ರಾಹುಲ್ ಪಟ್ಟಕ್ಕೆ ಸೂಚಕರಾಗಿ ರಾಜ್ಯ ನಾಯಕರ ಸಹಿ
Team Udayavani, Dec 3, 2017, 7:30 AM IST
ಬೆಂಗಳೂರು: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆಯುವ ಚುನಾವಣೆಗೆ ರಾಹುಲ್ ಗಾಂಧಿ ಪರವಾಗಿ ರಾಜ್ಯದ
20 ಜನ ಕಾಂಗ್ರೆಸ್ನ ಹಿರಿಯ ನಾಯಕರು ಸೂಚಕರಾಗಿ ಸಹಿ ಹಾಕಿದ್ದಾರೆ.
ಎಐಸಿಸಿ ಚುನಾವಣಾಧಿಕಾರಿ ಪರವಾಗಿ ಸೂಚಕರ ಸಹಿ ಪಡೆಯಲು ಆಗಮಿಸಿರುವ ಪಲ್ಲಂರಾಜು ಹಾಗೂ ಪನಬಾಕ ಲಕ್ಷ್ಮೀ ಅವರ ಸಮ್ಮುಖದಲ್ಲಿ ಪಕ್ಷದ ಹಿರಿಯ ನಾಯಕರಾದ ಎಂ.ವಿ. ರಾಜಶೇಖರನ್, ಜಾಫರ್ ಷರೀಫ್, ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದ ವೀರಪ್ಪ ಮೊಲಿ, ಕೆ. ರೆಹಮಾನ್ ಖಾನ್, ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವರಾದ ಡಿ.ಕೆ. ಶಿವಕುಮಾರ್, ಎಂ. ಆರ್. ಸೀತಾರಾಮ್, ಎಸ್.ಎಸ್. ಮಲ್ಲಿಕಾರ್ಜುನ, ಈಶ್ವರ್ ಖಂಡ್ರೆ, ಡಾ| ಶರಣ ಪ್ರಕಾಶ್ ಪಾಟೀಲ್, ಕೆ.ಜೆ. ಜಾರ್ಜ್, ಎಚ್.ಕೆ. ಪಾಟೀಲ್, ಶಾಸಕರಾದ ಸಿ.ಎಸ್. ನಾಡಗೌಡ, ಮೋಟಮ್ಮ, ಕೆ.ಸಿ. ಕೊಂಡಯ್ಯ, ಯು.ಬಿ. ವೆಂಕಟೇಶ್, ಬಿ.ಎಲ್. ಶಂಕರ್ ಸಹಿ ಹಾಕಿದ್ದಾರೆ. ಹತ್ತು ಜನರ ಎರಡು ಸೆಟ್ಗಳನ್ನು ಪ್ರತ್ಯೇಕವಾಗಿ ಸಹಿ ಮಾಡಿ ಕೊಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಾ| ಜಿ. ಪರಮೇಶ್ವರ್, ನಮ್ಮಲ್ಲಿ ಸಾವಿರಾರು ಜನ ಕೆಪಿಸಿಸಿ ಸದಸ್ಯರಿದ್ದಾರೆ. ಅವರಲ್ಲಿ ಇಪ್ಪತ್ತು ಜನ ಹಿರಿಯ ನಾಯಕರಿಂದ ಸೂಚಕರಾಗಿ ಸಹಿಸುವ ಮೂಲಕ ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಲು ಅವರ ಆಶೀರ್ವಾದ ಸಹಕಾರಿಯಾಗಲಿ ಎಂದು ಮಾಡಿದ್ದೇವೆ ಎಂದರು.
ಪಲ್ಲಂರಾಜು ಮಾತನಾಡಿ, ರಾಹುಲ್ ಗಾಂಧಿಯನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ಕರ್ನಾಟಕದಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ 19 ವರ್ಷದಿಂದ ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಾಕಷ್ಟು ಏಳುಬೀಳುಗಳನ್ನು ಕಂಡಿದೆ. ರಾಹುಲ್ ಗಾಂಧಿಯನ್ನು ನೂತನ ಅಧ್ಯಕ್ಷರನ್ನಾಗಿ ಮಾಡುವ ಮೂಲಕ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.