ಗುರುತಿನ ಚೀಟಿ ಪ್ರಕರಣ: ಮುನಿರತ್ನಗೆ ಜಾಮೀನು
Team Udayavani, May 15, 2018, 6:45 AM IST
ಬೆಂಗಳೂರು: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಮತದಾರ ಗುರುತಿನ ಚೀಟಿಗಳನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪ್ರಕರಣದ ಆರೋಪಿಯಾಗಿರುವ ಶಾಸಕ ಮುನಿರತ್ನಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ 14ನೇ ಆರೋಪಿಯಾಗಿರುವ ಮುನಿರತ್ನ ಸೋಮವಾರ ಎಸಿಎಂಎಂ ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ನೀಡುವಂತೆ ಮನವಿ ಮಾಡಿದರು. ಮುನಿರತ್ನ ಪರ ವಕೀಲರು ಹಾಗೂ ಸರಕಾರಿ ವಕೀಲರ ವಾದ -ಪ್ರತಿವಾದ ಆಲಿಸಿದ ನ್ಯಾಯಾಲಯ, ತನಿಖೆಗೆ ಸಹಕರಿಸಬೇಕು, ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಿ ಜಾಮೀನು ಮಂಜೂರು ಮಾಡಿತು.
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಾಲಹಳ್ಳಿಯ ಎಸ್‌ಎಲ್‌ವಿ ಅಪಾರ್ಟ್‌ಮೆಂಟ್‌ನಲ್ಲಿ ಅಕ್ರಮವಾಗಿ 9,564 ಮತದಾರ ಚೀಟಿಗಳನ್ನು ಸಂಗ್ರಹಿಸಿದ್ದ ಆರೋಪ ಸಂಬಂಧ 14 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿರುವ ಜಾಲಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯೂ ಆಗಿದ್ದ ಮುನಿರತ್ನ ಅವರನ್ನು 14ನೇ ಆರೋಪಿಯನ್ನಾಗಿ ಪರಿಗಣಿಸಿದ್ದಾರೆ. ಈ ಪ್ರಕರಣ ಹಿನ್ನೆಲೆಯಲ್ಲಿ ಆರ್.ಆರ್ ನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಮತದಾನವನ್ನು ಮೇ 28ಕ್ಕೆ ಮುಂದೂಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
MUST WATCH
ಹೊಸ ಸೇರ್ಪಡೆ
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.