ಶೀಘ್ರದಲ್ಲಿ 18-44 ವಯಸ್ಸಿನವರಿಗೆ 3ನೇ ಹಂತದ ಕೋವಿಡ್-19 ಲಸಿಕಾ ಯೋಜನೆ
Team Udayavani, Apr 28, 2021, 9:08 PM IST
ಬೆಂಗಳೂರು : ರಾಜ್ಯ ಸರ್ಕಾರ 18 ರಿಂದ 44 ವಯಸ್ಸಿನ ನಡುವಿನ ನಾಗರೀಕರಿಗೆ ಕೋವಿಡ್-19 ಲಸಿಕೆಯನ್ನು ನೀಡುವ ಯೋಜನೆಯನ್ನು ಶೀಘ್ರದಲ್ಲಿ ರಾಜ್ಯಾದ್ಯಂತ ಆರಂಭಿಸಲಿದ್ದು, ಅದಕ್ಕಾಗಿ ಒಂದು ಕೋಟಿ ಲಸಿಕೆಗಳನ್ನು ಕೊಳ್ಳಲು ಕ್ರಮವಹಿಸಲಾಗಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಅವರು ತಿಳಿಸಿದರು.
ಅವರು ಇಂದು 3ನೇ ಹಂತದ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಕುರಿತು ರಾಜ್ಯಮಟ್ಟದ ಇಲಾಖಾ ಕಾರ್ಯದರ್ಶಿಗಳೊಂದಿಗೆ ಹಮ್ಮಿಕೊಂಡಿದ್ದ ಪೂರ್ವಭಾವಿ ತಯಾರಿ ಸಭೆ ಉದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿರುವ 18-44 ವಯಸ್ಸಿನ ಜನಸಂಖ್ಯೆಗೆ ಅನುಗುಣವಾಗಿ ಅಗತ್ಯವಿರುವ ಲಸಿಕೆಯನ್ನು ಖರೀದಿಸಲು ನಿರ್ಧರಿಸಲಾಗಿದೆ. ಈಗಾಗಲೇ ಒಂದು ಕೋಟಿ ಲಸಿಕೆಗಳಿಗೆ ಸಂಬಂಧಿಸಿದ ಕಂಪನಿಗೆ ಬೇಡಿಕೆ ಸಲ್ಲಿಸಲಾಗಿದ್ದು, ಲಸಿಕಾ ತಯಾರಿಕ ಕಂಪನಿ ಸರಬರಾಜು ಆರಂಭಿಸಿದ ತಕ್ಷಣದಿಂದ ಯೋಜನೆ ಆರಂಭಿಸಲಾಗುವುದು ಎಂದು ಹೇಳಿದರು.
18 ರಿಂದ 44 ವಯಸ್ಸಿನ ಪ್ರತಿಯೊಬ್ಬರು ಈ ಲಸಿಕೆ ಪಡೆಯಲು cowin ಪೋರ್ಟಲ್ ನಲ್ಲಿ ನೋಂದಾಯಿಸಿಕೊಳ್ಳುವುದು ಅಗತ್ಯವಿರುತ್ತದೆ. ಈ ಪೋರ್ಟಲ್ ನಲ್ಲಿ ಲಸಿಕೆಗೆ ಸಂಬಂಧಿಸಿದಂತೆ ಪೂರ್ಣ ಮಾಹಿತಿಯನ್ನು ಪಡೆಯಬಹುದಾಗಿದೆ. ನೋಂದಣಿ ನಂತರ ಲಸಿಕೆ ಪಡೆಯುವ ಸಮಯ ಹಾಗೂ ದಿನಾಂಕವನ್ನು ತಿಳಿಯಬಹುದಾಗಿದೆ.
ಪ್ರಸ್ತುತ ಚಾಲ್ತಿಯಲ್ಲಿರುವ 45 ವರ್ಷ ಮೇಲ್ಪಟ್ಟವರಿಗೆ ನೀಡಲಾಗುತ್ತಿರುವ ಲಸಿಕಾ ಕಾರ್ಯಕ್ರಮ ಮೇ 1 ರ ನಂತರ ಸಹ ಮುಂದುವರೆಯಲಿದೆ ಎಂದು ಅವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Food Department Operation: ಬಿಪಿಎಲ್ ಚೀಟಿದಾರರಿಗೆ ಎಪಿಎಲ್ ಕಾವು!
MUST WATCH
ಹೊಸ ಸೇರ್ಪಡೆ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.