ಭಾನುವಾರ ಪೂರ ಸುರಿದ ಮಳೆ

Team Udayavani, Sep 18, 2017, 12:01 PM IST

rain-pack.jpg

ಬೆಂಗಳೂರು: ನಗರದಲ್ಲಿ ವಾರದ ಮಟ್ಟಿಗೆ ಬಿಡುವು ನೀಡಿದ್ದ ಮಳೆ ಭಾನುವಾರ ಮತ್ತೆ ಶುರುವಾಗಿದ್ದು, ಇನ್ನೂ ಎರಡು ದಿನಗಳು ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಬೆಳಗಿನ ಜಾವದಲ್ಲೇ ನಗರದಾದ್ಯಂತ ಆಗಮಿಸಿದ ಜಿಟಿಜಿಟಿ ಮಳೆ, ವೀಕೆಂಡ್‌ಗೆ ಸೂರ್ಯನಿಗೂ ವಿಶ್ರಾಂತಿ ನೀಡಿತು. ಸುಮಾರು ಒಂದು ತಾಸು ಸುರಿಯಿತು. ಆಗಾಗ್ಗೆ ವಿರಾಮ ನೀಡಿದಂತೆ ಕಂಡುಬಂತು. ಆದರೆ, ಕೆಲವೇ ಹೊತ್ತಿನಲ್ಲಿ ಮತ್ತೆ ಧಾರಾಕಾರವಾಗಿ ಸುರಿಯಿತು. ಸಂಜೆವರೆಗೂ ಈ ಸ್ಥಿತಿ ಮುಂದುವರಿಯಿತು. 

ಮಳೆಯಿಂದ ವಾರಾಂತ್ಯದ ವೀಕೆಂಡ್‌ ಮಂಕಾಗಿತ್ತು. ದಿನದ ಆರಂಭ ತಡವಾಗಿ ಆಯಿತು. ಮಧ್ಯಾಹ್ನದವರೆಗೂ ಹೊರಬರಲಾಗದೆ, ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ಮನೆಯೊಳಗೂ ಕುಳಿತುಕೊಳ್ಳಲಾಗದೆ ಜನ ಚಡಪಡಿಸಿದರು. ಇನ್ನು ಕೆಲವರು ರಸ್ತೆಗಿಳಿದವರಿಗೆ ಸಂಚಾರದಟ್ಟಣೆ ಎದುರಾಯಿತು. ಪ್ರಮುಖ ರಸ್ತೆಗಳಲ್ಲಿ ಗಂಟೆಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತಿದ್ದವು. 

ಈ ಮಧ್ಯೆ ಮಳೆ ನಗರದ ತಗ್ಗುಪ್ರದೇಶಗಳಲ್ಲಿರುವ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿತು. ಈ ತಿಂಗಳ ಮೊದಲ ವಾರದಲ್ಲಿ ಸುರಿದ ಮಳೆ ಅಬ್ಬರಕ್ಕೆ ಹತ್ತಾರು ಕಡೆಗಳಲ್ಲಿ ನೀರು ನುಗ್ಗಿ ಅವಾಂತರ ಸೃಷ್ಟಿಸಿತ್ತು. ನಾಲ್ವರು ಬಲಿ ಕೂಡ ಆಗಿದ್ದರು. ವಾರದ ಮಟ್ಟಿಗೆ ಬಿಡುವು ನೀಡಿದ್ದರಿಂದ ತುಸು ನಿರಾಳವಾಗಿದ್ದರು. ಇನ್ನು ಮಳೆಯಿಂದ ಯಾವುದೇ ಅನಾಹುತಗಳು, ನೀರು ನಿಂತ ಬಗ್ಗೆ ವರದಿಯಾಗಿಲ್ಲ ಎಂದು ಬಿಬಿಎಂಪಿ ನಿಯಂತ್ರಣ ಕೊಠಡಿ ಸ್ಪಷ್ಟಪಡಿಸಿದೆ. 

ಇನ್ನೂ ಎರಡು ದಿನ ಮಳೆ?
ಈ ನಡುವೆ ನಗರವು ಸೇರಿದಂತೆ ರಾಜ್ಯಾದ್ಯಂತ ಸೋಮವಾರ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಕೊಂಕಣದಿಂದ ಕೇರಳದ ನಡುವೆ ಆಫ್ಶೋರ್‌ ಟ್ರಫ್ ಉಂಟಾಗಿದ್ದರಿಂದ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನ ವ್ಯಾಪಕ ಮಳೆ ಆಗಲಿದೆ. ಅದೇ ರೀತಿ, ಕರಾವಳಿಯಲ್ಲಿ ಕೂಡ ಮೂರು ದಿನ ಮತ್ತು ಉತ್ತರ ಒಳನಾಡಿನಲ್ಲಿ ಒಂದು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕಚೇರಿ ನಿರ್ದೇಶಕ ಸುಂದರ್‌ ಎಂ. ಮೇತ್ರಿ ಮಾಹಿತಿ ನೀಡಿದ್ದಾರೆ. 

ಟಾಪ್ ನ್ಯೂಸ್

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Thalapathy 69: ರಿಲೀಸ್ ಗೂ ಮುನ್ನ ಕೋಟಿ‌ ಕೋಟಿ ಕಮಾಯಿ ಮಾಡಿದ ವಿಜಯ್ ಕೊನೆಯ ಸಿನಿಮಾ

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

Kantara: Chapter 1: ‘ಕಾಂತಾರ’ ಸೆಟ್ ಗೆ ಮರಳಿದ ರಿಷಬ್; ಮೂರನೇ ಹಂತದ ಚಿತ್ರೀಕರಣ ಶುರು

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Bengaluru: ಕಳೆದ ದೀಪಾವಳಿಗಿಂತ ಶೇ.34 ತಗ್ಗಿದ ವಾಯುಮಾಲಿನ್ಯ

Crime: ಶೀಲ ಶಂಕಿಸಿ ಪತ್ನಿ  ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

1-poli

Bengaluru; ಶೋಕಿಗಾಗಿ ಸರಗಳ್ಳತನ: 70 ಲಾರಿಗಳ ಮಾಲಿಕ ಸೆರೆ!!

rasaleele

Bengaluru; ಪ್ರತಿಷ್ಠಿತ ಆಸ್ಪತ್ರೆಯ ಮಹಿಳಾ ಶೌಚಾಲಯದಲ್ಲಿ ಮೊಬೈಲ್‌ ಅಡಗಿಸಿಟ್ಟು ವಿಡಿಯೋ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

muslim marriage

Virtual ; ಟರ್ಕಿಯಯಲ್ಲಿ ವರ, ಹಿಮಾಚಲದಲ್ಲಿ ವಧು : ಆನ್ ಲೈನ್ ನಲ್ಲೇ ನಿಖ್ಹಾ!

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Deepfake: ಇನ್ಫಿ ಮೂರ್ತಿ, ಅಂಬಾನಿ ಡೀಪ್‌ಫೇಕ್‌ ವಿಡಿಯೋ ಬಳಸಿ 82.7 ಲಕ್ಷ ರೂ. ವಂಚನೆ

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

Explainer-US Result: ಅಧ್ಯಕ್ಷ ಗಾದಿ ಯಾರಿಗೆ; ಟ್ರಂಪ್‌ ಮುನ್ನಡೆ, 7 ರಾಜ್ಯಗಳು ನಿರ್ಣಾಯಕ!

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.