ರ್ಯಾಪರ್ ಚಂದನ್ ಶೆಟ್ಟಿ ನಿರಾಳ
Team Udayavani, Sep 5, 2018, 11:29 AM IST
ಬೆಂಗಳೂರು: “ಅಂತ್ಯ’ ಎಂಬ ಸಿನಿಮಾಕ್ಕಾಗಿ ಗಾಂಜಾ ಪರ ಹಾಡು ಹಾಡಿ ವಿವಾದಕ್ಕೆ ಸಿಲುಕಿದ್ದ ರ್ಯಾಪರ್ ಚಂದನ್ ಶೆಟ್ಟಿ ನಿರಾಳರಾಗಿದ್ದಾರೆ.
ಈ ಕುರಿತು ರ್ಯಾಪರ್ ಚಂದನ್ ಶೆಟ್ಟಿಗೆ ಹಿಂಬರಹ ನೀಡಿರುವ ಮಹಿಳೆ ಮತ್ತು ಮಾದಕ ದ್ರವ್ಯ ದಳ ಎಸಿಪಿ ಮೋಹನ್ ಕುಮಾರ್, ಅಂತ್ಯ ಸಿನಿಮಾದಲ್ಲಿ ಮಾದಕ ವಸ್ತು ಕುರಿತು ಹಾಡನ್ನು ಹಾಡಿದ್ದು, ಈ ಹಾಡಿನಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂಬ ಉದ್ದೇಶದಿಂದ ನಿಮ್ಮನ್ನು ವಿಚಾರಣೆ ಮಾಡಲಾಗಿತ್ತು. ನಿಮ್ಮ ಹೇಳಿಕೆಯನ್ನು ಪಡೆದು ವಿಚಾರಣೆ ಮುಕ್ತಾಯಗೊಳಿಸಲಾಗಿದೆ.
ಇನ್ಮುಂದೆ ಯಾವುದೇ ವಿಚಾರಣೆ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ವಿವಾದಾತ್ಮಕ ಹಾಡಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಾಡಿನಿಂದ ಪ್ರಚೋದನೆಗೊಂಡು ಯುವಕರು ಮಾದಕ ವ್ಯಸನಿಗಳಾಗುತ್ತಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆಯಲ್ಲಿ ಆ.28ರಂದು ಚಂದನ್ ಶೆಟ್ಟಿ ವಿಚಾರಣೆಗೆ ಹಾಜರಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕುಡುಪು, ಮಂಗಳಜ್ಯೋತಿ ಬಳಿ ಅಂಡರ್ಪಾಸ್
Divorce: ಚಾಹಲ್ ಬಳಿಕ ಇದೀಗ ಮನೀಶ್ ಪಾಂಡೆ ವಿಚ್ಛೇದನ? ಏನಿದು ವರದಿ
ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ
ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್ ಲೈಟ್ ಉರಿಯುತ್ತಿಲ್ಲ!
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.