ರಾಹುಲ್ ಭಸ್ಮಾಸುರ ಎಂದ ಡಿವಿಎಸ್
Team Udayavani, Mar 19, 2017, 11:59 AM IST
ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಭಸ್ಮಾಸುರ ಇದ್ದಂತೆ. ಅವರ ಜತೆ ಹೋದವರೆಲ್ಲರೂ ಸುಟ್ಟುಹೋಗುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ವ್ಯಂಗ್ಯವಾಡಿದ್ದಾರೆ. ಶನಿವಾರ ತಮ್ಮ 62ನೇ ಜನ್ಮದಿನ ಆಚರಿಸಿಕೊಂಡ ಅವರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿದರು.
ಈ ವೇಳೆ ಮಾತನಾಡಿ, “ರಾಹುಲ್ ಗಾಂಧಿ ಅವರು ಭಸ್ಮಾಸುರ ಇದ್ದಂತೆ. ಹೀಗಾಗಿ ಅವರ ಪಕ್ಷದೊಂದಿಗೆ ಹೋದವರು ಸುಟ್ಟು ಹೋಗುತ್ತಾರೆ. ಇದಕ್ಕೆ ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಸಾಕ್ಷಿ. ಅಲ್ಲಿ ಕಾಂಗ್ರೆಸ್ ಜತೆ ಹೋದ ಎಸ್ಪಿ ಕೂಡ ಹೀನಾಯವಾಗಿ ಸೋತಿತು. ಮುಂದೆ ಕರ್ನಾಟಕದಲ್ಲೂ ಅದೇ ರೀತಿ ಆಗಲಿದೆ,” ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಮುಖಂಡರು ಮತ್ತು ಸಚಿವರ ಮೇಲೆ ಆದಾಯ ತೆರಿಗೆ ಇಲಾಖೆಯವರು ನಡೆಸುತ್ತಿರುವ ದಾಳಿ ರಾಜಕೀಯ ಪ್ರೇರಿತ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ದೂರು ನೀಡಿದ ಮಾತ್ರಕ್ಕೆ ಆದಾಯ ತೆರಿಗೆ ಇಲಾಖೆಯವರು ದಾಳಿ ಮಾಡುವುದಿಲ್ಲ. ಪ್ರಾಥಮಿಕ ತನಿಖೆ ನಡೆಸಿ ಮೇಲ್ನೋಟಕ್ಕೆ ಆರೋಪ ಸಾಬೀತಾಗುತ್ತದೆ ಎಂಬುದನ್ನು ಖಾತರಿಪಡಿಸಿಕೊಂಡೇ ದಾಳಿ ನಡೆಸುತ್ತಾರೆ ಎಂದರು.
ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ನೂರಾರು ಹಗರಣಗಳು ನಡೆದಿದ್ದವು. ಆ ಯುಪಿಎನ ಸಂತತಿಯೇ ಈ ಕಾಂಗ್ರೆಸ್‌ನವರು. ಹೀಗಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಉಕ್ಕಿನ ಮೇಲ್ಸೇತುವೆಯಿಂದ ಹಿಡಿದು ಪರಿಶಿಷ್ಟ ಜಾತಿ ಮತ್ತು ಪಂಗಡವರಿಗೆ ನೀಡುವ ಹಾಸಿಗೆ, ದಿಂಬಿನವರೆಗೂ ಹಗರಣಗಳು ನಡೆಯುತ್ತಿವೆ. ಹೀಗಾಗಿಯೇ ಅವರಿಗೆ ಹೆದರಿಕೆ ಆರಂಭವಾಗಿ ಸಿಬಿಐ ಗುಮ್ಮ ಕನಸ್ಸಿನಲ್ಲಿ ಬರುತ್ತಿದೆ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.