ಸಂಪುಟ ವಿಸ್ತರಣೆ ಮುಂದೂಡಿಕೆಗೆ ರಾಮಲಿಂಗಾ ರೆಡ್ಡಿ ಅಸಮಾಧಾನ
Team Udayavani, Dec 7, 2018, 6:30 AM IST
ಬೆಂಗಳೂರು:ರಾಜ್ಯ ಸಚಿವ ಸಂಪುಟ ವಿಸ್ತರಣೆಯ ದಿನಾಂಕವನ್ನು ಮೇಲಿಂದ ಮೇಲೆ ಮುಂದೂಡುತ್ತಿರುವುದಕ್ಕೆ ಕಾಂಗ್ರೆಸ್ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಹೈ ಕಮಾಂಡ್ ನಾಯಕರ ವಿರುದ್ಧ ಆಸಮಾಧಾನ ಹೊರ ಹಾಕಿದ್ದಾರೆ.
ಈ ಕುರಿತು ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ವಿಚಾರದಲ್ಲಿ ಹೈಕಮಾಂಡ್ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕು. ಸುಮ್ಮನೆ ದಿನಾಂಕ ನೀಡಿ ಆಕಾಂಕ್ಷಿಗಳನ್ನು ಸತಾಯಿಸುವುದು ಸರಿಯಲ್ಲ. ಅದರ ಬದಲು ಲೋಕಸಭೆ ಚುನಾವಣೆ ನಂತರ ವಿಸ್ತರಣೆ ಮಾಡುತ್ತೇವೆ ಎಂದು ಹೇಳಿಬಿಡಲಿ ಎಂದು ಹೇಳಿದ್ದಾರೆ.
ಸಂಪುಟದಲ್ಲಿ ಕೆಲವು ಹಿರಿಯ ಶಾಸಕರನ್ನು ಕಡೆಗಣಿಸಿರುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್, ಪರಮೇಶ್ವರ್, ಆರ್.ವಿ.ದೇಶಪಾಂಡೆ, ಕೆ.ಜೆ.ಜಾರ್ಜ್ ಅವರನ್ನು ಸಂಪುಟಕ್ಕೆ ತೆಗೆದುಕೊಂಡು, ಎಚ್.ಕೆ. ಪಾಟೀಲ್, ರೋಷನ್ ಬೇಗ್ ಹಾಗೂ ನನ್ನನ್ನು ಹೊರಗಿಟ್ಟಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ್ದಾರೆ.
ಸಂಪುಟದಲ್ಲಿ ಯುವಕರಿಗೆ ಆದ್ಯತೆ ನೀಡಲು ಆಕ್ಷೇಪವಿಲ್ಲ. ಆದರೆ, ಹಿರಿಯರನ್ನು ದೂರ ಇಡುವುದು ಸರಿಯಲ್ಲ. ಸಚಿವ ಸ್ಥಾನ ನೀಡಿದರೂ ಸಂತೋಷ, ನೀಡದಿದ್ದರೂ ಸಂತೋಷ, ನಾನೇನು ಬೇರೆ ಪಕ್ಷಕ್ಕೆ ಹೋಗುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
CT Ravi case:ಬೆಳಗಾವಿ ಕೋರ್ಟ್ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ
Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.