ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಜಾರಿಗೆ ಚಿಂತನೆ: ರಾಮಲಿಂಗಾರೆಡ್ಡಿ
Team Udayavani, Dec 24, 2017, 7:35 AM IST
ಬೆಂಗಳೂರು:ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಮಧ್ಯಪ್ರದೇಶದ ಮಾದರಿಯಲ್ಲಿ ಗಲ್ಲು ಶಿಕ್ಷೆ ಕಾನೂನು ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯಪುರದಲ್ಲಿ ನಡೆದ ಘಟನೆ ಹೇಯ ಕೃತ್ಯ. ಇಂತಹ ದುಷ್ಕೃತ್ಯ ನಿಯಂತ್ರಿಸಲು ಮಧ್ಯ ಪ್ರದೇಶದಲ್ಲಿರುವ ಕಾನೂನು ಮಾಹಿತಿ ತರಿಸಿಕೊಂಡು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಅಪ್ರಾಪ್ತ ಮಕ್ಕಳ ಮೇಲಿನ ದೌರ್ಜನ್ಯದ ಆರೋಪಿಗಳಿಗೆ ಮಧ್ಯ ಪ್ರದೇಶದಲ್ಲಿ ಗಲ್ಲು ಶಿಕ್ಷೆ ವಿಧಿಸುವ ಕಾನೂನು ಜಾರಿಯಲ್ಲಿದೆ. ಅದೇ ಮಾದರಿಯ ಕಾನೂನು ರಾಜ್ಯದಲ್ಲಿ ಜಾರಿಗೆ ತರಲಾಗುವುದು. ಅಲ್ಲಿನ ಕಾನೂನಿನ ಬಗ್ಗೆ ಸಂಪೂರ್ಣವಾಗಿ ಅಧ್ಯಯನ ಮಾಡಿ, ಸೂಕ್ತ ತಿದ್ದು ಪಡಿತಂದು ಅತ್ಯಾಚಾರಿಗಳ ವಿರುದ್ಧ ಕಠಿಣ ಶಿಕ್ಷೆಗೆ ಒಳಪಡಿಸಲಾಗುವುದು. ರಾಜ್ಯದಲ್ಲೂ ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಸಂಬಂಧ ಕಾನೂನು ರೂಪಿಸುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಚರ್ಚಿಸಲಾಗುವುದು ಎಂದು ಹೇಳಿದರು.
ರೆಡ್ಡಿ ತಿರುಗೇಟು
ದೇಶದಲ್ಲಿ ನಡೆಯುವ ಅಪರಾಧಗಳ ಸಂಖ್ಯೆ ಪೈಕಿ ಶೇ.5ರಷ್ಟು ಮಾತ್ರ ರಾಜ್ಯದಲ್ಲಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ.6 ರಷ್ಟಿತ್ತು. ನಮ್ಮ ಸರ್ಕಾರ ಬಂದ ನಂತರ ಶೇ.1ರಷ್ಟು ಕಡಿಮೆಯಾಗಿದೆ. ಶೇ.11.5ರಷ್ಟು ಅಪರಾಧ ನಡೆಯುವ ಮೂಲಕ ದೇಶದಲ್ಲಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದೆ. ಹೀಗಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೊದಲು ಈ ಬಗ್ಗೆ ತಲೆಕೆಡಿಸಿಕೊಳ್ಳಲಿ. 80 ಹಸುಗೂಸುಗಳು ಸಾವನ್ನಪ್ಪಿವೇ. ಈ ಮಕ್ಕಳ ಸಾವಿಗೆ ಮೊದಲು ನ್ಯಾಯ ಕೊಡಿಸಿ, ನಂತರ ನಮ್ಮ ರಾಜ್ಯದ ಬಗ್ಗೆ ಮಾತನಾಡಿ. ಅದು ಬಿಟ್ಟು ಇಲ್ಲಿಗೆ ಬಂದು ಟಿಪ್ಪು ಜಯಂತಿ ಬಗ್ಗೆ ಮಾತನಾಡಬೇಡಿ. ನಾವು ರಾಮನ ಜಯಂತಿನೂ ಮಾಡ್ತಿವಿ, ಕೃಷ್ಣನ ಜಯಂತಿನೂ ಮಾಡ್ತಿವಿ ಎಂದು ಎಂದು ತಿರುಗೇಟು ನೀಡಿದರು.
ಗೌರಿ ಹಂತಕರು ಸಿಗ್ತಾರೆ
ನರೇಂದ್ರ ದಾಬೋಲ್ಕರ್ ಹತ್ಯೆಯಾಗಿ 4ವರ್ಷ ಕಳೆದರೂ ಹಂತಕರು ಪತ್ತೆಯಾಗಿಲ್ಲ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆ ರೀತಿಯಾಗುವುದಿಲ್ಲ. ಪತ್ರಕರ್ತೆ ಗೌರಿ ಲಂಕೇಶ್ ಹಂತಕರು ಸದ್ಯದಲ್ಲೇ ಸಿಗುತ್ತಾರೆ. ಆ ನಿಟ್ಟಿನಲ್ಲೇ ವಿಶೇಷ ತಂಡ ಕೆಲಸ ಮಾಡುತ್ತಿದೆ ಎಂದ ಸಚಿವರು, ಕಿಡಿಗೇಡಿಗಳಿಂದ ಗೌರಿಲಂಕೇಶ್ ಹತ್ಯೆಯಾದಾಗ ಸೌಜನ್ಯಕ್ಕಾದರೂ ಬಿಜೆಪಿಯವರು ತಿರುಗಿ ನೋಡದೆ, ಈಗ ರಾಜಕೀಯ ಮಾಡುತ್ತಿರುವುದು ಸರಿಯಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ದರ್ಶನ್ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Udupi: ಭಿಕ್ಷಾಟನೆ, ಅಪೌಷ್ಟಿಕತೆ ವಿರುದ್ಧ ಯುವಕನ ಬರಿಗಾಲ ಜಾಗೃತಿ
Udupi: ಬಿಎಸ್ಸೆನ್ನೆಲ್ ಟವರ್ ನಿರ್ವಹಣೆ ಹೊಣೆ ಪಂಚಾಯತ್ ಹೆಗಲಿಗೆ
Rapper Badshah: ಗಾಯಕ ಬಾದ್‌ಶಾ ಒಡೆತನದ ಬಾರ್ & ಕ್ಲಬ್ ಹೊರಗೆ ಬಾಂ*ಬ್ ಸ್ಪೋ*ಟ
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.