ರಾಮನಗರ ಜಿಲ್ಲಾ ನ್ಯಾಯಾಧೀಶರಿಗೆ 10 ಸಾವಿರ ದಂಡ
Team Udayavani, Mar 3, 2017, 10:31 AM IST
ಬೆಂಗಳೂರು: ಮಾಹಿತಿ ಹಕ್ಕು ಕಾಯ್ದೆ ಯಡಿ ಸಕಾಲಕ್ಕೆ ಸೂಕ್ತ ಮಾಹಿತಿ ನೀಡದ ಅಪರ ಜಿಲ್ಲಾ ನ್ಯಾಯಾಧೀಶರಿಗೆ ದಂಡ ವಿಧಿಸಿರುವ ಅಪರೂಪದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಈ ಹಿಂದೆ ಲೋಕಾಯುಕ್ತ ಉಪ ರಿಜಿಸ್ಟ್ರಾರ್ ಆಗಿದ್ದ ಪ್ರಸ್ತುತ ರಾಮನಗರದ 3ನೇ ಅಪರ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾಗಿರುವ ಗೋಪಾಲ ಕೃಷ್ಣ ರೈ ಅವರಿಗೆ 10 ಸಾವಿರ ರೂ. ದಂಡ ವಿಧಿಸಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ವೇತನದಲ್ಲಿ ತಲಾ 5 ಸಾವಿರ ರೂ. ಗಳಂತೆ ದಂಡ ಪಾವತಿಸುವಂತೆ ಆದೇಶ ನೀಡಲಾಗಿದೆ.
2015ರಲ್ಲಿ ಸಲ್ಲಿಕೆಯಾಗಿದ್ದ ಪ್ರಕರಣ ಸಂಬಂಧ ಅಂದಿನ ಲೋಕಾಯುಕ್ತ ಉಪ ರಿಜಿಸ್ಟ್ರಾರ್ ಆಗಿದ್ದ ನ್ಯಾ| ಗೋಪಾಲಕೃಷ್ಣ ರೈ, ಲೋಕಾಯುಕ್ತ ರಿಜಿಸ್ಟ್ರಾರ್ ಸೂಚನೆಯನ್ನು ನಿರಾಕರಿಸಿ ಮಾಹಿತಿ ನೀಡಿರಲಿಲ್ಲ. ಅಲ್ಲದೆ ಎರಡನೇ ಮೇಲ್ಮನವಿ ವಿಚಾರಣೆ ಸೂಚನೆಯನ್ನೂ ಪಾಲಿಸದ ಹಿನ್ನೆಲೆಯಲ್ಲಿ, ಹಾಲಿ ಜಿಲ್ಲಾ ನ್ಯಾಯಾಧೀಶ ಗೋಪಾಲಕೃಷ್ಣ ರೈ ಅವರಿಗೆ ದಂಡ ವಿಧಿಸಿ ರಾಜ್ಯ ಮಾಹಿತಿ ಆಯುಕ್ತರಾದ ನ್ಯಾ| ಕೆ.ಎಂ. ಚಂದ್ರೇಗೌಡ ಆದೇಶಿಸಿದ್ದಾರೆ.
ಅದೇ ರೀತಿ ಅರ್ಜಿದಾರ ಆರ್‌ಟಿಐ ಕಾರ್ಯ ಕರ್ತನಿಗೆ ಲೋಕಾಯುಕ್ತ ಸಂಸ್ಥೆಯಿಂದ 15 ದಿನ ಗಳೊಳಗೆ ಮೂರು ಸಾವಿರ ರೂ. ಪರಿಹಾರ ನೀಡುವಂತೆಯೂ ಲೋಕಾಯುಕ್ತ ಆಡಳಿತ ವಿಭಾಗದ ಸಬ್ ರಿಜಿಸ್ಟ್ರಾರ್ -1 ಆನಂದ ವಾಗಡೆಯವರಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಫೆ. 9 ರಂದು 2ನೇ ಮೇಲ್ಮನವಿ ಪ್ರಕರಣವನ್ನು ಇತ್ಯರ್ಥ ಗೊಳಿಸಿ ನೀಡಿರುವ ಈ ಆದೇಶಕ್ಕೆ ತಡೆಯಾಜ್ಞೆ ನೀಡುವಂತೆ ಕೋರಿ, ಲೋಕಾಯುಕ್ತ ಸಂಸ್ಥೆ ಹೈಕೋರ್ಟ್ ಮೊರೆಹೋಗಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
Congress: ಸಂಪುಟದಲ್ಲಿ ನಮಗೂ ಅವಕಾಶ ಕೊಡಿ: ಇಬ್ಬರು ಕಾಂಗ್ರೆಸ್ ಶಾಸಕರ ಪಟ್ಟು
MUST WATCH
ಹೊಸ ಸೇರ್ಪಡೆ
Viral: ಮದುವೆ ಸಂಭ್ರಮದಲ್ಲಿ 20 ಲಕ್ಷ ರೂಪಾಯಿಯನ್ನು ಗಾಳಿಯಲ್ಲಿ ಎಸೆದ ಅತಿಥಿಗಳು.!
Raichur: ರಾತ್ರೋರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ
UV Fusion: ಹೃದಯದಲ್ಲಿ ಬಾಲ್ಯದ ಮಿಡಿತ
Hit & Run: ಐಷಾರಾಮಿ ಕಾರಿಗೆ ಕ್ಯಾಮರಾಮ್ಯಾನ್ ಬಲಿ; 100 ಮೀ ದೂರದಲ್ಲಿ ಪತ್ತೆಯಾಯಿತು ಮೃತದೇಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.