ಮುಖ್ಯ ಕಾರ್ಯದರ್ಶಿ ಹುದ್ದೆಗೆ ರತ್ನಪ್ರಭ ?
Team Udayavani, Nov 28, 2017, 6:00 AM IST
ಬೆಂಗಳೂರು: ರಾಜ್ಯದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಎರಡು ಉನ್ನತ ಹುದ್ದೆಗಳಿಗೆ ಮಹಿಳೆಯರೇ ನೇಮಕವಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಈಗಾಗಲೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಹುದ್ದೆ ನೀಲಮಣಿ ರಾಜು ಅವರ ಪಾಲಾಗಿದೆ. ಒಂದು ವೇಳೆ ಮುಖ್ಯ ಕಾರ್ಯದರ್ಶಿ ಹುದ್ದೆಗೂ ರತ್ನಪ್ರಭ ಅವರೇ ನೇಮಕವಾದಲ್ಲಿ, ಹೊಸ ಇತಿಹಾಸವೊಂದು ಸೃಷ್ಟಿಯಾ ಗಲಿದೆ. ಸದ್ಯ ಈ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳ ನಡುವೆ ಪೈಪೋಟಿಯಿದೆ. ಆದರೆ ಬಹುತೇಕ ಕೆ.ರತ್ನಪ್ರಭ ಅವರೇ ನೂತನ ಮುಖ್ಯ ಕಾರ್ಯದರ್ಶಿಯಾಗುವುದು ಖಚಿತ ಎಂದು ಹೇಳಲಾಗಿದೆ.
ಮುಖ್ಯ ಕಾರ್ಯದರ್ಶಿ ನೇಮಕ ಸಂಬಂಧ ರಾಜ್ಯ ಸಚಿವ ಸಂಪುಟ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಧಿಕಾರ ನೀಡಿದೆ. ಈ ಸಂಬಂಧ ಒಂದೆರಡು ದಿನಗಳಲ್ಲಿ ಆದೇಶ ಹೊರಬೀಳಲಿದೆ. ಕೆ.ರತ್ನಪ್ರಭ, ಕೇಂದ್ರ ಸೇವೆಯಲ್ಲಿರುವ ಎಸ್.ಕೆ.ಪಟ್ಟಾನಾಯಕ್, ಲತಾ ಕೃಷ್ಣರಾವ್, ಟಿ.ಎಂ.ವಿಜಯಭಾಸ್ಕರ್ ಹಿರಿತನದ ಲಿಸ್ಟ್‌ನಲ್ಲಿದ್ದು, ರತ್ನಪ್ರಭ ಹೆಸರು ಮುಂಚೂಣಿಯಲ್ಲಿದೆ.
ಈಗಾಗಲೇ ರಾಜ್ಯ ಪೊಲೀಸ್ ಮಹಾನಿರ್ದೇಶಕ ಸ್ಥಾನ ಮಹಿಳಾ ಅಧಿಕಾರಿಗೆ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಸಹ ಮಹಿಳಾ ಅಧಿಕಾರಿಗೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಲವು ತೋರಿದ್ದಾರೆ ಎಂದು ಹೇಳಲಾಗಿದೆ. ಸುಭಾಷ್‌ಚಂದ್ರ ಕುಂಟಿಯಾ ಅವರು ಇದೇ 30 ರಂದು ನಿವೃತ್ತಿಯಾಗಲಿದ್ದು, ಮಂಗಳವಾರ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.