ರಾಘವೇಶ್ವರ ಶ್ರೀ ಹೈಕೋರ್ಟ್‌ಗೆ ಮೊರೆ: ಸರ್ಕಾರಕ್ಕೆ ನೋಟಿಸ್‌

Team Udayavani, Jul 8, 2017, 3:45 AM IST

Sri-Raghaveshwara-Bharathi.jpg

ಬೆಂಗಳೂರು:  ಹೊಸನಗರ ರಾಮಚಂದ್ರಾಪುರ ಮಠದಲ್ಲಿ ಅವ್ಯವಹಾರ ನಡೆದಿದೆ ಎನ್ನಲಾದ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆ  ನಡೆಸುವಂತೆ ಮುಜರಾಯಿ ಇಲಾಖೆ  ಆಯುಕ್ತರಿಗೆ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಹೊರಡಿಸಿದ್ದ ಆದೇಶ ರದ್ದು ಕೋರಿ ರಾಘವೇಶ್ವರ ಭಾರತೀ ಶ್ರೀಗಳು  ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಶುಕ್ರವಾರ ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಶೋಕ್‌ ಬಿ. ಹಿಂಚಿಗೇರಿ ಅವರಿದ್ದ ಏಕಸದಸ್ಯ ಪೀಠ, ಪ್ರತಿವಾದಿಗಳಾದ ರಾಜ್ಯಸರ್ಕಾರ, ಮುಖ್ಯ ಕಾರ್ಯದರ್ಶಿ ಸುಭಾಷ್‌ ಚಂದ್ರ ಸಿ. ಖುಂಟಿಯಾ, ಮುಜರಾಯಿ ಇಲಾಖೆ ಆಯುಕ್ತರು, ಎದುರ್ಕುಳ ಈಶ್ವರಭಟ್‌, ಜಯಕೃಷ್ಣ ಅವರಿಗೆ ನೋಟೀಸ್‌ ಜಾರಿಗೊಳಿಸಿದೆ.

ವಿಚಾರಣೆ ವೇಳೆ ವಾದ ಮಂಡಿಸಿದ ಮಠದ ಪರ ವಕೀಲರು, ಮಠದ ಆಂತರಿಕ ವಿಚಾರಗಳಿಗೆ ಸಬಂಧಪಟ್ಟಂತೆ ನಿರಾಧಾರ ಆರೋಪಗಳ ಹಿನ್ನೆಲೆಯಲ್ಲಿ ವಿಚಾರಣೆ ನಡೆಸುವಂತೆ ಮುಖ್ಯಕಾರ್ಯದರ್ಶಿ, ಮುಜರಾಯಿ ಇಲಾಖೆ ಆಯುಕ್ತರಿಗೆ ನೀಡಿರುವ ಆದೇಶ  ಕಾನೂನು ಬಾಹಿರವಾಗಿದೆ. ಜೊತೆಗೆ ಮಠಗಳ ವ್ಯಾಪ್ತಿ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮ ದತ್ತಿ ಕಾಯಿದೆ ಅಡಿ ಬರುವುದಿಲ್ಲ. ಹೀಗಾಗಿ ಮಠಗಳು ವಿಚಾರಣಾ  ವ್ಯಾಪ್ತಿಯಿಂದ ಹೊರಗುಳಿಯಲಿದೆ. ಹೀಗಾಗಿ ಮುಖ್ಯಕಾರ್ಯದರ್ಶಿಗಳ ಆದೇಶ ರದ್ದುಪಡಿಸಬೇಕು ಎಂದು  ಕೋರಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಸರ್ಕಾರದ ಪರ ವಕೀಲ  ಡಿ. ಲಕ್ಷ್ಮೀನಾರಾಯಣ್‌, ಹೈಕೋರ್ಟ್‌ ಆದೇಶ ಪಾಲಿಸಿರುವ ಮುಖ್ಯಕಾರ್ಯದರ್ಶಿಗಳು ಮುಜರಾಯಿ ಇಲಾಖೆ ಆಯುಕ್ತರಿಗೆ ಆದೇಶ ನೀಡಿದ್ದಾರೆ. ಹೀಗಾಗಿಯೇ ಇಲಾಖೆ ಆಯುಕ್ತರು ಮಠದ ಕುರಿತ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಸತ್ಯಶೋಧನಾ ಸಮಿತಿ ರಚಿಸಿ ವರದಿ ನೀಡಲಿದೆಯೇ ವಿನ: ಕ್ರಮ ಕೈಗೊಳ್ಳುವುದಿಲ್ಲ. ಹೀಗಾಗಿ ಮುಖ್ಯ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಬಾರದು ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಪೀಠ, ಈ ಸಂಬಂಧ ಪ್ರತಿವಾದಿಗಳಿಗೆ ನೋಟೀಸ್‌ ಜಾರಿಗೊಳಿಸಿ ಜುಲೈ 11ಕ್ಕೆ ಅರ್ಜಿ ವಿಚಾರಣೆ ಮುಂದೂಡಿತು.

ಏನಿದು ಪ್ರಕರಣ?
ಹೊಸನಗರ ರಾಮಚಂದ್ರಪುರ ಮಠದಲ್ಲಿ ಅವ್ಯವಹಾರ ನಡೆಯುತ್ತಿದ್ದು, ರಾಘವೇಶ್ವರ ಶ್ರೀಗಳ ಮೇಲೆ ಹಲವು ಆಪಾದನೆಗಳಿವೆ. ಹೀಗಾಗಿ ಮಠದ ಪೀಠದಿಂದ ರಾಘವೇಶ್ವರ ಶ್ರೀಗಳನ್ನು ಕೆಳಗಿಳಿಸಬೇಕು ಹಾಗೂ ಮಠಕ್ಕೆ ಆಡಳಿತಾಧಿಕಾರಿ ನೇಮಕಗೊಳಿಸಲು ಆದೇಶಿಸಬೇಕು ಎಂದು ಎದುರ್ಕುಳ ಈಶ್ವರಭಟ್‌, ಜಯಕೃಷ್ಣ  ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಇತ್ಯರ್ಥಗೊಳಿಸಿದ್ದ ವಿಭಾಗೀಯ ಪೀಠ, ಈ ಪ್ರಕರಣ ಸಂಬಂಧ ರಾಜ್ಯಸರ್ಕಾರ ಅರ್ಜಿದಾರರು ಹಾಗೂ ಪ್ರತಿವಾದಿಗಳ ವಿಚಾರಣೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿತ್ತು. ಈ ನಿಟ್ಟಿನಲ್ಲಿ ವಿಚಾರಣೆ ನಡೆಸಿದ್ದ ಮುಖ್ಯಕಾರ್ಯದರ್ಶಿ, ಮಠದ ವಿರುದ್ಧ ಕೇಳಿ ಬಂದ ಆರೋಪಗಳಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿ ಕಂದಾಯ ಇಲಾಖೆಗೆ ವರದಿ ನೀಡುವಂತೆ ಮೇ 23ರಂದು ಮುಜರಾಯಿ ಇಲಾಖೆಗೆ ಆದೇಶ ನೀಡಿದ್ದರು. ಈ ಆದೇಶದ ಅನ್ವಯ ಆಯುಕ್ತರು ಸತ್ಯಶೋಧನಾ ಸಮಿತಿ ರಚಿಸಿದ್ದಾರೆ.

ಟಾಪ್ ನ್ಯೂಸ್

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

1-aaaaa

Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

Arrested: ಪೈಂಟ್‌ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

v-narayanan

ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

Mollywood: ನಟಿ ಹನಿ ರೋಸ್‌ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ

5-one-plus

OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.