ಮತ್ತೆ ಮಾರಾಮಾರಿ! ಒಕ್ಕಲಿಗರ ಸಂಘದ ಅಧ್ಯಕ್ಷ ಅಪ್ಪಾಜಿ ಗೌಡ ಪದಚ್ಯುತಿ
Team Udayavani, Jan 6, 2017, 3:21 PM IST
ಬೆಂಗಳೂರು:ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಡಾ.ಅಪ್ಪಾಜಿ ಗೌಡ ಅವರನ್ನು ಅಪ್ಪಾಜಿ ಗೌಡ ವಿರೋಧಿ ಬಣ ಅವಿಶ್ವಾಸ ನಿರ್ಣಯ ಮಂಡಿಸುವ ಮೂಲಕ ಪದಚ್ಯುತಿಗೊಳಿಸಿದೆ. ಇದರಿಂದಾಗಿ ರಾಜ್ಯ ಒಕ್ಕಲಿಗರ ಸಂಘದ ಜಟಾಪಟಿ ಮತ್ತಷ್ಟು ರಾದ್ಧಾಂತಕ್ಕೆ ನಾಂದಿ ಹಾಡಿದೆ.
ಇಲ್ಲಿನ ಕಿಮ್ಸ್ ಆಸ್ಪತ್ರೆ ಆವರಣದಲ್ಲಿರುವ ಒಕ್ಕಲಿಗರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಅಪ್ಪಾಜಿ ಗೌಡ ಅವರ ವಿರೋಧಿ ಬಣ ಅವಿಶ್ವಾಸ ನಿರ್ಣಯ ಮಂಡಿಸಿದೆ. ಈ ಸಂದರ್ಭದಲ್ಲಿ ಅಪ್ಪಾಜಿ ಗೌಡ ಪರ ಮತ್ತು ವಿರೋಧಿ ಬಣದ ನಡುವೆ ಹೊಡೆದಾಟ ನಡೆದಿರುವುದಾಗಿ ಮಾಧ್ಯಮದ ವರದಿ ಹೇಳಿದೆ.
ಒಕ್ಕಲಿಗರ ಸಂಘದ ಅಧ್ಯಕ್ಷ ಸ್ಥಾನದಿಂದ ಅಪ್ಪಾಜಿ ಗೌಡ ಅವರನ್ನು ಪದಚ್ಯುತಗೊಳಿಸುವ ಅವಿಶ್ವಾಸ ನಿರ್ಣಯದ ಪರವಾಗಿ 18 ಮಂದಿ ಕಾರ್ಯಕಾರಿಣಿ ಸಮಿತಿ ನಿರ್ದೇಶಕರು ಸಹಿ ಹಾಕಿದ್ದಾರೆ. ರಿಜಿಸ್ಟ್ರಾರ್ ಬಸವಯ್ಯ ನೇತೃತ್ವದಲ್ಲಿ ಪದಚ್ಯುತಿ ನಿರ್ಧಾರ ಕೈಗೊಂಡಿರುವುದಾಗಿ ವರದಿ ತಿಳಿಸಿದೆ.
ಜನವರಿ 18ರಂದು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಲಿದೆ ಎಂದು ಮೂಲಗಳು ಹೇಳಿವೆ. ಕಳೆದ ವರ್ಷ ಜುಲೈ ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳ ಆಯ್ಕೆಗೆ ನಡೆದಿದ್ದ ಚುನಾವಣೆಯಲ್ಲಿ ಡಾ.ಅಪ್ಪಾಜಿ ಗೌಡ ಅವರು ಅಧ್ಯಕ್ಷರಾಗಿ ಅವಿರೋಧವಾಗಿ ಪುನರಾಯ್ಕೆಗೊಂಡಿದ್ದರು ಎಂಬುದು ಗಮನಾರ್ಹ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
IPL : ಸಿಎಸ್‌ಕೆ ಮಾಲಿಕ ಶ್ರೀನಿವಾಸನ್ ವಿರುದ್ದ ಫಿಕ್ಸಿಂಗ್ ಆರೋಪ ಮಾಡಿದ ಲಲಿತ್ ಮೋದಿ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.