ರಾಜಧಾನಿಯಲ್ಲಿ ರಾಜವರ್ಧನ್
Team Udayavani, Jun 15, 2018, 11:48 AM IST
ಬೆಂಗಳೂರು: “ಬೆಂಬಲಕ್ಕಾಗಿ ಜನಸಂಪರ್ಕ’ ಅಭಿಯಾನದಡಿ ಕೇಂದ್ರ ವಾರ್ತಾ ಮತ್ತು ಪ್ರಸಾರ, ಕ್ರೀಡಾ ಹಾಗೂ ಯುವಜನ ಸೇವಾ ಸಚಿವ ರಾಜವರ್ಧನ್ ಸಿಂಗ್ ರಾಥೋಡ್ ಗುರುವಾರ ನಗರದ ವಿವಿಧ ಗಣ್ಯರನ್ನು ಭೇಟಿ ಮಾಡಿ, ಸರ್ಕಾರದ ಸಾಧನೆಗಳ ಕುರಿತು ಚರ್ಚಿಸಿದರು.
ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ, ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂಂದಾರ್ ಷಾ, ಐಐಎಂಬಿ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳನ್ನು ಭೇಟಿ ಮಾಡಿದ ರಾಜವರ್ಧನ್ ಸಿಂಗ್ ರಾಥೋಡ್, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಾದ ಸರ್ಕಾರದ ಸಾಧನೆಗಳ ವಿವರಗಳನ್ನು ಒಳಗೊಂಡ ಪುಸ್ತಕವನ್ನು ನೀಡಿದರು.
ನಂತರ ಕೆಲಹೊತ್ತು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಲಹೆಗಳನ್ನು ಕೂಡ ಪಡೆದರು. ಅಷ್ಟೇ ಅಲ್ಲ, ಐಐಎಂಬಿಯಲ್ಲಿ ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಿದ ಕೇಂದ್ರ ಸಚಿವರು, ಬಾಸ್ಕೆಟ್ ಬಾಲ್ ಆಟವಾಡಿ, ವಿದ್ಯಾರ್ಥಿಗಳ ಮನಗೆದ್ದರು. ಇದೇ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ-ಅಫ್ಘಾನಿಸ್ತಾನ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ ಪ್ರಧಾನಿ ಸಂದೇಶ ಓದುವ ಮೂಲಕ ಉಭಯ ತಂಡಗಳಿಗೆ ಶುಭ ಹಾರೈಸಿದರು.
ಕೇಂದ್ರ ಸರ್ಕಾರ ನಾಲ್ಕು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ “ಬೆಂಬಲಕ್ಕಾಗಿ ಜನಸಂಪರ್ಕ’ ಅಭಿಯಾನ ಹಮ್ಮಿಕೊಂಡಿದ್ದು, ಇದರಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಆಡಳಿತದ ಮತ್ತು ನಾಲ್ಕು ವರ್ಷದ ಸಾಧನೆಯ ವಿವರಗಳನ್ನು ಒಳಗೊಂಡ ಪುಸ್ತಕಗಳನ್ನು ಗಣ್ಯರಿಗೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.