ರಮೇಶ್ ಜಾರಕಿಹೊಳಿ ಆರೋಪದ ಕುರಿತು ತನಿಖೆಯಾಗಲಿ; ಸರ್ಕಾರ ಸತ್ತು ಹೋಗಿದೆ: ಸಿದ್ದರಾಮಯ್ಯ

Team Udayavani, Jan 16, 2021, 4:04 PM IST

siddarmiha

ಬೆಂಗಳೂರು: ಸರ್ಕಾರ ರಚನೆಗೆ ನೆರವಾಗಲು ಯೋಗೇಶ್ವರ್ ಅವರು 9 ಕೋಟಿ ರೂ. ಸಾಲ ಮಾಡಿದ್ದರು ಎಂಬ ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆ ಬಗ್ಗೆ ಹೈಕೋರ್ಟ್‍ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ತಮ್ಮ ನಿವಾಸದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಆಪರೇಷನ್ ಕಮಲದಲ್ಲಿ ಹಣದ ಪ್ರಭಾವ ಇದೆ ಎಂಬುದು ಜಾರಕಿಹೊಳಿಯವರ ಹೇಳಿಕೆಯಿಂದ ಸಾಬೀತಾಗಿದೆ. ಈಗಾಗಿ ಅವರ ಹೇಳಿಕೆ ಕುರಿತು ನಿಖರ ಮತ್ತು ಸಮಗ್ರವಾದ ತನಿಖೆ ಆಗಲೇಬೇಕು ಎಂದರು.

ಆಪರೇಷನ್ ಕಮಲ ಎಂದರೆ ಹಣ ನೀಡಿ ಶಾಸಕರನ್ನು ಖರೀದಿ ಮಾಡುವುದು ಎಂದು ಅರ್ಥ. ಈಗ ರಮೇಶ್ ಜಾರಕಿಹೊಳಿಯವರೇ ಹಣದ ವ್ಯವಹಾರ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ. ಸಿ.ಪಿ. ಯೋಗೇಶ್ವರ್ ಅವರು 9 ಕೋಟಿ ಸಾಲ ಮಾಡಿ ಸರ್ಕಾರ ರಚನೆಗೆ ನೆರವಾಗಿದ್ದಾರೆ ಎಂದು ಅವರು ಬಹಿರಂಗವಾಗಿಯೇ ಹೇಳಿಕೆ ಕೊಟ್ಟಿದ್ದಾರೆ.

ಇದನ್ನೂ ಓದಿ:  ಜಗತ್ತಿನ ಅತೀ ದೊಡ್ಡ ಕೋವಿಡ್ ಲಸಿಕೆ ಅಭಿಯಾನಕ್ಕೆ ಭಾರತದಲ್ಲಿ ಚಾಲನೆ

ನಾವು ಸಜ್ಜನರು, ಆಪರೇಷನ್ ಕಮಲಕ್ಕೆ ಹಣ ಖರ್ಚು ಮಾಡಿಲ್ಲ. 17 ಶಾಸಕರು ಅವರಾಗಿಯೇ ಬಂದಿದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಬಿಜೆಪಿಯವರು ಎಂಥ ನೀಚರು, ಸುಳ್ಳುಗಾರರು ಎಂಬುದು ತನಿಖೆ ಮೂಲಕ ರಾಜ್ಯದ ಜನರಿಗೆ ತಿಳಿಯಲಿ ಎಂದು ಸಿದ್ದರಾಮಯ್ಯ ಅವರು ತಿಳಿಸಿದರು.

ಯಡಿಯೂರಪ್ಪ ಅವರು ಆಪರೇಷನ್ ಕಮಲದ ಜನಕ. ಅವರು ರಾಜ್ಯದ ಜನತೆಯ ಆಶೀರ್ವಾದದಿಂದ ಮುಖ್ಯಮಂತ್ರಿ ಆದವರಲ್ಲ. ಹಣ ಮತ್ತು ಆಪರೇಷನ್ ಕಮಲದ ಮೂಲಕ ಅವರು ಸಿಎಂ ಆಗಿದ್ದಾರೆ ಎಂದು ಸಿದ್ದರಾಮಯ್ಯ ಅವರು ವಾಗ್ದಾಳಿ ನಡೆಸಿದರು.  ಇಷ್ಟಕ್ಕೂ 9 ಕೋಟಿ ರೂ.ಗಳು ಬಂದಿದ್ದಾದರೂ ಎಲ್ಲಿಂದ. ಅದನ್ನು ಯೋಗೇಶ್ವರ್ ಅವರಿಗೆ ಕೊಟ್ಟವರು ಯಾರು. ಅದು ಬಿಳಿ ಹಣವೇ ಅಥವಾ ಕಪ್ಪು ಹಣವೇ ಎಂಬುದು ಗೊತ್ತಾಗಬೇಕು.

ಇದನ್ನೂ ಓದಿ:  ಬಡಪಾಯಿ ಡಿ-ಗ್ರೂಪ್ ನೌಕರರ ಮೇಲೆ ಪ್ರಯೋಗವೇಕೆ? ಮಂತ್ರಿಗಳು ಲಸಿಕೆ ಪಡೆದು ಮಾದರಿಯಾಗಲಿ:ಖಾದರ್

ಒಂದು ವೇಳೆ ನಾನು ಈ ರೀತಿಯ ಆರೋಪ ಮಾಡಿದ್ದರೆ ವಿರೋಧ ಪಕ್ಷದವರು ವಿನಾ ಕಾರಣ ಆರೋಪ ಮಾಡುತ್ತಿದ್ದಾರೆ ಎಂದು ಹೇಳುತ್ತಾರೆ. ರಮೇಶ್ ಜಾರಕಿಹೊಳಿ ಹಿರಿಯ ಸಚಿವರು. ಅವರೇ ಆರೋಪ ಮಾಡಿದ್ದಾರೆ. ಹೀಗಾಗಿ ತನಿಖೆ ಆಗಬೇಕಲ್ಲವೇ ?

ಇದು ದಾರಿಯಲ್ಲಿ ಹೋಗುವವರು ಹೇಳಿರುವ ಮಾತಲ್ಲ. ಜವಾಬ್ದಾರಿಯುತ ಸಚಿವರು ಹೇಳಿರುವ ಮಾತಿದು. ಹೀಗಾಗಿ ಸಮಗ್ರವಾಗಿ ತನಿಖೆಯಾಗಬೇಕು. ಸಿ.ಡಿ. ಬಗ್ಗೆಯೂ ತನಿಖೆಯಾಗಬೇಕು.

ಸಿ.ಡಿ. ಬಗ್ಗೆಯೂ ತನಿಖೆಯಾಗಲಿ

ಬಸನಗೌಡ ಪಾಟೀಲ್ ಯತ್ನಾಳ್ ಅವರು ಬಿಜೆಪಿಯ ಹಿರಿಯ ನಾಯಕ. ಸಿ.ಡಿ. ಕುರಿತಾಗಿ ಅವರೇ ಆರೋಪ ಮಾಡಿದ್ದಾರೆ. ಸಿ.ಡಿ.ಯಲ್ಲಿ ಕೊಳಕು ದೃಶ್ಯಗಳಿವೆ. ನೋಡಲಾಗದು ಎಂದಿದ್ದಾರೆ. ಹೀಗಾಗಿ ಸಿ.ಡಿ.ಯಲ್ಲಿ ಏನಿದೆ ಎಂಬುದೂ ಜನರಿಗೆ ಗೊತ್ತಾಗಬೇಕಲ್ಲವೇ. ಹೀಗಾಗಿ ತನಿಖೆ ನಡೆಸುವುದು ಸೂಕ್ತ. ಯಡಿಯೂರಪ್ಪ ಅವರಿಗೆ ಏಕೆ ಮತ್ತು ಹೇಗೆ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎಂಬ ಸತ್ಯಾಂಶವೂ ಹೊರಬರಬೇಕಲ್ಲವೇ ? ಎಂದು ಪ್ರಶ್ನಿಸಿದರು.

ತಮ್ಮ ಕ್ಷೇತ್ರಗಳಿಗೆ ಅನುದಾನ ಪಡೆಯಲು ಶಾಸಕರು ಅರ್ಹರು. ಅದರಲ್ಲಿ ಬ್ಲಾಕ್ ಮೇಲ್ ಮಾಡುವ ಅಗತ್ಯವೇನಿದೆ. ಅನುದಾನ ಕೋರಿ ಜಮೀರ್ ಅಹಮದ್ ಅವರು ಪತ್ರ ಕೊಟ್ಟಿದ್ದಾರೆ. ಆ ಪತ್ರದ ಮೇಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಣ್ಣ ಸಹಿ ಮಾಡಿ ಹಣಕಾಸು ಇಲಾಖೆಗೆ ಕಳುಹಿಸಿದ್ದಾರೆ. ಇಷ್ಟಕ್ಕೂ ಅನುದಾನ ಬಿಡುಗಡೆ ಆಗಿದೆಯೇ ? ಅದು ಆದೇಶವೂ ಅಲ್ಲ.

ಇದನ್ನೂ ಓದಿ:  ಹಿಂದೂಪರ ಮಾತನಾಡಿದ್ದಕ್ಕೆ ಪೊಲೀಸ್ ಭದ್ರತೆ ಹಿಂಪಡೆದ ಸರ್ಕಾರ :ಯತ್ನಾಳ ಆಕ್ರೋಶ

ಸರ್ಕಾರ ಸತ್ತು ಹೋಗಿದೆ

ರಾಜ್ಯದಲ್ಲಿ ಸರ್ಕಾರ ಸತ್ತಿದೆ. ಇನ್ನೂ ಏಳು ಸತ್ತಿರುವ ಕುದುರೆಗಳನ್ನು ಸಿಎಂ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ. ಪಿಂಚಣಿ ಕೊಡಲು, ಮನೆ, ರಸ್ತೆ ಕಾಮಗಾರಿಗಳಿಗೆ ಅನುದಾನ ಇಲ್ಲ. ನೀರಾವರಿ ಯೋಜನೆಗಳು ನಿಂತಿವೆ. ವಿದ್ಯಾರ್ಥಿ ವೇತನ ಕೊಡುತ್ತಿಲ್ಲ. ಸರ್ಕಾರ ಎಲ್ಲಿದೆ.  ರಾಜ್ಯದಲ್ಲಿ ಸತ್ತ ಸರ್ಕಾರ ಇದೆ.

ಜನ ಚುನಾವಣೆ ಬರಲಿ ಎಂದು ಕಾಯುತ್ತಿದ್ದಾರೆ. ಬಂದ ಕೂಡಲೇ ಈ ಸರ್ಕಾರ ಮತ್ತು ಯಡಿಯೂರಪ್ಪ ಅವರನ್ನು ಜನ ಮನೆಗೆ ಕಳುಹಿಸಲಿದ್ದಾರೆ.  ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಜನವರಿ 20ರಂದು ಚಳವಳಿ ನಡೆಸಲಿದೆ. ಅಂದು ರಾಜಭವನ ಚಲೋ ಕಾರ್ಯಕ್ರಮ ನಡೆಯಲಿದೆ.

ಎಲ್ಲರಿಗೂ ಲಸಿಕೆ ಸಿಗಲಿ

ಶಾಸಕರು ನಮಗೆ ಲಸಿಕೆ ಬೇಡ ಎಂದು ಹೇಳಿಲ್ಲ. ಕೊರೊನಾ ವಾರಿಯರ್ಸ್‍ಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯವರು ಪ್ರಮಾಣ ಪತ್ರ ನೀಡಿರುವುದರಿಂದ ಲಸಿಕೆ ಬಗ್ಗೆ ಅನುಮಾನ ಬೇಡ. ಎಲ್ಲರಿಗೂ ಲಸಿಕೆ ಸಿಗುವಂತಾಗಬೇಕು. ಇಲ್ಲದಿದದರೆ ಕೋವಿಡ್ ನಿಯಂತ್ರಣ ಅಸಾಧ್ಯ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಇದನ್ನೂ ಓದಿ:   KBCಯಲ್ಲಿ 12.5 ಲಕ್ಷ ಗೆದ್ದು ಬಡ ಮಕ್ಕಳ ಆಶಾಕಿರಣವಾದ ರವಿ ಕಟಪಾಡಿ | Udayavani

ಟಾಪ್ ನ್ಯೂಸ್

MH–Shinde-pawr

Mahayuti: ಈ ಬಾರಿ ನಾನು ದೇವೇಂದ್ರ ಫ‌ಡ್ನವೀಸ್‌ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

Mangaluru: ಜನಾಗ್ರಹವಿದ್ದರೂ ಇನ್ನೂ ದೊರೆಯದ ಪ್ರಾದೇಶಿಕ ಪಾಸ್‌ಪೋರ್ಟ್‌ ಕೇಂದ್ರ

FOOD-DELIVERY

E-Commerce: ಆಹಾರ ಪದಾರ್ಥ ಪ್ರತ್ಯೇಕ ಪ್ಯಾಕ್‌ ಕಡ್ಡಾಯ: ಪ್ರಾಧಿಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Congress: ಹಾಸನದಲ್ಲಿ ಬೃಹತ್‌ ಸಮಾವೇಶ: ಗೌಡರ ತವರಲ್ಲಿ ಇಂದು ಕಾಂಗ್ರೆಸ್‌ ಶಕ್ತಿಪ್ರದರ್ಶನ

Congress: ಹಾಸನದಲ್ಲಿ ಬೃಹತ್‌ ಸಮಾವೇಶ: ಗೌಡರ ತವರಲ್ಲಿ ಇಂದು ಕಾಂಗ್ರೆಸ್‌ ಶಕ್ತಿಪ್ರದರ್ಶನ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

ಹೊಸ ಸೇರ್ಪಡೆ

MH–Shinde-pawr

Mahayuti: ಈ ಬಾರಿ ನಾನು ದೇವೇಂದ್ರ ಫ‌ಡ್ನವೀಸ್‌ ಹೆಸರು ಸೂಚಿಸಿ ಋಣ ತೀರಿಸಿದೆ: ಶಿಂಧೆ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Toll: ವರ್ಷದಲ್ಲೇ 438 ಕೋ.ರೂ. ಟೋಲ್‌ ಶುಲ್ಕ ಸಂಗ್ರಹ

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Electricity Price Hike: ಮೂರು ವರ್ಷದ ವಿದ್ಯುತ್‌ ದರ ಒಂದೇ ಬಾರಿ ಏರಿಕೆ?

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Puttur: ಎಪ್ರಿಲ್‌, ಮೇ ಬಿಸಿಲ ತಾಪ: ಹಲವೆಡೆ ಅಡಿಕೆ ಮರ ಖಾಲಿ!

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Karnataka: ರಾಜ್ಯದ ಎಲ್ಲ ವಿ.ವಿ.ಗಳಲ್ಲೂ ರಾಜ್ಯಪಾಲರ ಅಧಿಕಾರಕ್ಕೆ ಕತ್ತರಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.