ರಮೇಶ್ ಜಾರಕಿಹೊಳಿ ಕ್ಷಮೆಯಾಚನೆಗೆ ಒತ್ತಾಯ
Team Udayavani, Sep 2, 2018, 6:40 AM IST
ಬೆಂಗಳೂರು: ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಟಾಳ್ಕರ್ ಅವರ ಬಗ್ಗೆ ಸಚಿವ ರಮೇಶ್ ಜಾರಕಿಹೊಳಿ ಅವರು ಅಸಂಸದೀಯವಾಗಿ ಮಾತನಾಡಿದ್ದು, ತಕ್ಷಣ ಕ್ಷಮೆಯಾಚಿಸಬೇಕೆಂದು ಅಖೀಲ ಭಾರತ ವೀರಶೈವ ಮಹಾಸಭಾ ಒತ್ತಾಯಿಸಿದೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮಹಾಸಭಾ ಉಪಾಧ್ಯಕ್ಷ ಬಿ.ಎಸ್.ಸಚ್ಚಿದಾನಂದಮೂರ್ತಿ, ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನದಲ್ಲಿ ಮುಂದುವರಿಯಲು ನೈತಿಕತೆ ಇಲ್ಲ. ಒಬ್ಬ ಹೆಣ್ಣು ಮಗಳ ಏಳಿಗೆ ಸಹಿಸಲಾರದ ಇಂಥ ಮಂತ್ರಿಗಳು ಸಂಪುಟದಲ್ಲಿ ಇರಬೇಕೆ? ಇಂಥವರಿಂದ ಮಹಿಳಾ ಸಮುದಾಯ ಯಾವ ನಿರೀಕ್ಷೆ ಇಟ್ಟುಕೊಳ್ಳಬಹುದು. ಇವರ ನಡವಳಿಕೆ ಮಹಿಳಾ ಸಮುದಾಯಕ್ಕೆ ಮಾಡಿದ ಘೋರ ಅಪಮಾನ. ಇದನ್ನು ಮಹಾಸಭೆ ಉಗ್ರವಾಗಿ ಖಂಡಿಸುತ್ತದೆ.ತಕ್ಷಣವೇ ರಮೇಶ್ ಜಾರಕಿಹೊಳಿಯವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಚಿವ ರಮೇಶ ಜಾರಕಿಹೊಳಿ ನೀಡಿರುವ ಕಾಲ ಕಸ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವುದಿಲ್ಲ. ಅವರು ಜವಾಬ್ದಾರಿಯುತ ನಾಯಕರು. ತಮ್ಮ ಭಾಷೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು.
– ಸತೀಶ ಜಾರಕಿಹೊಳಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
Bengaluru; ಮೊಬೈಲ್‌ಗಾಗಿ ಜಗಳ ಮಾಡಿದ ಮಗನ ಹೊಡೆದು ಕೊಂ*ದ ಅಪ್ಪ !
Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್ ಅವ್ಯವಹಾರ ಉಲ್ಲೇಖ: ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.