ಎನ್‌ಸಿಬಿ ಅಧಿಕಾರಿಗಳ ದಾಳಿ: ಮೂವರು ಯುವತಿಯರು ವಶಕ್ಕೆ
Team Udayavani, Dec 2, 2022, 12:12 PM IST
ಬೆಂಗಳೂರು: ನಗರದ ಮಡಿವಾಳದಲ್ಲಿರುವ ಅಪಾರ್ಟ್‌ಮೆಂಟ್‌ವೊಂದರಲ್ಲಿ ಡ್ರಗ್ಸ್ ಸೇವನೆ ಮಾಡುತ್ತಿದ್ದ ಆರೋಪದ ಮೇಲೆ ಎನ್‌ಸಿಬಿ ಅಧಿಕಾರಿಗಳು ಮೂವರು ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.
ಉತ್ತರ ಭಾರತ ಮೂಲದ ಯುವತಿಯರು ಸಾಮಾಜಿಕ ಜಾಲತಾಣಗಳ ಮೂಲಕ ಡ್ರಗ್ಸ್‌ಗಳನ್ನು ಮನೆಗೆ ತರಿಸಿಕೊಂಡು ಸೇವಿಸುತ್ತಿದ್ದರು. ಈ ಮಾಹಿತಿ ಮೇರೆಗೆ ಗುರುವಾರ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆಯಲಾಗಿದೆ.
ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ಮಾಡಿರುವ ಯುವತಿಯರು ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೂಂದೆಡೆ ಡಾರ್ಕ್‌ವೆಬ್ ಮೂಲಕ ಕೂಡ ಡ್ರಗ್ಸ್ ತರಿಸಿಕೊಳ್ಳುತ್ತಿದ್ದರು ಎಂಬುದು ಗೊತ್ತಾಗಿದೆ. ತನಿಖೆ ನಡೆಯುತ್ತಿದೆ ಎಂದು ಎನ್‌ಸಿಬಿ ಅಧಿಕಾರಿಗಳು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.