ಹೊಸ ಬಜೆಟ್‌ಗೆ ರಾಹುಲ್ ಗಾಂಧಿ ಸಮ್ಮತಿ
Team Udayavani, Jun 19, 2018, 7:00 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಜೆಟ್ ಮಂಡಿಸುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಪ್ರಸ್ತಾವನೆಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮತಿಸಿದ್ದಾರೆ. ಇದರಿಂದಾಗಿ ಹೊಸ ಬಜೆಟ್ ಬೇಡ ಎಂಬ
ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾಗಿದೆ.
ರಾಹುಲ್ ಗಾಂಧಿ ಭೇಟಿ ವೇಳೆ ಹೊಸ ಬಜೆಟ್ ಮಂಡಿಸುವ ಕುರಿತು ಚರ್ಚಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಹೊಸ ಬಜೆಟ್ ಮಂಡನೆ ಬೇಡ.
ಹಳೆಯ ಬಜೆಟ್ ಮುಂದುವರಿಸಬೇಕು. ಹೊಸ ಸರ್ಕಾರದ ಕಾರ್ಯಕ್ರಮಗಳಿಗೆ ಪೂರಕ ಬಜೆಟ್‌ನಲ್ಲಿ ಅನುಮೋದನೆ ಪಡೆದುಕೊಳ್ಳಬೇಕು ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಗಮನ ಸೆಳೆದರು.
ಜತೆಗೆ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳ ಪ್ರಣಾಳಿಕೆ ಅಂಶಗಳನ್ನೊಳಗೊಂಡ
ಪೂರ್ಣ ಪ್ರಮಾಣದ ಬಜೆಟ್ ಮಂಡಿಸುವ ಅವಶ್ಯಕತೆ ಇದೆ ಎಂದು ಹೇಳಿದರು.
ಹೊಸ ಬಜೆಟ್ ಮಂಡಿಸುವ ತಮ್ಮ ನಿಲುವಿಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ಕಾಂಗ್ರೆಸ್‌ನ ಬಹುತೇಕರು ಬೆಂಬಲಿಸಿರುವುದನ್ನೂ ರಾಹುಲ್ ಗಾಂಧಿ ಗಮನಕ್ಕೆ ತಂದರಲ್ಲದೆ, ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆಯಾದ ಬಳಿಕವೇ ಬಜೆಟ್‌ನಲ್ಲಿ ಹೊಸ ಕಾರ್ಯಕ್ರಮಗಳನ್ನು ಪ್ರಕಟಿಸಲಾಗುವುದು ಎಂದು ಭರವಸೆ ನೀಡಿದರು. ಇದಕ್ಕೆ ರಾಹುಲ್‌ಗಾಂಧಿ ಸಮ್ಮತಿಸಿದ್ದಾರೆ.
ಈ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ, ಹೊಸ ಬಜೆಟ್ ಮಂಡನೆಗೆ ರಾಹುಲ್ ಗಾಂಧಿ ಹಸಿರು ನಿಶಾನೆ ಕೊಟ್ಟಿದ್ದಾರೆ. ಅಷ್ಟಕ್ಕೂ ಸಿದ್ದರಾಮಯ್ಯ ಅವರು ಹೊಸ ಬಜೆಟ್‌ಗೆ ವಿರೋಧಿಸಿಲ್ಲ. ತಮ್ಮ ಅನುಭವದ ಆಧಾರದ ಮೇಲೆ ಹೊಸ ಬಜೆಟ್ ಬೇಡ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರಷ್ಟೆ. ಇದರಲ್ಲಿ ಭಿನ್ನಮತಕ್ಕೆ ಆಸ್ಪದವಾಗುವ ಯಾವುದೇ ವಿಚಾರ ಇಲ್ಲ ಎಂದರು.
ಸೌಹಾರ್ದ ಭೇಟಿ ಎಂದ ಸಿಎಂ
ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ,
ಇದೊಂದು ಸೌಹಾರ್ದ ಭೇಟಿ ಎಂದಿದ್ದಾರೆ. ಸಂಪುಟ ವಿಸ್ತರಣೆ ಗೊಂದಲ ಕಾಂಗ್ರೆಸ್‌ನ ಆಂತರಿಕ ವಿಚಾರವಾಗಿದ್ದು, ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಲಾಗಿದೆ. ಪಕ್ಷದೊಳಗಿನ ಸಮಸ್ಯೆಗಳನ್ನು ಆಂತರಿಕವಾಗಿ ಚರ್ಚಿಸಿ ಬಗೆಹರಿಸುವುದಾಗಿ ಅವರು ಹೇಳಿದ್ದಾರೆ.
ಉಳಿದಂತೆ ಈ ವಿಚಾರದಲ್ಲಿ ಚರ್ಚೆ ಮಾಡಿಲ್ಲ ಎಂದರು. ರಾಜ್ಯದ ಅಭಿವೃದಿಟಛಿಗೆ ಪೂರಕವಾದ ಸಲಹೆಗಳನ್ನು ರಾಹುಲ್ ಗಾಂಧಿ ನೀಡಿದ್ದಾರೆ. ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದರ ಜತೆಗೆ ಸುಭದ್ರ ಸರ್ಕಾರ ನಡೆಸಬೇಕು ಎಂಬ ಉದ್ದೇಶದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ. ಆ ಉದ್ದೇಶ ಈಡೇರಲು ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು. ಸಿಎಂ ಮತ್ತು ರಾಹುಲ್ ಭೇಟಿ ವೇಳೆ ಜೆಡಿಎಸ್ ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿ ಡ್ಯಾನಿಶ್ ಅಲಿ, ಕೆ.ಸಿ.ವೇಣುಗೋಪಾಲ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು