Rave party: ನಟಿ ಹೇಮಾ ಸೇರಿ 8 ಮಂದಿ ವಿಚಾರಣೆಗೆ ಗೈರು
Team Udayavani, May 28, 2024, 1:38 PM IST
ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ. ಆರ್.ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾ ಸೇರಿ 8 ಮಂದಿಯೂ ವಿಚಾರಣೆಗೆ ಸೋಮವಾರ ಗೈರಾಗಿದ್ದಾರೆ.
ಈ ಮಧ್ಯೆ ನಟಿ ಹೇಮಾ ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲವಕಾಶ ಕೇಳಿದ್ದಾರೆ. ಪಾರ್ಟಿಯಲ್ಲಿ ನಟಿ ಹೇಮಾ ಸೇರಿ 88 ಮಂದಿ ಡ್ರಗ್ಸ್ ಸೇವನೆ ಮಾಡಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮೊದಲ ಹಂತವಾಗಿ ನಟಿ ಸೇರಿ 8 ಮಂದಿಗೆ ನೋಟಿಸ್ ಜಾರಿಗೊಳಿಸಿ ಮೇ 27ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ನಟಿ ಹೇಮಾ ಆರೋಗ್ಯ ಸಮಸ್ಯೆಯ ನೆಪವೊಡ್ಡಿ ತಮಗೆ ಒಂದು ವಾರಗಳ ಕಾಲವಕಾಶ ಬೇಕೆಂದು ಸಿಸಿಬಿ ತನಿಖಾಧಿಕಾರಿಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇತರೆ ಆರೋಪಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಉಳಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಮೇ 19ರಂದು ನಡೆದ ರೇವ್ ಪಾರ್ಟಿಯಲ್ಲಿ ನಟಿಯರಾದ ಹೇಮಾ, ಆಶಿರಾಯ್ ಸೇರಿ 120ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಈ ಮಾಹಿತಿ ಮೇರೆಗೆ ಮೇ 20 ರಂದು ನಸುಕಿನ 3 ಗಂಟೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಮಾದಕ ವಸ್ತು ಮಾರಾಟ ಸಂಬಂಧ ವಾಸು, ಅರುಣ್ ಕುಮಾರ್, ನಾಗಬಾಬು, ರಣಧೀರ್ ಬಾಬು, ಮೊಹಮ್ಮದ್ ಅಬೂಬಕ್ಕರ್ ಸಿದ್ದಿಕಿ ಎಂಬುವರನ್ನು ಬಂಧಿಸಿದ್ದರು. ಅಲ್ಲದೆ, ನಟಿ ಹೇಮಾ, ಇತರೆ 120ಕ್ಕೂ ಹೆಚ್ಚು ಮಂದಿಯ ರಕ್ತದ ಮಾದರಿಯನ್ನು ವೈದ್ಯರ ಮೂಲಕ ಸಂಗ್ರಹಿಸಿ ಪರೀಕ್ಷೆಗೊಳಪಡಿಸಿದಾಗ 88 ಜನರು ಡ್ರಗ್ಸ್ ಸೇವನೆ ಮಾಡಿದ್ದು ದೃಢಪಟ್ಟಿತು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.