ಪ್ರಜೆಗಳಿಗೆ ರಾಜಭವನ ಮುಕ್ತ


Team Udayavani, Aug 17, 2018, 6:15 AM IST

16bnp-24.jpg

ಬೆಂಗಳೂರು: ಹದಿನೈದು ದಿನಗಳ ಮಟ್ಟಿಗೆ “ಪ್ರಜೆ’ಗಳಿಗೆ “ರಾಜ’ಭವನ ಮುಕ್ತವಾಗಲಿದೆ. ಹೌದು! ಆ.16ರಿಂದ 31ರವರೆಗೆ ರಾಜಭವನಕ್ಕೆ ಭೇಟಿ ನೀಡಲು ಸಾರ್ವಜನಿಕರಿಗೆ ಮುಕ್ತ ಅವಕಾಶ ಮಾಡಿಕೊಡಲಾಗಿದೆ.

ರಾಜ್ಯ ಸರ್ಕಾರದ ಸಂವಿಧಾನ ಮುಖ್ಯಸ್ಥರಾದ ರಾಜ್ಯಪಾಲರ ಕಾರ್ಯ ಮತ್ತು ಆವಾಸ ಸ್ಥಾನ ಆಗಿರುವ ರಾಜಭವನ “ಹೈ ಸೆಕ್ಯೂರಿಟಿ’ ಪ್ರದೇಶಗಳಲ್ಲೊಂದು. ಸಾರ್ವಜನಿಕರ ಪ್ರವೇಶ, ಭೇಟಿ ಮತ್ತು ಸಂದರ್ಶನಕ್ಕೆ ಇಲ್ಲಿ ಮುಕ್ತ ಅವಕಾಶ ಇರುವುದಿಲ್ಲ.
ಆದರೆ, ಸಾಮಾನ್ಯ ಜನರಲ್ಲಿ ರಾಜಭವನದ ಕುರಿತು ಇರುವ ಕುತೂಹಲ ತಣಿಸಲು, ಶತಮಾನಕ್ಕೂ ಹೆಚ್ಚು ಇತಿಹಾಸವಿರುವ ಈ ರಾಜಭವನ ಎಂಬ ಪಾರಂಪರಿಕ ಕಟ್ಟಡ ವೈಭವ ಕಣ್ಣಾರೆ ಕಂಡು ಸಂಭ್ರಮಪಟ್ಟುಕೊಳ್ಳಲು ಅವಕಾಶ ಮಾಡಿಕೊಡಲು ಈಗಿನ ರಾಜ್ಯಪಾಲ ವಜುಭಾಯಿ ವಾಲಾ ಮುಂದಾಗಿದ್ದಾರೆ. ಕೆಲವು ವಿಶೇಷ ಸಂದರ್ಭಗಳನ್ನು ಹೊರತುಪಡಿಸಿ, ಸಾರ್ವಜನಿಕ ಪ್ರವೇಶಕ್ಕೆ ಮುಕ್ತ ಅವಕಾಶ ಮಾಡಿಕೊಡುತ್ತಿರುವುದು ರಾಜಭವನದ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದೆ.

ಗುರುವಾರ ರಾಜಭವನದ ಗಾಜಿನಮನೆಯಲ್ಲಿ ವಿಶೇಷ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯಪಾಲ ವಜುಭಾಯಿ ವಾಲಾ, ರಾಜಭವನ ದರ್ಶನಕ್ಕೆ ಹದಿನೈದು ದಿನಗಳ ಸಾರ್ವಜನಿಕರಿಗೆ ಮುಕ್ತ ಅವಕಾಶ ಮಾಡಿಕೊಡಲಾಗುತ್ತಿದೆ. ಇದೊಂದು ವಿನೂತನ ಪ್ರಯತ್ನವಾಗಿದ್ದು, ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಬೆಂಗಳೂರಿನಗ ನಾಗರಿಕರಲ್ಲಿ ಮನವಿ ಮಾಡಿದರು.

ಆ.16ರಿಂದ 31ರವರೆಗೆ ಒಟ್ಟು 15 ದಿನಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಇರಲಿದೆ. ಈ ಅವಧಿಯಲ್ಲಿ ಸಂಜೆ 4ರಿಂದ 7.30ರ ತನಕ ರಾಜಭವನಕ್ಕೆ ಭೇಟಿ ಕೊಡಬಹುದು. ಆನ್‌ಲೈನ್‌ನಲ್ಲಿ ನೊಂದಾಯಿಸಿಕೊಂಡವರ ಪೈಕಿ ಪ್ರತಿ ದಿನ 350ರಿಂದ 400 ಮಂದಿಗೆ ಮಾತ್ರ ಅವಕಾಶ ಮಾಡಿಕೊಡಲಾಗುವುದು. 20 ಮಂದಿಯ ಒಂದು ಗುಂಪು ಮಾಡಿ ಇಡೀ ರಾಜಭವನ ಸುತ್ತಾಡಿಸಲಾಗುವುದು. ಇದಕ್ಕಾಗಿ ಮಾಗದರ್ಶಕರನ್ನು (ಗೈಡ್‌) ನೇಮಕ ಮಾಡಲಾಗಿದೆ. ಜನರಿಂದ ಬೇಡಿಕೆ ವ್ಯಕ್ತವಾದರೆ ಭೇಟಿಯ ದಿನಗಳನ್ನು ವಿಸ್ತರಿಸುವ ಬಗ್ಗೆ ಚಿಂತಿಸಲಾಗುವುದು. ಜತೆಗೆ ಸದ್ಯ ವರ್ಷದಲ್ಲಿ ಒಂದು ಬಾರಿ ಈ ಅವಕಾಶ ಮಾಡಿಕೊಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಅವಶ್ಯಕತೆ ಕಂಡು ಬಂದಲ್ಲಿ ವರ್ಷದಲ್ಲಿ 2 ಬಾರಿ ಈ ರೀತಿಯ ವ್ಯವಸ್ಥೆ ಮಾಡಲು ರಾಜಭವನ ಸಿದ್ಧವಿದೆ ಎಂದು ವಾಲಾ ತಿಳಿಸಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Pro Kabaddi League: ಬೆಂಗಾಲ್‌ ವಾರಿಯರ್ ಮೇಲೆ ಪುಣೇರಿ ಪಲ್ಟಾನ್‌ ಸವಾರಿ

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿ‌ಮ ಬಂಗಾಲ ಗವರ್ನರ್‌

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್‌: ನದಿಗೆ ಬಿದ್ದು ಮೂವರ ಸಾವು

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewew

ಸಂಗೀತ ವಿವಿಯಲ್ಲಿ ಕೋರ್ಸ್‌ ಆರಂಭ: ಕುಲಪತಿ ನಾಗೇಶ್‌

CT RAVI 2

C T Ravi; ಸನಾತನ ಧರ್ಮ ಉಳಿದರೆ ದೇಶದ ಉಳಿವು

Darshan (3)

Renukaswamy ಹ*ತ್ಯೆ ಸ್ಥಳದಲ್ಲಿ ದರ್ಶನ್‌ ಇದ್ದ ಚಿತ್ರ ಲಭ್ಯ: ಪರಂ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

police

Gangolli: ಕ್ರಿಮಿನಲ್‌ ಹಿನ್ನೆಲೆ: ಮೂವರ ಮೇಲೆ ಪ್ರಕರಣ ದಾಖಲು

theft-temple

Koteshwara: ಶೋ ರೂಮ್‌ನಲ್ಲಿ ಕಳವಿಗೆ ಯತ್ನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

police

Udupi: ಆದಿ ಉಡುಪಿ: ಜುಗಾರಿ ಅಡ್ಡೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.