ರಂಜಾನ್, ವೀಕೆಂಡ್‌ಗಾಗಿ ಹೆಚ್ಚುವರಿ ಬಸ್
Team Udayavani, Jun 24, 2017, 11:10 AM IST
ಬೆಂಗಳೂರು: ರಂಜಾನ್ ಹಬ್ಬ ಮತ್ತು ವಾರಾಂತ್ಯದ ಹಿನ್ನೆಲೆಯಲ್ಲಿ ಸಾಲು ಸಾಲು ರಜೆ ಇರುವುದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ಪ್ರಯಾಣಿಕರ ಅನುಕೂಲಕ್ಕಾಗಿ ಜೂನ್ 24 ಮತ್ತು 26ರಂದು ಬೆಂಗಳೂರಿನಿಂದ ನಾನಾ ಭಾಗಗಳಿಗೆ ಹೋಗುವ ಮತ್ತು ಬೇರೆ ಕಡೆಗಳಿಂದ ಬೆಂಗಳೂರಿಗೆ ಬರುವವರಿಗೆ 450ರಿಂದ 500 ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಿದೆ.
ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ, ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣ, ಜಯನಗರ, ಜೆ.ಪಿ. ನಗರ, ಜಯನಗರ 4ನೇ ಬ್ಲಾಕ್ ಮತ್ತು 9ನೇ ಬ್ಲಾಕ್, ಜಾಲಹಳ್ಳಿ ಕ್ರಾಸ್, ನವರಂಗ್ (ರಾಜಾಜಿನಗರ), ಮಲ್ಲೇಶ್ವರ 18ನೇ ಅಡ್ಡರಸ್ತೆ, ಕೆಂಗೇರಿ ಉಪನಗರ, ಬಸವೇಶ್ವರ ಬಸ್ ನಿಲ್ದಾಣ (ಪೀಣ್ಯ) ಸೇರಿದಂತೆ ನಗರದ ವಿವಿಧೆಡೆಯಿಂದ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಬಸ್‌ಗಳು ಕಾರ್ಯಾಚರಣೆ ಮಾಡಲಿವೆ.
ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡವಾಗಿ ಕಾಯ್ದಿರಿಸಿದರೆ, ಪ್ರಯಾಣದಲ್ಲಿ ಶೇ. 5ರಷ್ಟು ಮತ್ತು ಹೋಗುವ-ಬರುವ ಪ್ರಯಾಣದ ಟಿಕೆಟ್‌ಗಳನ್ನು ಒಟ್ಟಿಗೆ ಕಾಯ್ದಿರಿಸದರೆ, ಶೇ. 10ರಷ್ಟು ರಿಯಾಯ್ತಿ ದೊರೆಯಲಿದೆ. ಟಿಕೆಟ್ ಕಾಯ್ದಿರಿಸಲು ನಗರದಲ್ಲಿ 171, ಮೈಸೂರಿನಲ್ಲಿ 17, ಮಂಗಳೂರಿನಲ್ಲಿ 35 ಸೇರಿದಂತೆ ವಿವಿಧೆಡೆ 230 ಗಣಕೀಕೃತ ಬುಕಿಂಗ್ ಕೌಂಟರ್‌ಗಳನ್ನು ತೆರೆಯಲಾಗಿದೆ.
ಕೆಎಸ್‌ಆರ್‌ಟಿಸಿ ವೆಬ್‌ಸೈಟ್ www.ksrtc.in ಮೂಲಕ ಇ-ಟಿಕೆಟ್ ಬುಕಿಂಗ್ ಕೂಡ ಮಾಡಬಹುದು. ಮಾಹಿತಿಗೆ 080-49596666 ಸಂಪರ್ಕಿಸಬಹುದು ಎಂದು ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Bengaluru: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಇಬ್ಬರು ಯುವಕರು ಸಾವು
Fraud Case: ಡಿಕೆಸು ಹೆಸರಿನಲ್ಲಿ 8.4 ಕೋಟಿ ರೂ. ವಂಚನೆ; ಆರೋಪಿಗಳಿಗೆ ನೋಟಿಸ್
Arrested: ಸ್ನೇಹಿತನ ಹತ್ಯೆಗೈದಿದ್ದ ಆರೋಪಿ ಬಂಧನ
Toll fee: ಹೆಬ್ಬಾಳ-ಸಿಲ್ಕ್ ಬೋರ್ಡ್ ಸುರಂಗ ರಸ್ತೆ: ಕೇವಲ 18 ಕಿ.ಮೀ.ಗೆ 288 ರೂ. ಸುಂಕ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.