ಮೋಡ ಬಿತ್ತನೆ ಕಾರ್ಯದಿಂದ ಶೇ.20ರಷ್ಟು ಹೆಚ್ಚಾದ ಮಳೆ
Team Udayavani, Oct 10, 2017, 11:21 AM IST
ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ಮೋಡ ಬಿತ್ತನೆಯ ಜವಾಬ್ದಾರಿ ವಹಿಸಿಕೊಂಡಿದ್ದ ಅಮೆರಿಕದ “ವೆದರ್ ಮಾಡಿಫಿಕೇಷನ್ ಇಂಟರ್‌ನ್ಯಾಷನಲ್’ ಸಂಸ್ಥೆಯ ಅಧ್ಯಕ್ಷ ನೀಲ್ ಬ್ರಾಕಿನ್ ಸೋಮವಾರ ವಿಧಾನಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಎಚ್.ಕೆ. ಪಾಟೀಲ್ ಅವರನ್ನು ಭೇಟಿ ಮಾಡಿ ಮೋಡ ಬಿತ್ತನೆಯ ಫಲಿತಾಂಶಗಳ ಬಗ್ಗೆ ವಿವರಣೆ ನೀಡಿದರು.
ಮೋಡ ಬಿತ್ತನೆ ಪ್ರಾರಂಭವಾದಾಗ ರಾಜ್ಯದಲ್ಲಿ ಶೇ.57 ಪ್ರಮಾಣದಷ್ಟು ಮಳೆ ಕೊರತೆ ಇತ್ತು. ಮೋಡ ಬಿತ್ತನೆಯಿಂದ ವಾತಾವರಣ ಮತ್ತು ಹವಾಮಾನ ಬದಲಾವಣೆ ಉಂಟಾಗಿ ರಾಜ್ಯದಲ್ಲಿ ಮಳೆಯ ಪ್ರಮಾಣ ಶೇ.10ರಿಂದ 20ರಷ್ಟು ಹೆಚ್ಚಳ ಕಂಡು ಬಂದಿದೆ ಎಂದು ನೀಲ್ ಬ್ರಾಕಿನ್ ಸಚಿವರಿಗೆ ಮಾಹಿತಿ ನೀಡಿದರು. ಈ ವೇಳೆ ಕರ್ನಾಟಕ ನೀರು ಮತ್ತು ನೈರ್ಮಲ್ಯ ಇಲಾಖೆಯ ಆಯುಕ್ತ ಹೆಚ್.ಪಿ. ಪ್ರಕಾಶ್ ಮತ್ತು ಮುಖ್ಯ ಇಂಜಿನಿಯರ್ ಪ್ರಕಾಶ್ ಕುಮಾರ್ ಹಾಜರಿದ್ದರು.
ಸಚಿವರ ಪ್ರಶಂಸೆ: ಮೋಡ ಬಿತ್ತನೆಯ ಪ್ರಯತ್ನಗಳಿಗೆ ಸಿಕ್ಕಿರುವ ಯಶಸ್ಸಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ಸಚಿವರು, ಮೋಡ ಬಿತ್ತನೆಗೂ ಮೊದಲು 2 ತಾಸು ಮತ್ತು ಮೋಡ ಬಿತ್ತನೆಯ ನಂತರ 2 ತಾಸು ನಿಖರವಾದ ಮಳೆಯ ಪ್ರಮಾಣವನ್ನು ಅಳತೆ ಮಾಡಲಾಗಿದೆ. ರಾಜ್ಯದ ಮೂರು ಕಡೆಗಳಲ್ಲಿ ಸ್ಥಾಪಿಸಲಾಗಿರುವ ರಡಾರ್‌ಗಳ ಮೂಲಕ ಅಂಕಿ ಅಂಶಗಳನ್ನು ಮತ್ತು ಮೋಡಗಳ ಸಾಂದ್ರತೆಯನ್ನು ನಿಖರವಾಗಿ ಪತ್ತೆಹಚ್ಚಿ, ಅವುಗಳ ಮೇಲೆ ಬಿತ್ತನೆ ಮಾಡಿದ್ದರಿಂದ ಮಳೆ ಪ್ರಮಾಣ ಹೆಚ್ಚಳಕ್ಕೆ ಸಹಕಾರಿಯಾಗಿದೆ.
ಮೋಡ ಬಿತ್ತನೆಯ 24 ಗಂಟೆಗಳ ನಂತರವೂ ನೈಸರ್ಗಿಕವಾದ ಯಾವುದೇ ಕಾರಣ ಇಲ್ಲದೇ ಮಳೆ ಆಗಿರುವ ದಾಖಲೆ ಇದೆ. ಇತ್ತಿಚಿನ ದಿನಗಳಲ್ಲಿ ರಾತ್ರಿ ವೇಳೆ ಮಳೆ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಬಿತ್ತನೆಗೆ ಯೋಗ್ಯವಾಗಿರುವ ಮೋಡಗಳ ಲಭ್ಯತೆ ರಾತ್ರಿಯೂ ಇರುವುದರಿಂದ ರಾತ್ರಿ ಹೊತ್ತು ಮೋಡ ಬಿತ್ತನೆಗೆ ತಾಂತ್ರಿಕ ಪ್ರಯೋಗ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.