ಮಾತುಕತೆಗೆ ಸಿದ್ಧ, ದಿನ ಫಿಕ್ಸ್ ಮಾಡಿ; ಪರಿಕ್ಕರ್‌ಗೆ ಸಿದ್ದರಾಮಯ್ಯ
Team Udayavani, Dec 23, 2017, 6:00 AM IST
ಬೆಂಗಳೂರು: ಮಹದಾಯಿ ನೀರು ಹಂಚಿಕೆ ವಿವಾದ ಈಗ ಮತ್ತೆ ಗೋವಾ ಮತ್ತು ಮಹಾರಾಷ್ಟ್ರ ಅಂಗಳವನ್ನೇ ತಲುಪಿದೆ! ಪ್ರತಿಷ್ಠೆಯ ಸ್ವರೂಪ ಪಡೆದುಕೊಂಡಿರುವ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಒಪ್ಪಿಕೊಂಡ ಬೆನ್ನಲ್ಲೇ, ಮಾತುಕತೆಗೆ ದಿನಾಂಕ ಮತ್ತು ಸ್ಥಳ ನಿಗದಿಪಡಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಶುಕ್ರವಾರ ಮನೋಹರ್ ಪರಿಕ್ಕರ್‌ಗೆ ಪತ್ರ ಬರೆದಿದ್ದಾರೆ.
ಮಹದಾಯಿ ನದಿಯಿಂದ ಕುಡಿಯುವ ಉದ್ದೇಶಕ್ಕಾಗಿ ನೀರು ಬಿಡುಗಡೆ ಮಾಡಲು ಮಾತುಕತೆಗೆ ಸಿದ್ಧ ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ಈ ಹಿನ್ನೆಲೆಯಲ್ಲಿ ಪರಿಕ್ಕರ್‌ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ಇದು ತುರ್ತು ವಿಚಾರವಾಗಿರುವುದರಿಂದ ಮಾತುಕತೆಗೆ ಆದಷ್ಟು ಬೇಗ ದಿನಾಂಕ ಮತ್ತು ಸ್ಥಳ ನಿಗದಿಪಡಿಸಿ. ಅಲ್ಲಿ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ಪ್ರಯತ್ನಿಸೋಣ ಎಂದಿದ್ದಾರೆ.
ಅಲ್ಲದೆ, ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳು ಸೇರಿ ಮಾತುಕತೆ ನಡೆಸಬೇಕಿದ್ದು, ಅದಕ್ಕಾಗಿ ಈ ಪ್ರಸ್ತಾವನೆಯನ್ನು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೂ ಕಳುಹಿಸಿಕೊಡುತ್ತಿರುವುದಾಗಿ ತಿಳಿಸಿದ್ದಾರೆ.
ಇದರೊಂದಿಗೆ ಮಹದಾಯಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳುವ ವಿಚಾರ ಮತ್ತೆ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ಮುಂದೆ ನಿಂತಂತಾಗಿದೆ.
ಮುಖ್ಯಮಂತ್ರಿ ಪತ್ರದಲ್ಲಿ ಏನಿದೆ?
ಮಹದಾಯಿ ವಿವಾದ ಬಗೆಹರಿಸಿಕೊಳ್ಳಲು 2017ರ ಜೂನ್‌ನಲ್ಲಿ ಬೆಂಗಳೂರಿನಲ್ಲಿ ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸೋಣವೆಂದು 2017ರ ಮೇ 24ರಂದು ತಮಗೆ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದೆ. ಇದಾದ ಬಳಿಕ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಪತ್ರದ ಬೆನ್ನು ಹತ್ತಿದ್ದರಾದರೂ ಗೋವಾ ಕಡೆಯಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.
ಆದಾಗ್ಯೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಡಿ.20ರಂದು ನಿಮಗೆ ಈ ಕುರಿತು ವೈಯಕ್ತಿಕ ಪತ್ರ ಬರೆದಿದ್ದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗಿತ್ತು. ಸಾಮಾಜಿಕ ಜಾಲ ತಾಣಗಳಲ್ಲೂ ಪತ್ರದ ಪ್ರತಿ ಓಡಾಡುತ್ತಿರುವುದನ್ನು ಗಮನಿಸಿದ್ದೇನೆ. ಈ ಹಿಂದೆ ಮಹದಾಯಿ ನ್ಯಾಯಾಧಿಕರಣ 2016ರ ಸೆ.1ರಂದು ನೀಡಿದ್ದ ಸಲಹೆಯಂತೆ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳಲು ನಾನು ಬರೆದ ಪತ್ರಕ್ಕೆ ನಿಮ್ಮ ಉತ್ತರ ನಿರೀಕ್ಷಿಸಿದ್ದೆ.
ಅದೇನೇ ಇರಲಿ, ನಾನು ನಿಮ್ಮಲ್ಲಿ ಮತ್ತೂಮ್ಮೆ ವಿನಂತಿಸಿಕೊಳ್ಳುತ್ತೇನೆ, ಮಹದಾಯಿ ಕೊಳ್ಳದ ಕರ್ನಾಟಕ, ಗೋವಾ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿಗಳು ನಿರ್ದಿಷ್ಟ ದಿನ ಮತ್ತು ಸಮಯದಂದು ಒಟ್ಟಾಗಿ ಕುಳಿತು ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡೋಣ. ಸ್ಥಳವನ್ನು ನೀವೇ ನಿರ್ಧರಿಸಿ. ಈ ಪ್ರಸ್ತಾಪವನ್ನು ನಾನು ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೂ ಕಳುಹಿಸುತ್ತಿದ್ದೇನೆ. ಮಹದಾಯಿ ನ್ಯಾಯಾಧಿಕರಣದ ಮುಂದೆ 2018ರ ಫೆ. 6ರಿಂದ 22ರವರೆಗೆ ವ್ಯಾಜ್ಯದ ಅಂತಿಮ ವಿಚಾರಣೆ ನಡೆಯಲಿರುವುದರಿಂದ ತುರ್ತಾಗಿ ಮಾತುಕತೆಗೆ ನೀವೇ ಸ್ಥಳ ನಿಗದಿಮಾಡಿ.
ಮಹದಾಯಿ ನದಿಯ ಒಟ್ಟು 199 ಟಿಎಂಸಿ ನೀರಿನ ಪೈಕಿ ಶೇ. 75ರ ಅವಲಂಬನೆ ಪ್ರಕಾರ ಕರ್ನಾಟಕ ಒಟ್ಟು 14.98 ಟಿಎಂಸಿ ನೀರು ಕೇಳಿದೆ. ಈ ಪೈಕಿ ಹುಬ್ಬಳ್ಳಿ-ಧಾರವಾಡ ಮತ್ತಿತರ ಪ್ರದೇಶಗಳ ಕುಡಿಯುವ ನೀರಿಗಾಗಿ 7.56 ಟಿಎಂಸಿ ಮತ್ತು ಮಹದಾಯಿ ಕೊಳ್ಳದ ಬರಪೀಡಿತ ಪ್ರದೇಶಗಳಿಗೆ ಪೂರೈಸಲು ಹೆಚ್ಚುವರಿ ನೀರಿಗಾಗಿ 7 ಟಿಎಂಸಿ ಕೇಳಲಾಗಿದೆ ಎಂಬುದನ್ನು ನಾನು ಮತ್ತೂಮ್ಮೆ ಸ್ಪಷ್ಟಪಡಿಸುತ್ತೇನೆ.
ಈ ವಿಚಾರದಲ್ಲಿ ನಮ್ಮ ರಾಜ್ಯದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ ಅವರು ಗೋವಾ ಮುಖ್ಯ ಕಾರ್ಯದರ್ಶಿಗಳನ್ನು ಸಂಪರ್ಕಿಸಿ ಸಭೆಯ ಕಾರ್ಯಸೂಚಿ ಮತ್ತಿತರೆ ವಿಚಾರಗಳನ್ನು ತೀರ್ಮಾನಿಸಲಿ ಎಂದು ಸಿದ್ದರಾಮಯ್ಯ ಅವರು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರತಿಷ್ಠೆ ಇಲ್ಲ, ಮಾತುಕತೆಗೆ ಸಿದ್ಧ: ಸಚಿವ ಪಾಟೀಲ್
ಬೆಳವಣಿಗೆಗೆ ಸಂಬಂಧಿಸಿ ಇನ್ನೊಂದೆಡೆ ಪತ್ರಿಕಾ ಹೇಳಿಕೆ ನೀಡಿರುವ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ರಾಜ್ಯದ ಹಿತದೃಷ್ಟಿಯಿಂದ ಯಾವ ಪ್ರತಿಷ್ಠೆ ಇಲ್ಲದೇ, ಯಾವುದೇ ಸ್ಥಳ ಮತ್ತು ದಿನಾಂಕದಂದು ಗೋವಾ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲು ರಾಜ್ಯದ ಮುಖ್ಯಮಂತ್ರಿಗಳು ಸಿದ್ಧವಿರುವುದಾಗಿ ಹೇಳಿದ್ದಾರೆ.
ಶಿಷ್ಟಾಚಾರದ ಅನ್ವಯ ಗೋವಾ ಮುಖ್ಯಮಂತ್ರಿಗಳು ರಾಜ್ಯದ ಮುಖ್ಯಮಂತ್ರಿಗೆ ಪತ್ರ ಬರೆಯಬೇಕಿತ್ತು. ಆದರೆ, ರಾಜ್ಯವು ಈಗಾಗಲೇ ಸಾಕಷ್ಟು ಬಾರಿ ಗೋವಾ ರಾಜ್ಯದೊಂದಿಗೆ ಅಧಿಕೃತವಾಗಿ ಪತ್ರ ವ್ಯವಹಾರ ನಡೆಸಿದ್ದರೂ ಶಿಷ್ಟಾಚಾರದ ಅನ್ವಯ ಮುಖ್ಯಮಂತ್ರಿಗಳಿಗೆ ಪತ್ರ ಬರೆಯದೆ ರಾಜ್ಯ ಬಿಜೆಪಿ ಪಕ್ಷದ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಆದರೂ ಪ್ರತಿಷ್ಠೆಗೆ ಒಳಗಾಗದೇ ಗೋವಾ ಮುಖ್ಯಮಂತ್ರಿಗಳೊಂದಿಗೆ ಮಾತುಕತೆಗೆ ಸಿದ್ಧ. ಆದರೆ, ಈ ವಿಷಯವನ್ನು ಒಂದೇ ಸಭೆಯಲ್ಲಿ ಇತ್ಯರ್ಥಗೊಳಿಸಬೇಕು ಎಂದು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸದ್ಯಮಾತುಕತೆ ಮಾಡಲ್ಲ: ಪರೀಕ್ಕರ್
ಪಣಜಿ: ಮಹದಾಯಿ ನದಿ ನೀರು ಹಂಚಿಕೆ ವಿಷಯವನ್ನು ಕರ್ನಾಟಕ ವಿಧಾನಸಭಾ ಚುನಾವಣೆ ಪೂರ್ಣಗೊಂಡ ನಂತರ ಮಾತುಕತೆ ನಡೆಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರೀಕ್ಕರ್ ತಿಳಿಸಿದ್ದಾರೆ. ಶುಕ್ರವಾರ ಸಂಜೆ ಕಾರ್ಯಕ್ರಮವೊಂದರಲ್ಲಿ ಪ್ರತಿಕ್ರಿಯಿಸಿದ ಅವರು, ಕರ್ನಾಟಕ ವಿಧಾನಸಭಾ ಚುನಾವಣೆಗೂ ಮೊದಲು ಪೂರ್ಣಗೊಳ್ಳಲಿ. ನಂತರ ನಾನು ಈ ವಿಷಯಕ್ಕೆ ಸಂಬಂಧಿಸಿದಂತೆ ಕರ್ನಾಟಕದೊಂದಿಗೆ ಮಾತುಕತೆ ನಡೆಸುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಆಕ್ರೋಶ
ಕರ್ನಾಟಕಕ್ಕೆ ಕುಡಿಯಲು ಮಹದಾಯಿ ನೀರು ಕೊಡಲು ಸಿದ್ಧ ಎಂದು ಮನೋಹರ್ ಪರಿಕ್ಕರ್ ಹೇಳಿದ ಹಿನ್ನೆಲೆಯಲ್ಲಿ ಗೋವಾ ಕಾಂಗ್ರೆಸ್ ಪ್ರತಿಭಟನೆಗಿಳಿದಿದೆ. ರಾಜ್ಯದ ಜನತೆಗೆ ಅನ್ಯಾಯವಾಗಲು ಬಿಡೆವು ಎಂದು ಆಕ್ರೋಶ ವ್ಯಕ್ತಪಡಿಸಿದೆ. ಈ ಬೆಳವಣಿಗೆಯನ್ನು ನಿಭಾಯಿಸಬೇಕಾದ ಅನಿವಾರ್ಯತೆ ಈಗ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫಲ
Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.