ಅದಾಲತ್ ಮೂಲಕ ಪುನರ್ ನೇಮಕ
Team Udayavani, Jun 22, 2019, 3:05 AM IST
ಬೆಂಗಳೂರು: ಸಣ್ಣಪುಟ್ಟ ಕಾರಣಗಳಿಗೆ ಚಾಲಕರು, ನಿರ್ವಾಹಕರನ್ನು ಸೇವೆಯಿಂದ ಅಮಾನತು ಹಾಗೂ ವಜಾ ಮಾಡಲಾಗಿದ್ದ ಪ್ರಕರಣಗಳನ್ನು ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಅದಾಲತ್ ನಡೆಸಿ, ಸೇವೆಗೆ ಪುನರ್‌ನೇಮಕ ಮಾಡಿಕೊಳ್ಳುವುದಾಗಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ನೌಕರರ ಸಂಘದಿಂದ ಶುಕ್ರವಾರ ನಗರದ ಪುರಭವನದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜಯಂತಿ ಹಾಗೂ ಸಾಧಕರಿಗೆ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಾರಿಗೆ ರತ್ನ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಚಾಲಕ ಮತ್ತು ನಿರ್ವಾಹಕರು ಮಾಡಿದ ತಪ್ಪಿಗೆ ಸಣ್ಣ ಪ್ರಮಾಣದ ಶಿಕ್ಷೆ ನೀಡಿ ಅವರಿಗೆ ಉದ್ಯೋಗದಲ್ಲಿ ಮುಂದುವರಿಯಲು ಅವಕಾಶ ನೀಡುವುದು ಈ ಅದಾಲತ್ ಉದ್ದೇಶವಾಗಿದೆ ಎಂದು ತಿಳಿಸಿದರು.
ನಿಗಮಗಳಲ್ಲಿ ಜರುಗುವ ಭ್ರಷ್ಟಾಚಾರದ ಬಗ್ಗೆಯೂ ಗಮನಕ್ಕೆ ಬಂದಿದೆ. ಭ್ರಷ್ಟ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುತ್ತಿದೆ. ಚಾಲಕ, ನಿರ್ವಾಹಕರು ಸೇರಿದಂತೆ ಕೆಳ ಹಂತದ ಸಿಬ್ಬಂದಿ ಸಂಸ್ಥೆಯ ಆಧಾರಸ್ತಂಭವಾಗಿದೆ ಎಂದರು.
ರಾಜ್ಯ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಿದ್ದೇನೆ. ಇಲಾಖೆಯ ನಾಲ್ಕು ನಿಗಮಗಳು 600 ಕೋಟಿ ರೂ. ನಷ್ಟದಲ್ಲಿದ್ದು, ಸರ್ಕಾರದ ನೆರವು ಅತ್ಯಗತ್ಯವಾಗಿದೆ. ಮುಖ್ಯಮಂತ್ರಿಗಳು ಇಲಾಖೆಯ ಪ್ರಗತಿ ಪರಿಶೀಲನೆಗೆ ಸಮಯ ಕೊಡುವುದಾಗಿ ಹೇಳಿದ್ದಾರೆ. ಆಗ ಸಿಬ್ಬಂದಿ ಬೇಡಿಕೆಯನ್ನು ಮುಖ್ಯಮಂತ್ರಿಗಳ ಎದುರು ಇಡಲಾಗುತ್ತದೆ ಎಂದು ಭರವಸೆ ನೀಡಿದರು.
ಉರಿಲಿಂಗ ಪೆದ್ದಿ ಮಠದ ಪೀಠಾಧ್ಯಕ್ಷ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ, ಗುಡಿ, ಚರ್ಚ್ ಮಸೀದಿಗಳಿಂದ ಭಾರತ ಬದಲಾಗಲಿಲ್ಲ. ಅಂಬೇಡ್ಕರ್ ಬರೆದ ಸಂವಿಧಾನದಿಂದ ಬದಲಾಗಿದೆ. ದೇಶದ ಸಂವಿಧಾನ ಬದಲಾಯಿಸುವುದು ತಾಯಿಯ ಗರ್ಭ ಬದಲಿಸಿದಂತೆ. ಅಂಬೇಡ್ಕರ್ ಕೇವಲ ದಲಿತರಿಗೆ ಮೀಸಲಾತಿ ಕಲ್ಪಿಸಿಲ್ಲ. ಎಲ್ಲ ಸಮುದಾಯಗಳಿಗೂ ಮೀಸಲಾತಿ ನೀಡಿದ್ದಾರೆ ಎಂದರು.
ಸಾರಿಗೆ ನಿಗಮಗಳ ವ್ಯಾಪ್ತಿಯ ಸಾಧಕ ಅಧಿಕಾರಿ ಹಾಗೂ ನೌಕರರಿಗೆ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಸಾರಿಗೆ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸಂಘದ ಎಫ್.ಎಚ್.ಜಕ್ಕಪ್ಪ, ಬಸವ ಮರಿದೇವ ಸ್ವಾಮೀಜಿ, ಕೆಎಸ್‌ಆರ್‌ಟಿಸಿ ಕಾನೂನು ಅಧಿಕಾರಿ ಮನೋಹರ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಟಿ.ಎಸ್.ಲತಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smart Bus Stan: ಕೋರಮಂಗಲದಲ್ಲಿ ಸ್ಮಾರ್ಟ್ ಬಸ್ ನಿಲ್ದಾಣ!
Bengaluru: ಇವಿ ಬೈಕ್ ಶೋರೂಮ್‌ನಲ್ಲಿ ಬೆಂಕಿ ಅವಘಡ; ಮಾಲೀಕ, ಮ್ಯಾನೇಜರ್ ಬಂಧನ, ಬಿಡುಗಡೆ
Bengaluru: ನಗರದಲ್ಲಿ ನಿಷೇಧಿತ ಕಲರ್ ಕಾಟನ್ ಕ್ಯಾಂಡಿ ತಯಾರಿಕಾ ಘಟಕ ಬಂದ್
Shobha Karandlaje: ಶೋಭಾ ಲೋಕಸಭಾ ಸದಸ್ಯತ್ವ ರದ್ದು ಕೋರಿ ಅರ್ಜಿ: ಡಿ.6ಕ್ಕೆ ವಿಚಾರಣೆ
Arrested: ನಕಲಿ ದಾಖಲೆ ನೀಡಿ ಟಿಡಿಎಸ್ ಪಡೆಯುತ್ತಿದ್ದ ಆರೋಪಿಯ ಬಂಧಿಸಿದ ಜಾರಿ ನಿರ್ದೇಶನಾಲಯ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.