“ಪಪ್ಪುಸಿ’ ಖ್ಯಾತಿಯ ನಟ ರಾಕೇಶ್ ನಿಧನ
Team Udayavani, Oct 3, 2017, 11:59 AM IST
ಬೆಂಗಳೂರು: ಸ್ಯಾಂಡಲ್ವುಡ್ ನಟ, “ಚೆಲುವಿನ ಚಿತ್ತಾರ’ ಚಿತ್ರದ “ಬುಲ್ಲಿ’ ಪಾತ್ರದಲ್ಲಿ ನಟಿಸಿ ಅಪಾರ ಜನಮನ್ನಣೆ ಗಳಿಸಿದ್ದ ರಾಕೇಶ್ (21) ಅನಾರೋಗ್ಯದಿಂದ ಅಕಾಲಿಕವಾಗಿ ಸಾವಿಗೀಡಾಗಿದ್ದಾರೆ. ಗ್ಯಾಂಗ್ರೀನ್ ಸಮಸ್ಯೆಯಿಂದ ಬಳಲುತ್ತಿದ್ದ ನಟ ರಾಕೇಶ್, ಕಳೆದ ಎರಡು ತಿಂಗಳ ಹಿಂದಷ್ಟೇ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಇತ್ತೀಚೆಗೆ ಕೋರಮಂಗಲದ ಸೇಂಟ್ ಜಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು.
ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಸೋಮವಾರ ಸಂಜೆ 7.30ರ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ. ರಾಜೇಶ್ ಸಾವಿಗೆ ಚಿತ್ರರಂಗದ ಗಣ್ಯರು, ಕಲಾವಿದರು, ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ. ಮೂಡಲಪಾಳ್ಯದ ನಿವಾಸಿಯಾಗಿದ್ದ ರಾಜೇಶ್ರ ತಾಯಿ ಆಶಾರಾಣಿ ಕೂಡ ನಟಿಯಾಗಿದ್ದು, ಕುಟುಂಬ ವರ್ಗಕ್ಕೆ ಮೊದಲಿನಿಂದಲೂ ಚಿತ್ರರಂಗದ ನಂಟಿತ್ತು.
ಎಸ್. ನಾರಾಯಣ್ ನಿರ್ದೇಶನದ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಬಾಲನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಾಜೇಶ್, ಬುಲ್ಲಿ ಪಾತ್ರದ ಮೂಲಕ ಮನೆಮಾತಾಗಿದ್ದರು. ಅವರ “ಪಪ್ಪುಸಿ’ (ಪೆಪ್ಸಿ) ಡೈಲಾಗ್ಗೆ ಚಿತ್ರರಸಿಕರು ಮನಸೂತಿದ್ದರು.
ಇದಾದ ಬಳಿಕ ಶಿವರಾಜ್ ಕುಮಾರ್ ನಟನೆಯ “ಭಜರಂಗಿ’, “ಬಂಧುಬಳಗ’, ದರ್ಶನ್ ಅಭಿನಯದ “ಅಭಯ್’, “ಅರ್ಜುನ್’, ಪುನೀತ್ ರಾಜ್ಕುಮಾರ್ ಅಭಿನಯದ “ಹುಡುಗರು’, ಇದಲ್ಲದೆ “ಮೊದಲಾಸಲ’, “ಜಾನಿ ಮೇರಾನಾಮ್’, “ಅಕ್ಕ ತಂಗಿ’, “ಪ್ರೇಮ್ ಕಹಾನಿ’, “ಕೃಷ್ಣನ್ ಲವ್ ಸ್ಟೋರಿ’ ಸೇರಿದಂತೆ 45ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ರಾಕೇಶ್ ನಟಿಸಿದ್ದರು.
ಅಲ್ಲದೆ ಮೊದಲ ಬಾರಿ “ಧೂಮಪಾನ’ ಹೆಸರಿನ ಚಿತ್ರದಲ್ಲಿ ನಾಯಕನಟನಾಗಿ ನಟಿಸಿದ್ದರು. ಮಂಗಳವಾರ ಮೂಡಲಪಾಳ್ಯದ ನಿವಾಸದ ಬಳಿ ರಾಕೇಶ್ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇರಿಸಿ, ಆ ಬಳಿಕ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ರಾಕೇಶ್ರ ಕುಟುಂಬದ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ
Bengaluru: ರೋಡ್ ರೇಜ್: ಕಾರಿನ ಬಾನೆಟ್ ಮೇಲೆ ಹತ್ತಿ ಯುವಕರ ಪುಂಡಾಟ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Alcohol: ಬಿಯರ್ ದರ ಏರಿಕೆ ಚರ್ಚೆ ಹಂತದಲ್ಲಿದೆ: ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು
Bantwal: ಕಾಂಟ್ರಾಕ್ಟ್ ಕ್ಯಾರೇಜ್ ಬಸ್ ಪ್ರಯಾಣ ದರ ಏರಿಕೆ
Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು
Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.