ರಾಮಚಂದ್ರ ಸ್ವಾಮಿ ಬ್ರಹ್ಮರಥೋತ್ಸವ
Team Udayavani, Apr 11, 2019, 6:43 AM IST
ಕೆಂಗೇರಿ: ಇಲ್ಲಿನ ರಾಮೋಹಳ್ಳಿಯ ಇತಿಹಾಸ ಪ್ರಸಿದ್ಧ ಶ್ರೀರಾಮಚಂದ್ರ ಸ್ವಾಮಿಯ ಬ್ರಹ್ಮರಥೋತ್ಸವ ಬುಧವಾರ ವೈಭವದಿಂದ ನಡೆಯಿತು.
ಮಧ್ವ ನಾರಾಯಣಾಶ್ರಮದ ಶ್ರೀ ವಿಶ್ವಭೂಷಣ ತೀರ್ಥ ಸ್ವಾಮಿಜಿ, ಮಧ್ಯಾಹ್ನ 1.35ಕ್ಕೆ ಸರಿಯಾಗಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಶಾಸಕ ಎಸ್.ಟಿ.ಸೋಮಶೇಖರ್, ರಾಮೋಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ವಿ.ವೇಣುಗೋಪಾಲ್, ಪಂಚಾಯಿತಿ ಅಧ್ಯಕ್ಷೆ ರೂಪಾ ವೇಣುಗೋಪಾಲ್, ಉಪಾಧ್ಯಕ್ಷ ಮಹೇಶ್, ಮಾಜಿ ಉಪಾಧ್ಯಕ್ಷ ಪ್ರಭು, ಚೇತನ್‌ಗೌಡ, ರಾಕೇಶ್‌ಗೌಡ ಮತ್ತಿತರರು ಭಾಗವಹಿಸಿದ್ದರು.
ಇದೇ ವೇಳೆ ನಡೆದ ಜಾನಪದ ಜಾತ್ರೆಯಲ್ಲಿ ವೀರಗಾಸೆ, ಡೊಳ್ಳು ಕುಣಿತ, ನಂದಿ ಧ್ವಜ, ಚಿಟಾಣಿ ಬೊಂಬೆ, ನಾದಸ್ವರ ಕಲಾವಿದರ ತಂಡಗಳು ಗಮನಸೆಳೇದರು. ದೇವಾಲಯದಿಂದ ಆರಂಭವಾದ ರಥೋತ್ಸವ, ಗ್ರಾಮದ ಪ್ರಮುಖ ಬೀದಿಯಲ್ಲಿ ಸಾಗಿ ಬಸ್ ನಿಲ್ದಾಣದ ಸಮೀಪ ಕೊನೆಗೊಂಡಿತು.
ಬ್ರಹ್ಮರಥೋತ್ಸವದ ಅಂಗವಾಗಿ ಒಂಬತ್ತು ದಿನಗಳ ಕಾಲ ಗಜೇಂದ್ರಮೋಕ್ಷ, ಕಲ್ಯಾಣೋತ್ಸವ, ಶೇಷವಾಹನೋತ್ಸವ, ವಸಂತೋತ್ಸವ, ಉಯ್ನಾಲೆ ಉತ್ಸವ, ಅಶ್ವಾರೋಹಣೋತ್ಸವ, ಗರುಡೋತ್ಸವ, ಹನುಮಂತೋತ್ಸವ ಮತ್ತು ಶಯನೋತ್ಸವಗಳು ನಡೆದವು. ವಿ.ವೇಣುಗೋಪಾಲ್ ನೇತೃತ್ವದಲ್ಲಿ ಭಕ್ತರಿಗೆ ಅನ್ನದಾಸೋಹದ ವ್ಯವಸ್ಥೆ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.