ರಫೇಲ್ ಅವ್ಯವಹಾರ ಪ್ರಧಾನಿ ಹೊಣೆ :ಮಲ್ಲಿಕಾರ್ಜುನ ಖರ್ಗೆ
Team Udayavani, Sep 23, 2018, 6:05 AM IST
ಬೆಂಗಳೂರು: ರಫೇಲ್ ಯುದ್ದ ವಿಮಾನ ಅವ್ಯವಹಾರ ಬಹಿರಂಗಗೊಂಡಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೈವಾಡ ಇರುವುದು ಗೊತ್ತಾಗಿದ್ದು, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ರಫೇಲ್ ಯುದ್ದ ವಿಮಾನ ಖರೀದಿಗೆ ಹಗರಣದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಸಂಸತ್ತಿನಲ್ಲಿ ಪ್ರಸ್ತಾಪಿಸಿದಾಗ ಎಲ್ಲರೂ ಅಲ್ಲಗಳೆದಿದ್ದರು. ಆದರೆ, ಫ್ರಾನ್ಸ್‌ನ ಮಾಜಿ ಪ್ರಧಾನಿಗಳೇ ಈ ಬಗ್ಗೆ ಹೇಳಿರುವುದರಿಂದ ಇದರ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿಯೇ ಹೊರಬೇಕು. ಪ್ರಧಾನಿ ನರೇಂದ್ರ ಮೋದಿ ಒತ್ತಡ ಹೇರಿ ರಿಲಾಯನ್ಸ್ ಕಂಪನಿಗೆ ನೀಡಿರುವುದರಿಂದ 35 ಸಾವಿರ ಕೋಟಿ ರೂ.ಅವ್ಯವಹಾರ ನಡೆದಿದೆ. ಈ ಬಗ್ಗೆ ಜಂಟಿ ಸದನ ಸಮಿತಿಯಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಬಿಜೆಪಿಯ ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಕ್ಷದಲ್ಲಿ ಒಡಕು ಮೂಡಿಸುವುದೇ ಬಿಜೆಪಿಯ ಕೆಲಸವಾಗಿದೆ. ರಾಜ್ಯದಲ್ಲಿ ಬಹುಮತದ ಸರ್ಕಾರ ಅಸ್ಥಿತ್ವದಲ್ಲಿದೆ. ಅದನ್ನು ಉರುಳಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ದಂಗೆ ಪದವನ್ನು ಬಳಸಿರುವುದಕ್ಕೆ ಈಗಾಗಲೇ ಸ್ಪಷ್ಟೀಕರಣ ನೀಡಿದ್ದಾರೆ. ಬಿಜೆಪಿಯವರು ಅನಗತ್ಯವಾಗಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರ ನಮ್ಮದೇ ಇದೆ ಎಂದು ಸರ್ವಾಧಿಕಾರಿ ಪ್ರವೃತ್ತಿ ತೋರಿಸಿದ್ದಾರೆ ಎಂದು ವಾಗ್ಧಾಳಿ ನಡೆಸಿದರು. ಎಸ್ಸಿ ಎಸ್ಟಿ ನೌಕರರ ಹಿತ ಕಾಯಲು ಬಡ್ತಿ ಮೀಸಲಾತಿ ಕಾನೂನನ್ನು ಜಾರಿಗೆ ತರುವಂತೆ ಮುಖಮಂತ್ರಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್ ಜಾರಕಿಹೊಳಿ
Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್ ಟೀಕೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.