ರಾಯಣ್ಣನ ಹೆಸರು ದುರ್ಬಳಕೆಯಾಗದಿರಲಿ
Team Udayavani, Aug 16, 2017, 11:30 AM IST
ಬೆಂಗಳೂರು: ರಾಜಕೀಯ ಉದ್ದೇಶ ಈಡೇರಿಸಿಕೊಳ್ಳಲು ಇತ್ತೀಚಿನ ದಿನಗಳಲ್ಲಿ ಸಂಗೊಳ್ಳಿ ರಾಯಣ್ಣನವರ ಹೆಸರನ್ನು ಬಳಸಿಕೊಳ್ಳುತ್ತಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿದ್ದಾರೆ.
ನಗರದ ಕೋಡೇಸ್ ವೃತ್ತದಲ್ಲಿ ಮಂಗಳವಾರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, “ಕೆಲವರು ತಮ್ಮ ರಾಜಕೀಯ ಉದ್ದೇಶ ಈಡೇರಿಸಿಕೊಳ್ಳಲು ರಾಯಣ್ಣನವರ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಆದರೆ, ರಾಜ್ಯ ಕಾಂಗ್ರೆಸ್ ಸರ್ಕಾರ ರಾಯಣ್ಣನವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸಲು ಬೇಕಾದ ಉತ್ತಮ ಕಾರ್ಯ ಮಾಡುತ್ತಿದೆ,’ ಎಂದರು.
ರಾಯಣ್ಣನವರ ಹೆಸರಿನಲ್ಲಿ ಸೈನಿಕ ಶಾಲೆ: “ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸೈನಿಕ ಶಾಲೆ, ಮ್ಯೂಸಿಯಂ ಸೇರಿದಂತೆ ರಾಯಣ್ಣನವರಿಗೆ ಸಂಬಂಧಿಸಿದ ಇತರೆ ಕಾರ್ಯಕ್ಕೆ 3 ಎಕರೆ ಜಮೀನು ಮಂಜೂರು ಮಾಡಲಾಗಿದೆ. 265 ಕೋಟಿ ವೆಚ್ಚದಲ್ಲಿ ಸಂಗೊಳ್ಳಿ ರಾಯಣ್ಣ ಪ್ರಾಧಿಕಾರದ ಮೂಲಕ ಇದರ ಕಾರ್ಯ ಮಾಡಲಾಗುತ್ತದೆ. ಹಾಗೆಯೇ ಆನಂದ್ ರಾವ್ ವೃತ್ತದ ಮೇಲ್ಸೇತುವೆಗೂ ಸಂಗೊಳ್ಳಿ ರಾಯಣ್ಣ ಅವರ ಹೆಸರಿಡಲಾಗುತ್ತದೆ,’ ಎಂದು ಹೇಳಿದರು.
ಹುಟ್ಟು ಹಬ್ಬ ಮಾಡಲ್ಲ: ನಾನು ಒಂದರಿಂದ ನಾಲ್ಕನೇ ತರಗತಿ ಓದಿಲ್ಲ. ನೇರವಾಗಿ ಐದನೇ ತರಗತಿಗೆ ಸೇರಿಸಿದ್ದೆ. ಹೀಗಾಗಿ ಹುಟ್ಟಿದ ದಿನಾಂಕ ಗೊತ್ತಿಲ್ಲ. ಹುಟ್ಟುಹಬ್ಬವನ್ನು ಆಚರಿಸಿಕೊಂಡಿಲ್ಲ ಹಾಗೂ ಮುಂದೆಯೂ ಆಚರಿಸಿಕೊಳ್ಳಲಾರೆ. ಆದರೆ ಅಭಿಮಾನಿಗಳು ಶಾಲೆಯಲ್ಲಿ ದೊರೆತ ದಿನಾಂಕವನ್ನೇ ಗಮನದಲ್ಲಿಟ್ಟುಕೊಂಡು ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ನಾವು ಎಷ್ಟು ವರ್ಷ ಬದುಕುತ್ತೇವೆ ಎಂಬುದಕ್ಕಿಂತ ಎಷ್ಟು ಒಳ್ಳೆಯ ಕೆಲಸ ಮಾಡುತ್ತೇವೆ ಎಂಬುದಷ್ಟೇ ಮುಖ್ಯ ಎಂದರು.
ಕನ್ನಡ ಚಳವಳಿ ನಾಯಕ ವಾಟಾಳ್ ನಾಗರಾಜ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.
ಸಿದ್ದು ನೂರ್ಕಾಲ ಬಾಳಲಿ, ವಾಟಾಳ್ 125 ವರ್ಷ ಬಾಳಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ 69 ವರ್ಷವಾಗಿದೆ ಎಂಬುದನ್ನು ನಂಬಲು ಸಾಧ್ಯವಿಲ್ಲ. ಅವರಿಗೆ ಈಗ ಐವತ್ತೈದೋ, ಅರವತ್ತು ವರ್ಷ ಆಗಿರಬಹುದು ಎಂಬಂತೆ ಕಾಣುತ್ತಿದ್ದಾರೆ. 100 ವರ್ಷ ಆರೋಗ್ಯದಿಂದ ಬದುಕಲಿ ಎಂದು ವಾಟಾಳ್ ನಾಗರಾಜ್ ಹೇಳುತ್ತಿದ್ದಂತೆ, ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ, ವಾಟಾಳ್ ಅವರು ತಮ್ಮ ವಯಸ್ಸು ಎಷ್ಟು ಎಂಬುದನ್ನು ಹೇಳುವುದಿಲ್ಲ. ಅವರು 125 ವರ್ಷ ಬಾಳಲಿ ಎಂದು ಹಾಸ್ಯ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.