ರವಿಬೆಳಗರೆ, ಅನಿಲ್‌ರಾಜ್‌ಗೆ ಬಂಧನ ವಾರೆಂಟ್
Team Udayavani, Nov 24, 2017, 12:27 PM IST
ಬೆಂಗಳೂರು: ಶಾಸಕರ ಕುರಿತು ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಕಾರ್ಯದರ್ಶಿಗಳ ಸೂಚನೆ ಮೇರೆಗೆ ಹಿರಿಯ ಪತ್ರಕರ್ತ ರವಿಬೆಳಗೆರೆ ಮತ್ತು ಅನಿಲ್‌ರಾಜ್ ಅವರಿಗೆ ನಗರ ಪೊಲೀಸರು ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ.
ಈ ಮೊದಲು ವಿಧಾನಸಭೆ ಹಕ್ಕು ಭಾದ್ಯತಾ ಸಮಿತಿಯು ಇಬ್ಬರೂ ಪತ್ರಕರ್ತರಿಗೆ ಜೈಲು ಶಿಕ್ಷೆ ವಿಧಿಸಿತ್ತು. ನಂತರ ಹೈಕೋರ್ಟ್ ಮೆಟ್ಟಿಲೇರಿದ ಪತ್ರಕರ್ತರಿಗೆ ಸರ್ಕಾರ ಜತೆ ಮಾತುಕತೆ ಮಾಡಿಕೊಂಡು ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಬೆಳಗಾವಿ ಅಧಿವೇಶನ ವೇಳೆ ಮತ್ತೂಮ್ಮೆ ವಿಧಾನಸಭೆ ಹಕ್ಕು ಭಾದ್ಯತಾ ಸಮಿತಿ ಪತ್ರಕರ್ತರ ಬರಹದ ಬಗ್ಗೆ ಪ್ರಸ್ತಾಪಿಸಿ, ಬಂಧಿಸಲು ಆದೇಶಿಸಿತ್ತು.
ಈ ಹಿನ್ನೆಲೆಯಲ್ಲಿ ವಿಧಾನಸಭೆ ಕಾರ್ಯದರ್ಶಿಗಳು ಬಂಧನಕ್ಕೆ ಆದೇಶಿ ನೀಡಿದ್ದಾರೆ. ಸಂಬಂಧ ಹಾಯ್‌ಬೆಂಗಳೂರು ವಾರ ಪತ್ರಿಕೆಯ ಸಂಪಾದಕ ರವಿಬೆಳಗೆರೆ ಮತ್ತು ಯಲಹಂಕ ವಾಯ್ಸ ಪತ್ರಿಕೆ ಸಂಪಾದಕ ಅನಿಲ್‌ರಾಜ್ ಅವರಿಗೆ ನಗರ ಪೊಲೀಸ್ ಆಯುಕ್ತರ ಸೂಚನೆ ಮೇರೆಗೆ ಆಯಾ ಠಾಣಾ ವ್ಯಾಪ್ತಿಯ ಪೊಲೀಸರು ಬಂಧನ ವಾರೆಂಟ್ ಜಾರಿ ಮಾಡಿದ್ದಾರೆ.
ಆದರೆ, ಇಬ್ಬರೂ ನಾಪತ್ತೆಯಾಗಿದ್ದು, ಹುಡುಕಾಟ ನಡೆಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ. ಮತ್ತೂಂದೆಡೆ ಬಂಧನ ಭೀತಿಯಲ್ಲಿರುವ ಇಬ್ಬರು ಪತ್ರಕರ್ತರು ಮತ್ತೂಮ್ಮೆ ಕೋರ್ಟ್ ಮೋರೆ ಹೋಗಿದ್ದು, ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.