ಮಲೆನಾಡಲ್ಲಿ ಮತ್ತೆ ಮಳೆ
Team Udayavani, Aug 30, 2018, 6:40 AM IST
ಬೆಂಗಳೂರು: ಮಲೆನಾಡು, ಕರಾವಳಿ, ಕೊಡಗಿನಲ್ಲಿ ಮಳೆ ಮುಂದುವರಿದಿದೆ. ಬುಧವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಸುಬ್ರಹ್ಮಣ್ಯದಲ್ಲಿ ರಾಜ್ಯದಲ್ಲಿಯೇ ಅಧಿಕ, 9 ಸೆಂ.ಮೀ. ಮಳೆ ಸುರಿಯಿತು.
ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆ ಚಿಕ್ಕಮಗಳೂರು ಜಿಲ್ಲೆ ಸೇರಿದಂತೆ ಮಲೆನಾಡು ಭಾಗದಲ್ಲಿ ಪುನ: ಆರಂಭಗೊಂಡಿದ್ದು, ಮಂಗಳವಾರ ರಾತ್ರಿಯಿಂದ ಸಾಧಾರಣ ಮಳೆಯಾಗುತ್ತಿದೆ. ಇದರಿಂದಾಗಿ ತುಂಗಾ, ಶರಾವತಿ,ನೇತ್ರಾವತಿ, ಅಘನಾಶಿನಿ ಸೇರಿದಂತೆ ಪ್ರಮುಖ ನದಿಗಳ ನೀರಿನ ಮಟ್ಟದಲ್ಲಿ ಏರಿಕೆಯಾಗುತ್ತಿದೆ. ತರೀಕೆರೆ ತಾಲೂಕು ಸೀತಾಪುರ ಕಾವಲ್‌ನಲ್ಲಿ ಮಳೆಯಿಂದಾಗಿ 5 ಮನೆಗಳಿಗೆ ಹಾನಿಯಾಗಿದೆ. ನಾರಾಯಣಪುರ
ಜಲಾಶಯದಿಂದ ಏಕಾಏಕಿ ಕೃಷ್ಣಾ ನದಿಗೆ ನೀರು ಬಿಟ್ಟ ಪರಿಣಾಮ ರಾಯಚೂರು ಜಿಲ್ಲೆ ಚಿಂಚೋಡಿ ಬಳಿ ನದಿಯ ನಡುಗಡ್ಡೆಯಲ್ಲಿ ಸುಮಾರು 15 ಜನ ಸಿಲುಕಿಕೊಂಡರು. ಈ ಪೈಕಿ 12 ಜನರನ್ನು ರಕ್ಷಿಸಲಾಗಿದ್ದು, ಇನ್ನೂ ಮೂವರು ನಡುಗಡ್ಡೆಯಲ್ಲಿ ಸಿಲುಕಿದ್ದಾರೆ. ಈ ಮಧ್ಯೆ, ಜಲಾನಯನ ಪ್ರದೇಶವ್ಯಾಪ್ತಿಯಲ್ಲಿ ಮಳೆಯಾದ ಕಾರಣ ಸೂಫಾ ಅಣೆಕಟ್ಟಿನಿಂದ 3 ಕ್ರಸ್ಟ್‌ಗೇಟ್‌ಗಳ ಮೂಲಕ ನೀರು ಬಿಡುಗಡೆ ಮಾಡಲಾಗಿದೆ.
ಈ ಮಧ್ಯೆ, ಶುಕ್ರವಾರ ಮುಂಜಾನೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕರಾವಳಿಯ ಬಹುತೇಕ ಎಲ್ಲೆಡೆ ಮತ್ತು ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಭಾರೀ ಮಳೆ
ಸುರಿಯುವ ಸಂಭವವಿದೆ ಎಂದು ಹವಾಮಾನ ಕಚೇರಿಯ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.