ದಾಖಲೆ ಬಜೆಟ್ ಮಂಡಿಸಲು ಸಿದ್ಧವಾದ ಮೈತ್ರಿ
Team Udayavani, Feb 17, 2019, 6:23 AM IST
ಬೆಂಗಳೂರು: ಬಿಬಿಎಂಪಿಯಲ್ಲಿ ಸತತ ನಾಲ್ಕನೇ ಅವಧಿಗೆ ಬಜೆಟ್ ಮಂಡಿಸಲು ಸಿದ್ಧತೆ ನಡೆಸಿರುವ ಕಾಂಗ್ರೆಸ್-ಜೆಡಿಎಸ್ ಮೈತ್ರಿಯು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಾಲಿಕೆಯ ಇತಿಹಾಸದಲ್ಲಿಯೇ ಬೃಹತ್ ಗಾತ್ರದ ಆಯವ್ಯಯ ಮಂಡಿಸಲು ಸಜ್ಜಾಗಿದೆ.
ಪಾಲಿಕೆಯ ಕೆಂಪೇಗೌಡ ಪೌರ ಸಭಾಂಗಣದಲ್ಲಿ ಫೆ.18ರಂದು ಬೆಳಗ್ಗೆ 11.30ಕ್ಕೆ ಪಾಲಿಕೆಯ 2019-20ನೇ ಸಾಲಿನ ಆಯವ್ಯಯ ಮಂಡನೆಯಾಗಲಿದ್ದು, ಪ್ರಮುಖವಾಗಿ ಪಾಲಿಕೆ ಆದಾಯದ ಮೂಲಗಳನ್ನು ಹೆಚ್ಚಿಸಿಕೊಳ್ಳಲು ಬಜೆಟ್‌ನಲ್ಲಿ ಒತ್ತು ನೀಡಲಾಗಿದೆ ಎಂದು ಹೇಳಲಾಗಿದೆ.
ಆರೋಗ್ಯ, ಶಿಕ್ಷಣ ಹಾಗೂ ಕಲ್ಯಾಣ ಕಾರ್ಯಕ್ರಮಗಳಿಗೆ ಮಹತ್ವ ನೀಡಿ ಯೋಜನೆಗಳನ್ನು ರೂಪಿಸಲಾಗಿದ್ದು, ಸಿದ್ಧಗಂಗಾ ಶ್ರೀಗಳ ಹೆಸರಿನಲ್ಲಿ ಶಾಶ್ವತ ಯೋಜನೆಯೊಂದನ್ನು ಜಾರಿಗೊಳಿಸಲು ತೀರ್ಮಾನಿಸಲಾಗಿದೆ. ಚಾಲ್ತಿಯಲ್ಲಿರುವ ಕಾಮಗಾರಿಗಳ ಪೂರ್ಣಗೊಳಿಸುವುದು,
ವಾರ್ಡ್ ಮಟ್ಟದ ಕಾಮಗಾರಿಗಳನ್ನು ಕೈಗೊಂಡ ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಸೇರಿದಂತೆ ಹಲವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಮೇಯರ್ ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಪಾಲಿಕೆಯ ಆದಾಯದ ಮೂಲಗಳು ಹಾಗೂ ಸರ್ಕಾರ ಘೋಷಿಸಿರುವ 2300 ಕೋಟಿಗೂ ಹೆಚ್ಚಿನ ಅನುದಾನದ ಆಧಾರದ ಮೇಲೆ ಬಜೆಟ್ ಸಿದ್ಧವಾಗಿದ್ದು, ಪಾಲಿಕೆಯ ಇತಿಹಾಸದಲ್ಲಿಯೇ ಅತಿಹೆಚ್ಚಿನ ಗಾತ್ರದ ಬಜೆಟ್ ಇದಾಗಲಿದೆ ಎಂದು ಹೇಳಲಾಗುತ್ತಿದೆ. ಹಿಂದೆ ಜೆಡಿಎಸ್‌ನ ಮಹದೇವ ಅವರು 10,300 ಕೋಟಿ ರೂ. ಬಜೆಟ್‌ನಲ್ಲಿ ಮಂಡಿಸಿದ್ದು ಈವರೆಗಿನ ದಾಖಲೆಯಾಗಿದೆ. ಈ ಬಾರಿ ಬಜೆಟ್ ಮೊತ್ತ 10,500 ಕೋಟಿ ರೂ. ದಾಟುವ ನಿರೀಕ್ಷೆಯಿದೆ.
ಮಹಿಳಾ ಪರ ಕಾರ್ಯಕ್ರಮಗಳಿಗೆ ಒತ್ತು: ಮೇಯರ್ ಹಾಗೂ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧಕ್ಷರು ಇಬ್ಬರೂ ಮಹಿಳೆಯರೇ ಆಗಿರುವುದರಿಂದ ಬಜೆಟ್‌ನಲ್ಲಿ ಮಹಿಳೆಯರಿಗೆ ಹೆಚ್ಚಿನ ಕಾರ್ಯಕ್ರಮಗಳು ಘೋಷಣೆಯಾಗಲಿವೆ. ಪ್ರಮುಖವಾಗಿ ಮಹಿಳೆಯರನ್ನು ಸ್ವವಲಂಬಿಗಳನ್ನಾಗಿಸುವ ಉದ್ದೇಶದಿಂದ ಪ್ರತಿವಾರ್ಡ್‌ನಲ್ಲಿ 20 ಮಹಿಳೆಯರಿಗೆ ಎಲೆಕ್ಟ್ರಿಕ್ ಸ್ಕೂಟರ್, ಮಹಿಳಾ ಉದ್ಯಮಿಗಳಿಗೆ ಕಿರು ಸಾಲದಂತ ಯೋಜನೆಗಳು ಬಜೆಟ್‌ನಲ್ಲಿರಲಿವೆ ಎಂದು ಮೂಲಗಳು ತಿಳಿಸಿವೆ.
ಸಿದ್ಧಗಂಗಾ ಶ್ರೀಗಳ ಹೆಸರಲ್ಲಿ ಯೋಜನೆ: ಇತ್ತೀಚೆಗೆ ಲಿಂಗೈಕ್ಯರಾದ ಸಿದ್ಧಗಂಗಾ ಮಠದ ಶ್ರೀ ಶಿವಕುಮಾರಸ್ವಾಮೀಜಿ ಅವರ ಹೆಸರಿನಲ್ಲಿ ಅನ್ನ ಅಥವಾ ಶಿಕ್ಷಣ ದಾಸೋಹಕ್ಕೆ ಸಂಬಂಧಿಸಿದಂತೆ ಶಾಶ್ವತವಾದ ಯೋಜನೆ ಬಜೆಟ್‌ನಲ್ಲಿ ಘೋಷನೆಯಾಗಲಿದೆ. ಜತೆಗೆ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಣ ಸಂಸ್ಥೆಯೊಂದಕ್ಕೆ ಸಿದ್ಧಗಂಗಾ ಶ್ರೀಗಳ ಹೆಸರಿನಲ್ಲಿ ಅನುದಾನ ನೀಡುವ ಬಗ್ಗೆಯೂ ಯೋಜನೆ ಘೋಷನೆಯಾಗುವ ನಿರೀಕ್ಷೆಯಿದೆ.
ಹೆಚ್ಚಿನ ಕಲ್ಯಾಣ ಕಾರ್ಯಕ್ರಮಗಳಿಲ್ಲ?: ಕಳೆದ ನಾಲ್ಕು ವರ್ಷಗಳಲ್ಲಿ ಮೈತ್ರಿ ಆಡಳಿತವೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಹತ್ತಾರು ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಿಸಿದೆ. ಆದರೆ, ಪರಿಣಾಮಕಾರಿಯಾಗಿ ಯೋಜನೆಗಳು ಜಾರಿಯಾಗಿಲ್ಲ ಎಂಬ ದೂರುಗಳು ಪ್ರತಿವರ್ಷ ಕೇಳಿಬರುತ್ತಿವೆ. ಆ ಹಿನ್ನೆಲೆಯಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಶೀಘ್ರ ಜಾರಿಯಾಗುವ ಕಲ್ಯಾಣ ಕಾರ್ಯಕ್ರಮಗಳನ್ನು ಮಾತ್ರ ಘೋಷಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಭಾರಿ ಯೋಜನೆಗಳ ಘೋಷಣೆ: ಸಾವಿರಾರು ಕೋಟಿ ರೂ. ವೆಚ್ಚದಲ್ಲಿ ಅನುಷ್ಟಾನಗೊಳಿಸುವ ಯೋಜನೆಗಳನ್ನು ಬಿಬಿಎಂಪಿ ಬಜೆಟ್‌ನಲ್ಲಿ ಸೇರಿಸಲಾಗಿದೆ. ರಾಜ್ಯ ಸರ್ಕಾರದ ನವ ಬೆಂಗಳೂರು ನಿರ್ಮಾಣ ಕ್ರಿಯಾ ಯೋಜನೆ ಜಾರಿ ಬಗ್ಗೆ ಬಜೆಟ್‌ನಲ್ಲಿ ಉಲ್ಲೇಖೀಸಲಾಗುತ್ತಿದೆ. ವೈಟ್‌ಟಾಪಿಂಗ್, ಟೆಂಡರ್‌ಶ್ಯೂರ್ ರಸ್ತೆಗಳ ನಿರ್ಮಾಣ, ಪ್ರಮುಖ ಜಂಕ್ಷನ್‌ಗಳಲ್ಲಿ ಗ್ರೇಡ್ ಸಪರೇಟರ್‌ಗಳ ನಿರ್ಮಾಣ ಸೇರಿ ಇನ್ನಿತರ ಭಾರಿ ಯೋಜನೆಗಳು ಘೋಷಣೆಯಾಗಲಿವೆ.
ಕಟ್ಟಡಗಳು ಶಿಥಿಲಗೊಂಡು ಬಿದ್ದು ಹೋಗುವ ಪರಿಸ್ಥಿತಿಯಲ್ಲಿರುವ ಪಾಲಿಕೆಯ ಶಾಲ-ಕಾಲೇಜುಗಳ ದುರಸ್ಥಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಘೋಷನೆಯಾಗುವ ಸಾಧ್ಯತೆಯಿದೆ. ಜತೆಗೆ ವಿದ್ಯಾರ್ಥಿಗಳ ಭದ್ರತೆಗಾಗಿ ವಿಶೇಷ ಯೋಜನೆ ರೂಪಿಸಿದ್ದು, ಮೈಕ್ರೋಸಾಫ್ಟ್ ಸಹಯೋಗದಲ್ಲಿ ಅನುಷ್ಠಾನವಾಗುತ್ತಿರುವ ಬಿಬಿಎಂಫಿ ರೋಶಿನಿ ಯೋಜನೆಗೆ ಪೂರಕವಾಗಿ ಶಾಲೆಗಳನ್ನು ಅಭಿವೃದ್ಧಿಪಡಿಸಲು ಅನುದಾನ ಸಿಗಲಿದೆಯೇ ಎಂಬುದು ನೋಡಬೇಕಿದೆ.
ಕ್ವಾರಿ ಸುತ್ತಲಿನ ಗ್ರಾಮಗಳಿಗೆ ಬಂಪರ್: ಪಾಲಿಕೆಯಿಂದ ತ್ಯಾಜ್ಯ ವಿಲೇವಾರಿ ಮಾಡುತ್ತಿರುವ ಕ್ವಾರಿಯ ಸುತ್ತಮುತ್ತಲಿನ ಪ್ರದೇಶಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಮೀಸಲಿಡಲು ಪಾಲಿಕೆ ನಿರ್ಧರಿಸಿದೆ. ಅದರಂತೆ ಬೆಳ್ಳಹಳ್ಳಿ ಕ್ವಾರಿಯ ಸುತ್ತಮುತ್ತಲಿನ ಗ್ರಾಮಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಭರಪೂರ ಅನುದಾನ ಲಭ್ಯವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಸುಧಾರಣಾ ಶುಲ್ಕ ಸಂಗ್ರಹಕ್ಕೆ ಆದ್ಯತೆ: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಕಂದಾಯ ನಿವೇಶನಗಳಿಗೆ ಪಾಲಿಕೆಯಿಂದ ಖಾತಾ ಮಾಡಿಕೊಡುವ ಮೂಲಕ ಸುಧಾರಣಾ ಶುಲ್ಕ ಸಂಗ್ರಹಿಸುವ ಮಹತ್ವದ ಯೋಜನೆ ಘೋಷಣೆಯಾಗಲಿದ್ದು, ಇದರಿಂದಾಗಿ ಪಾಲಿಕೆಗೆ ನೂರಾರು ಕೋಟಿ ರೂ. ವರಮಾನ ಬರಲಿದೆ ಎಂದು ಅಂದಾಜಿಸಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕಳೆದ ಬಜೆಟ್ ಜಸ್ಟ್ ಪಾಸ್ ಆಗಿಲ್ಲ!: ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿಯ ನಿರ್ಲಕ್ಷ್ಯ ಹಾಗೂ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆಯಿಂದಾಗಿ 2018-19ನೇ ಸಾಲಿನ ಬಜೆಟ್‌ನಲ್ಲಿದ್ದ ಯೋಜನೆಗಳು ಪೂರ್ಣ ಪ್ರಮಾಣದಲ್ಲಿ ಜಾರಿಯಾಗಿಲ್ಲ. ಅಧಿಕಾರಿಗಳ ಮಾಹಿತಿಯಂತೆ ಶೇ.55ರಷ್ಟು ಬಜೆಟ್ ಮಾತ್ರ ಅನುಷ್ಠಾವಾಗಿದೆ ಎಂದು ಹೇಳಲಾಗಿದ್ದು, ಪಾಲಿಕೆಯ ಘೋಷಿಸಲು ಮುಂದಾಗಿರುವ ಬೃಹತ್ ಗಾತ್ರ ಬಜೆಟ್ ಸಮರ್ಪಕವಾಗಿ ಅನುಷ್ಠಾನವಾಗುವುದೇ ಕಾದು ನೋಡಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Organ Donation; ಸಾವಿನ ನಂತರವೂ ನೆರವಾದ ಜೀವ: 5 ಜೀವ ಉಳಿಸಿದ ಅಂಗಾಂಗ ದಾನ
Cancer: ಎಳೆಯ ಮಕ್ಕಳಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಸಮಸ್ಯೆ
Bengaluru: ರಸ್ತೆಯಲ್ಲಿ ಹೋಗುತ್ತಿದ್ದ ಯುವತಿಗೆ ಯುವಕನಿಂದ ಲೈಂಗಿಕ ಕಿರುಕುಳ; ದೂರು
Theft: ವಿದ್ಯಾಗಣಪತಿ, ಸುಬ್ರಹ್ಮಣ್ಯ ದೇಗುಲಗಳ ಹುಂಡಿ ಹಣ, 5 ಚಿನ್ನದ ತಾಳಿ ಬೊಟ್ಟು ಕಳವು
Underpass: ಅಪಾಯ ಆಹ್ವಾನಿಸುತ್ತಿದೆ ಅಂಡರ್‌ಪಾಸ್ ಫಾಲ್ಸ್ ಸೀಲಿಂಗ್
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.