ರಾಮಕೃಷ್ಣ ಸೇವಾಶ್ರಮಕ್ಕೆ ಐದು ಜನೌಷಧ ಕೇಂದ್ರ
Team Udayavani, Aug 27, 2018, 12:38 PM IST
ಬೆಂಗಳೂರು: ತುಮಕೂರು ಜಿಲ್ಲೆ ಪಾವಗಡದ ಶ್ರೀ ರಾಮಕೃಷ್ಣ ಸೇವಾಶ್ರಮಕ್ಕೆ ಐದು ಜನೌಷಧ ಕೇಂದ್ರಗಳನ್ನು ಮಂಜೂರು ಮಾಡುವುದಾಗಿ ಕೇಂದ್ರ ಸಚಿವ ಅನಂತಕುಮಾರ್ ಘೋಷಿಸಿದ್ದಾರೆ. ನಗರದ ವಾಸವಿ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಾವಗಡದ ಶ್ರೀರಾಮಕೃಷ್ಣ ಸೇವಾಶ್ರಮದ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸೇವಾಶ್ರಮ ಹಿಂದುಳಿದ ಪ್ರದೇಶಗಳಲ್ಲಿ ಗ್ರಾಮೀಣ ಬಡ ಜನರಿಗೆ ಆರೋಗ್ಯ ಸೇವೆಗಳನ್ನು ನೀಡುತ್ತಿರುವುದನ್ನು ಪರಿಗಣಿಸಿ ಕೇಂದ್ರ ಸರ್ಕಾರದ ಐದು ಜನೌಷಧ ಕೇಂದ್ರಗಳನ್ನು ಮಂಜೂರು ಮಾಡುತ್ತಿದೆ ಎಂದು ಹೇಳಿದರು.
ಪಾವಗಡ ತಾಲೂಕಿನ ಪ್ರತಿ ಹೋಬಳಿ ಈ ಜನೌಷಧ ಕೇಂದ್ರಗಳನ್ನು ತೆರೆಯಲು ರಾಮಕೃಷ್ಣ ಸೇವಾಶ್ರಮದ ಜತೆ ಒಂದು ತಿಂಗಳಲ್ಲಿ ಒಪ್ಪಂದ ಮಾಡಿಕೊಳ್ಳಲಾಗುವುದು. ಈ ಮಳಿಗೆಗಳ ಒಳಾಂಗಣ ವಿನ್ಯಾಸಕ್ಕೆ ತಗಲುವ ವೆಚ್ಚ ಮತ್ತು ಮುಂಗಡವಾಗಿ ಔಷಧಗಳ ಪೂರೈಕೆಯನ್ನು ಕೇಂದ್ರ ಸರ್ಕಾರವೇ ಮಾಡಲಿದೆ ಎಂದು ತಿಳಿಸಿದರು.
ರಾಮಕೃಷ್ಣ ಸೇವಾಶ್ರಮದ ಸೇವೆ ಜನಜನಿತ. ಪಾವಗಡದಂತಹ ಹಿಂದುಳಿದ ಪ್ರದೇಶದಲ್ಲಿ ಆರೋಗ್ಯ ಕೇಂದ್ರಗಳನ್ನು ತೆರೆದು ಗ್ರಾಮೀಣ ಜನರಿಗೆ ಸೇವೆ ಒದಗಿಸುತ್ತಿರುವ ಸೇವಾಶ್ರಮದ ಕಾರ್ಯ ಇತರರಿಗೂ ಮಾದರಿ. ಅದರಲ್ಲೂ ಮುಖ್ಯವಾಗಿ ಕುಷ್ಟರೋಗಿ, ಕ್ಷಯ ರೋಗಿಗಳ ಸೇವೆಯಲ್ಲಿ ತೊಡಗಿರುವ ಸೇವಾಶ್ರಮದ ಕಾರ್ಯ ಶ್ಲಾಘನೀಯ. ಬಡವರಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗಬೇಕು ಎಂಬ ಉದ್ದೇಶದಿಂದ ಕೇಂದ್ರ ಸರ್ಕಾರ ಜನೌಷಧಿ ಮಳಿಗೆಗಳನ್ನು ತೆರೆಯುತ್ತಿದೆ.
ಇದೇ ವೇಳೆ ಕೇರಳ ರಾಜ್ಯ ಮತ್ತು ಕೊಡಗು ಜಿಲ್ಲೆಯ ನೆರೆ ಸಂತ್ರಸ್ತರಿಗೆ ಮಠದ ವತಿಯಿಂದ ತಲಾ 10 ಲಕ್ಷ ರೂ. ನೆರವು ನೀಡುವುದಾಗಿ ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಘೋಷಿಸಿದರು. ಸುಪ್ರೀಂಕೊರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಂ.ಎನ್.ವೆಂಕಟಾಚಲಯ್ಯ, ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದಜೀ ಮಹಾರಾಜ್, ಶಾಸಕ ಎಲ್.ಎ.ರವಿಸುಬ್ರಮಣ್ಯ, ಬೈಲೂರಿನ ಶ್ರೀ ರಾಮಕೃಷ್ಣ ಆಶ್ರಮದ ಅಧ್ಯಕ್ಷ ಸ್ವಾಮಿ ವಿನಾಯಕಾನಂದಜೀ ಮಹಾರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.