಖರೀದಿಸಲು ಅವಕಾಶವಿರುವುದರಿಂದ ಸಂಗ್ರಹ ಖಾಲಿಯಾದ ತಕ್ಷಣ ಖರೀದಿ ಮಾಡುತ್ತಾರೆ. ವಿಷ ನಿರೋಧಕ ಔಷಧದ ಲಭ್ಯತೆಯೂ ಜಿಲ್ಲೆಯಲ್ಲಿ ಇದೆ ಎಂದು ಅವರು ತಿಳಿಸಿದ್ದಾರೆ. ಉಡುಪಿ ಜಿಲ್ಲೆಯಲ್ಲೂ ನಾಯಿ ಕಡಿತಕ್ಕೆ ನೀಡುವ ರೇಬಿಸ್‌ ವ್ಯಾಕ್ಸಿನ್‌ ಕೊರತೆಯಿಲ್ಲ. ಸುಮಾರು 1,300 ಮಂದಿಗೆ ಸಾಕಾಗುವಷ್ಟು ಔಷಧ ಸಂಗ್ರಹವಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಂ.ಜಿ.ರಾಮ ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಅಗತ್ಯವಿರುವ ರೇಬಿಸ್‌ ವ್ಯಾಕ್ಸಿನ್‌ ಔಷಧವನ್ನು ಸರಕಾರಿ ಔಷಧಾಲಯ ಮತ್ತು ಸ್ಥಳೀಯವಾಗಿ ಖರೀದಿಸಲಾಗಿದೆ. ಸದ್ಯಕ್ಕೆ ಹಾವು ಕಡಿತಕ್ಕೆ ನೀಡುವ ಔಷಧದ ಕೊರತೆಯೂ ಇಲ್ಲ ಎಂದು ಜಿಲ್ಲಾ ಸರ್ಜನ್‌ ಡಾ. ಮಧುಸೂದನ್‌ ನಾಯಕ್‌ ತಿಳಿಸಿದ್ದಾರೆ.
● ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khattar (2)

Kasaragod: ಸ್ಥಳ ನೀಡಿದರೆ ಕೇರಳದಲ್ಲಿ ಅಣು ಶಕ್ತಿ ನಿಲಯ: ಕೇಂದ್ರ ಸಚಿವ ಖಟ್ಟರ್‌

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ

AUS v NZ: ಆಸ್ಟ್ರೇಲಿಯ ವನಿತೆಯರಿಗೆ ಸರಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

1-subb

Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್‌ ವರದಿ ಸಂಪೂರ್ಣ ತಿರಸ್ಕಾರ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.