ಮಳೆ ಇಳಿಮುಖವಾಗುವ ಸಾಧ್ಯತೆ
Team Udayavani, Aug 21, 2018, 6:15 AM IST
ಬೆಂಗಳೂರು: ಕೆಲದಿನಗಳಿಂದ ಅವಾಂತರ ಸೃಷ್ಟಿಸಿರುವ ಮಳೆ ಅಬ್ಬರ ಕೊಂಚತಗ್ಗಿದ್ದು, ಮುಂದಿನ 3 -4 ದಿನಗಳಲ್ಲಿ ಇಳಿಮುಖವಾಗುವ ಸಾಧ್ಯತೆಯಿದೆ.
ಈ ಮೊದಲು ಬಂಗಾಳಕೊಲ್ಲಿಯ ವಾಯವ್ಯದಲ್ಲಿ ಆ.20ರಂದು ವಾಯುಭಾರ ಕುಸಿತ ಉಂಟಾಗಲಿದ್ದು, ಇದರಿಂದ ಮತ್ತಷ್ಟು ಮಳೆ ಆಗಲಿದೆ ಎಂಬ ಮುನ್ಸೂಚನೆ ಇತ್ತು. ಈಗ ಅದು ಒಡಿಶಾದಿಂದ ಮಧ್ಯಪ್ರದೇಶದತ್ತ ಮುಖಮಾಡಿದೆ. ಹಾಗಾಗಿ, ಮಳೆ ಸಾಧ್ಯತೆ ಗಳು ಕಡಿಮೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಘಟ್ಟಪ್ರದೇಶ ಮತ್ತು ಕರಾವಳಿಯಲ್ಲಿ ಆಯ್ದ ಭಾಗಗಳಲ್ಲಿ ಮಾತ್ರ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ. ಮೂರ್‍ನಾಲ್ಕು ದಿನಗಳಿಗೆ ಹೋಲಿಸಿದರೆ, ಇದರ ಪ್ರಮಾಣ ಕಡಿಮೆ ಇರಲಿದೆ. ಆದರೆ, ಉತ್ತರ ಒಳನಾಡಿನ ಬೀದರ್,ಬಾಗಲಕೋಟೆ, ವಿಜಯಪುರ ಸುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.
ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 3 ದಿನಗಳು ಚದುರಿದಂತೆ ಮಳೆಯಾಗಲಿದ್ದು, ಕೆಲವೆಡೆ ಮಾತ್ರ ವ್ಯಾಪಕ ಮಳೆ ಬೀಳಲಿದೆ. ಈ ಮಧ್ಯೆ ಮಡಿಕೇರಿಯಲ್ಲಿ ಸೋಮವಾರ ಬೆಳಿಗ್ಗೆ 90 ಮಿ.ಮೀ. ಮಳೆ ದಾಖಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಅಬ್ಬರ ಕಡಿಮೆಯಾಗಿದ್ದರೂ,ಕೆಲವೆಡೆ ಮಳೆಯಿಂದಾಗಿ ಸೋಮವಾರವೂ ಹಾನಿಯುಂಟಾಗಿದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿದ್ದ ಮಳೆ ಸೋಮವಾರ ಇಳಿಮುಖವಾಗಿದೆ.
ಕೊಪ್ಪ ತಾಲೂಕಿನ ಬಂಡಿಗಡಿ ಸಮೀಪದ ಈಚಲಬೈಲ್ ಗ್ರಾಮದಲ್ಲಿ ಭೂಕುಸಿತವುಂಟಾಗಿ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಹಾಗೂ 4 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಟ್ರಾನ್ಸ್‌ಫಾರ್ಮರ್ ಬಿದ್ದಿರುವುದರಿಂದಾಗಿ ಈ ಭಾಗದ 4 ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಈ ಮಧ್ಯೆ ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಹೀಗಾಗಿ ಗಡಿ ಭಾಗದ ನದಿಗಳು ಭೋರ್ಗರೆಯುತ್ತಿದ್ದು, ಇದೇ ರೀತಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡು ಬರುತ್ತಿದ್ದರೆ ಪ್ರವಾಹ ಎದುರಾಗುವ ಸಾಧ್ಯತೆ ಹೆಚ್ಚಾಗಿದೆ.
ಈಗಾಗಲೇ ಮಹಾರಾಷ್ಟ್ರದ ವಿವಿಧ ಜಲಾಶಯಗಳು ಕಳೆದ ಒಂದು ವಾರದ ಹಿಂದೆ ಭರ್ತಿಯಾಗಿವೆ. ಹೆಚ್ಚುವರಿ ನೀರನ್ನು ನದಿಗಳಿಗೆ ಹರಿಯ ಬಿಟ್ಟಿದ್ದರಿಂದ ಚಿಕ್ಕೋಡಿ ಉಪವಿಭಾಗದಲ್ಲಿ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಕೃಷ್ಣಾ, ದೂಧಗಂಗಾ ಮತ್ತು ವೇದಗಂಗಾ ನದಿ ನೀರಿನ ಮಟ್ಟದಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
MUST WATCH
ಹೊಸ ಸೇರ್ಪಡೆ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.