ಮನೆಗೆ ನುಗ್ಗಿ ನಿದ್ದೆಗೆಡಿಸಿದ ಮಳೆ ನೀರು!
Team Udayavani, May 29, 2017, 12:49 PM IST
ಬೆಂಗಳೂರು: ನಗರದಲ್ಲಿ ಶನಿವಾರ ಸುರಿದ ಮಳೆಗೆ ನಗರದ ಹಲವು ವಸತಿ ಪ್ರದೇಶಗಳು ಜಲಾವೃತಗೊಂಡಿದ್ದು, ನೂರಾರು ಮರಗಳು ಧರೆಗುರುಳಿದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಬೊಮ್ಮನಹಳ್ಳಿ ವಲಯದ ಹಲವೆಡೆ ಶನಿವಾರ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನಾಗರಿಕರು ಇಡೀ ರಾತ್ರಿ ಜಾಗರಾಣೆ ಮಾಡುವಂತಾಯಿತು. ಕಳೆದ ವರ್ಷವೂ ಈ ಭಾಗದಲ್ಲಿ ಭಾರಿ ಮಳೆಗೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದವು. ಮತ್ತೆ ಅದೇ ಭಾಗದಲ್ಲಿ ಸಮಸ್ಯೆ ಮುಂದುವರಿದಿದ್ದು, ಜನರು ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಶನಿವಾರ ಸುರಿದ ಭಾರಿ ಮಳೆಗೆ ನಗರದಲ್ಲಿ 100ಕ್ಕೂ ಹೆಚ್ಚು ಮರ, ಕೊಂಬೆಗಳು ಧರೆಗುರುಳಿದ್ದು, ಸುಮಾರು 90ಕ್ಕೂ ಹೆಚ್ಚು ಭಾಗಗಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೆಲ ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಮುರಿದು ರಸ್ತೆಗೆ ಬಿದ್ದಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಳಿಸಲಾಗಿದೆ.
ಮಳೆಗಾಲದಲ್ಲಿ ಅನಾಹುತ ಸಂಭವಿಸುವ ಪ್ರದೇಶಗಳನ್ನು ಗುರುತಿಸಿ ಅಗತ್ಯ ಕಾಮಗಾರಿ ಕೈಗೊಂಡಿರುವುದಾಗಿ ಪಾಲಿಕೆ ಅಧಿಕಾರಿಗಳು ಹೇಳಿದ್ದರೂ, ಬಹುತೇಕ ಪ್ರದೇಶಗಳು ಅನಾಹುತಕ್ಕೆ ಒಳಗಾಗುತ್ತಿವೆ. ಜತೆಗೆ ಹೊಸ ಪ್ರದೇಶಗಳಲ್ಲೂ ನೀರು ನಿಲ್ಲುತ್ತಿರುವುದು ನಾಗರಿಕರ ಆತಂಕ ಹೆಚ್ಚಿಸಿದೆ.
ಕಳೆದ ವರ್ಷ ಅನಾಹುತಕ್ಕೆ ಒಳಗಾಗಿದ್ದ ಬೊಮ್ಮನಹಳ್ಳಿಯ ಕೋಡಿಚಿಕ್ಕನಹಳ್ಳಿಯ ಶಾಂತಿನಿಕೇತನ ಬಡಾವಣೆ, ಶ್ರೀನಿವಾಸ ಬಡಾವಣೆ ಹಾಗೂ ಡಿಯೋ ಎನ್‌ಕ್ಲೇವ್ ಬಡಾವಣೆಯಲ್ಲಿ ಶನಿವಾರ ಸುರಿದ ಮಳೆಗೆ ಮನೆಗಳಿಗೆ ನೀರು ನುಗ್ಗಿದೆ. ಜತೆಗೆ ಹೊಸಕೆರೆಹಳ್ಳಿಯ ದತ್ತಾತ್ರೇಯ ನಗರದ ನಾಲ್ಕನೇ ಮುಖ್ಯರಸ್ತೆಯಲ್ಲಿ ಭಾರಿ ಪ್ರಮಾಣದ ನೀರು ನಿಂತು ಸಾರ್ವಜನಿಕರು ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು.
ಕಾಲುವೆ ಮೇಲೆ ಕಟ್ಟಡ: ಹರಿಯದ ನೀರು
ಬೊಮ್ಮನಹಳ್ಳಿಯ ಹಲವಾರು ಭಾಗಗಳಲ್ಲಿ ಪ್ರತಿ ವರ್ಷ ಒಂದಿಲ್ಲ ಒಂದು ಪ್ರದೇಶ ಮಳೆಯಿಂದ ತೊಂದರೆಗೆ ಒಳಗಾಗುತ್ತದೆ. ಮಳೆ ಬಂದು ಮನೆಗಳಿಗೆ ನೀರು ನುಗ್ಗಿದಾಗ ಜನರು ಬಿಬಿಎಂಪಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸುತ್ತರೆ.
ಆದರೆ, ಈ ಭಾಗದ ಬಹುತೇಕ ಬಡಾವಣೆಗಳಲ್ಲಿ ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಕಟ್ಟಡಗಳನ್ನು ನಿರ್ಮಿಸಿರುವುದರಿಂದ ನೀರು ಹರಿಯಲು ಸಾಧ್ಯವಾಗುತ್ತಿಲ್ಲ. ಇದರೊಂದಿಗೆ ಕಾಲುವೆಯ ಎರಡೂ ಭಾಗಗಳಲ್ಲಿ ಜಾಗ ಬಿಡದೆ ಅಪಾರ್ಟ್‌ಮೆಂಟ್‌ಗಳನ್ನು ನಿರ್ಮಿಸಲಾಗಿದ್ದು, ಹಲವು ಕಡೆ ಕಾಲುವೆಯನ್ನು ತಿರುಗಿಸಿರುವುದರಿಂದ ನೀರು ಹಿಮ್ಮುಖವಾಗಿ ಹರಿದು ಅನಾಹುತ ಸಂಭವಿಸುತ್ತಿದೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.
ನೀರು ನುಗ್ಗಿರುವುದು ಎಲ್ಲಿ?
ಬೇಗೂರು ವಾರ್ಡ್‌ನ ವಿಶ್ವಪ್ರಿಯ ಬಡಾವಣೆಯಲ್ಲಿ ಶನಿವಾರ ರಾತ್ರಿ ಬಡಾವಣೆಯ ಮೂರು ರಸ್ತೆಗಳು ಸಂಪೂರ್ಣವಾಗಿ ಜಲಾವೃತಗೊಂಡಿದ್ದವು. ಈ ಕುರಿತು ದೂರು ನೀಡಿದರೂ ಅಧಿಕಾರಿಗಳು, ಜನಪ್ರತಿನಿಧಿಗಳು ಸಮಸ್ಯೆ ಪರಿಹರಿಸಲು ಮುಂದಾಗಲಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಇದರೊಂದಿಗೆ ಸುಬ್ರಹ್ಮಣ್ಯಪುರ, ಹೊಂಗಸಂದ್ರ, ಕೋಡಿಚಿಕ್ಕನಹಳ್ಳಿ, ಹೊಸಕೆರೆಹಳ್ಳಿಯ ದತ್ತಾತ್ರೇಯ ದೇವಸ್ಥಾನ, ಬಿಟಿಎಂ ಬಡಾವಣೆ, ಕುಮಾರಸ್ವಾಮಿ ಬಡಾವಣೆ, ಚಿಕ್ಲಲ್ಲಂದ್ರ, ವಸಂತವಲ್ಲಭನಗರ, ಎಚ್‌ಎಸ್‌ಆರ್ ಬಡಾವಣೆ ಸೇರಿದಂತೆ ಶಿವಾನಂದ ವೃತ್ತದ ರೈಲ್ವೆ ಅಂಡರ್‌ಪಾಸ್, ಶಾಂತಿನಗರ ಮೇಲ್ಸೇತುವೆ, ಸ್ಯಾಂಕಿ ರಸ್ತೆ ಅಂಡರ್ ಪಾಸ್ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ವಾಹನಗಳು ಮುಳುಗುವಷ್ಟು ಪ್ರಮಾಣದ ನೀರು ಸಂಗ್ರಹವಾಗಿತ್ತು.
ಮರ ಬಿದ್ದು ಹಲವರಿಗೆ ಗಾಯ
ಶನಿವಾರ ಮಳೆ ಅಶ್ವತ್ಥನಗರದಲ್ಲಿ ಮರ ಧರೆಗುರುಳಿದ್ದು, ಸೌಮ್ಯ ಎಂಬುವವರ ಮನೆಗೆ ಹಾನಿಯಾಗಿ, ಮನೆ ಬೀಳುವ ಸ್ಥಿತಿಯಲ್ಲಿದೆ. ಮರ ಬಿದ್ದು ದಿನ ಕಳೆದರೂ ತೆರವುಗೊಳಿಸಲು ಮುಂದಾಗದ ಪಾಲಿಕೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮನೆಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಹೆಚ್ಚಿನ ಹಾನಿಯಾಗಿಲ್ಲ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ಜೆಪಿನಗರದ ರಾಗಿಗುಡ್ಡದ ಬಳಿ ಶನಿವಾರ ಸಂಜೆ ಮಳೆಯಿಂದ ರಕ್ಷಣೆ ಪಡೆಯಲು ನಿಂತಿದ್ದ ಮಹಿಳೆಯ ಮೇಲೆ ಮರದ ಕೊಂಬೆ ಉರುಳಿದ ಪರಿಣಾಮ ಅವರ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸಂಜಯಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಿರಿನಗರದಲ್ಲಿ ಬೈಕ್ ಸವಾರನ ಮೇಲೆ ಮರ ಬಿದ್ದು ತೀವ್ರವಾಗಿ ಗೊಂಡಿರುವ ಬಗ್ಗೆ ವರದಿಯಾಗಿದೆ.
ಮೇಯರ್ ಪರಿಶೀಲನೆ
ಮಳೆಗೆ ಪ್ರವಾಹ ಪೀಡಿತವಾಗಿರುವ ಬಿಳೇಕಳ್ಳಿ, ಕೋಡಿಚಿಕ್ಕನಹಳ್ಳಿಯ ಮನೆಗಳಿಗೆ ಮೇಯರ್ ಜಿ.ಪದ್ಮಾವತಿ, ಭೇಟಿ ನೀಡಿ ಪರಿಶೀಲಿಸಿದರು. ಮನೆ, ಅಪಾರ್ಟ್‌ಮೆಂಟ್‌ಗಳಲ್ಲಿ ನಿಂತಿರುವ ಮಳೆ ನೀರನ್ನು ಪಂಪ್ ಮಾಡಿ ಹೊರಹಾಕುವಂತೆ ಅಧಿಕಾರಿಗಳಿಗೆ ಮೇಯರ್ ಸೂಚನೆ ನೀಡಿದರು. ನಂತರ ಅರಕೆರೆ, ಮಡಿವಾಳ ಕೆರೆ ಸುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದರು. ಶಾಸಕ ಸತೀಶ್ ರೆಡ್ಡಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.