ಸೋದರ ಮಾವನಿಂದಲೇ ಬಾಲಕಿ ಅತ್ಯಾಚಾರ
Team Udayavani, Sep 25, 2017, 12:51 PM IST
ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರವೆಸಗಿ ತಲೆಮರೆಸಿಕೊಂಡಿದ್ದ ಸಂಬಂಧಿಯನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗಿರೀಶ್ (25) ಬಂಧಿತ ಆರೋಪಿ. ಸಂಬಂಧದಲ್ಲಿ ಸಂತ್ರಸ್ತೆಗೆ ಸೋದರ ಮಾವನಾಗಿರುವ ಗಿರೀಶ್, ಅಪ್ರಾಪೆ¤ಯ ಪೋಷಕರು ಮನೆಯಲ್ಲಿ ಇಲ್ಲದಿರುವಾಗ ಅತ್ಯಾಚಾರ ಎವೆಸಗಿದ್ದ. ಈ ಬಗ್ಗೆ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡುತ್ತಿದ್ದಂತೆ ಪರಾರಿಯಾಗಿದ್ದ.
ಯಲಹಂಕ ಉಪನಗರದ ಆನಂದಪುರದಲ್ಲಿ ವಾಸವಿರುವ ಬಾಲಕಿಯ ಮನೆಯ ಪಕ್ಕದಲ್ಲೇ ವಾಸವಿರುವ ಆರೋಪಿ ಗಿರೀಶ್, ಸ್ಥಳೀಯ ವಸತಿ ಶಾಲೆಯೊಂದರ ವಾಹನ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಸಂಬಂಧಿಯಾದ್ದರಿಂದ ಆಗಾಗ ಸಂತ್ರಸ್ತೆಯ ಮನೆಗೆ ಬರುತ್ತಿದ್ದ ಆತ, ಪೋಷಕರ ಅನುಪಸ್ಥಿತಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.
ಆದರೆ, ಬಾಲಕಿ ಈ ವಿಚಾರವನ್ನು ಪೋಷಕರಿಗೆ ತಿಳಿಸಿರಲಿಲ್ಲ. ಆಕೆಯ ಮುಗ್ಧತೆ ದುರುಪಯೋಗಪಡಿಸಿಕೊಂಡ ಆರೋಪಿ, ಸೆ.19ರಂದು ಬಾಲಕಿಯ ಪೋಷಕರು ಹೊರಗೆ ಹೋದ ಸಂದರ್ಭದಲ್ಲಿ ಮನೆಗೆ ಬಂದು ಅತ್ಯಾಚಾರವೆಸಗಿದ್ದ ಎಂದು ಪೊಲೀಸರು ಹೇಳಿದ್ದಾರೆ. ಬಾಲಕಿಯ ತಾಯಿ ಮನೆಗೆ ವಾಪಸಾದ ಬಳಿಕ ಪುತ್ರಿಯ ವರ್ತನೆಯಿಂದ ಅನುಮಾನಗೊಂಡು ವಿಚಾರಿಸಿದ್ದರು.
ಆಗ ಗಿರೀಶ್ ಎಸಗಿದ ಕೃತ್ಯವನ್ನು ಆಕೆ ತಿಳಿಸಿದ್ದು, ಪೋಷಕರು ಯಲಹಂಕ ಉಪನಗರ ಠಾಣೆಗೆ ದೂರು ನೀಡಿದ್ದರು. ಪೊಲೀಸರು ಪೊಕೊÕà ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ನಗರದ ಹೊರವಲಯದಲ್ಲಿ ಭಾನುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ಗಿರೀಶ್‌ಗೆ ಈಗಾಗಲೇ ಮದುವೆ ನಿಶ್ಚಯವಾಗಿದ್ದು, ಇನ್ನೆರಡು ತಿಂಗಳ ಬಳಿಕ ಮದುವೆ ನಡೆಯಲಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.