ಉಪ ಚುನಾವಣೆಗೆ ಅಖಾಡ ಸಿದ್ಧ


Team Udayavani, Sep 22, 2019, 3:09 AM IST

upa-chuna

ಬೆಂಗಳೂರು: ಪಾಲಿಕೆ ವ್ಯಾಪ್ತಿಯ ಕೆ.ಆರ್‌.ಪುರಂ, ಮಹಾಲಕ್ಷ್ಮೀ ಲೇಔಟ್‌, ಯಶವಂತಪುರ ಹಾಗೂ ಶಿವಾಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಅ.21ರಂದು ನಡೆಯಲಿದ್ದು, ಶನಿವಾರದಿಂದಲೇ ನೀತಿ ಸಂಹಿತೆ ಜಾರಿಯಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಅನಿಲ್‌ಕುಮಾರ್‌ ತಿಳಿಸಿದರು. ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರಿಗೆ ಈ ಕುರಿತು ಮಾಹಿತಿ ನೀಡಿದ ಅವರು, ಸೆ.23ರಂದು ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ಸೆ.30ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಅ.1ರಂದು ನಾಮಪತ್ರ ಪರಿಶೀಲನೆ, ಅ.3ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಅ.21ರಂದು ಮತದಾನ ನಡೆದು, ಅ.24ರಂದು ಫ‌ಲಿತಾಂಶ ಬರಲಿದೆ. ಅ.27ರಂದು ಚುನಾವಣೆ ಪ್ರಕ್ರಿಯೆ ಮುಕ್ತಾಯಗೊಳ್ಳಲಿದೆ. ಪ್ರತಿ ಮತಗಟ್ಟೆಗೆ ಒಬ್ಬ ಅಧ್ಯಕ್ಷಾಧಿಕಾರಿ ಮತ್ತು 3 ಮತಗಟ್ಟೆ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು. 1.361 ಮತಗಟ್ಟೆಗಳಿಗೆ ಶೇ.20ರಷ್ಟು ಹೆಚ್ಚುವರಿ ಚುನಾವಣಾ ಸಿಬ್ಬಂದಿ ಒಳಗೊಂಡತೆ 6,532 ಚುನಾವಣಾ ಸಿಬ್ಬಂದಿ ನಿಯೋಜಿಸಲಾಗುವುದು. ಮೈಕ್ರೋ ಅಬ್ಸರ್ವರ್‌ಗಳನ್ನು ಮತದಾನ ಪ್ರಕ್ರಿಯೆಗೆ ನಿಯೋಜಿಸಲಿದ್ದು, ಚುನಾವಣಾ ಸಿಬ್ಬಂದಿ ಮತ್ತು ಮೈಕ್ರೋ ಅಬ್ಸರ್ವರ್‌ಗಳಿಗೆ ಎರಡು ಹಂತದಲ್ಲಿ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಚುನಾವಣಾ ಸಂಬಂಧಿಸಿದ ದೂರು ನೀಡಲು ಅಥವಾ ಮತದಾರರ ಪಟ್ಟಿಗೆ ಸಂಬಂಧಿಸಿದ ಯಾವುದೇ ಪ್ರಶ್ನೆಗಳಿಗೆ ಉತ್ತರ ಪಡೆಯಲು ಮತದಾರರು ಉಚಿತ ಸಹಾಯವಾಣಿ “1950′ ಸಂಪರ್ಕಿಸಬಹುದು. ಮಾದರಿ ನೀತಿ ಸಂಹಿತೆ ಅನುಸಾರ ಮತದಾರರನ್ನು ಸೆಳೆಯುವ ಅಥವಾ ಪ್ರಭಾವ ಬೀರುವ ಯಾವುದೇ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳದಂತೆ ತೀವ್ರ ನಿಗಾ ವಹಿಸಲಾಗುವುದು. ಮಾದರಿ ನೀತಿ ಸಂಹಿತೆ ಪಾಲನಾ ತಂಡಗಳು ಹಾಗೂ ಅಕೌಂಟಿಂಗ್‌ ಟೀಂ ಶ್ಯಾಡೋ ರಿಜಿಸ್ಟರ್‌ ಚುನಾವಣಾ ಅಭ್ಯರ್ಥಿಗಳ ವೆಚ್ಚದ ಮೇಲೆ ನಿಗಾವಹಿಸಲಿದ್ದಾರೆ ಎಂದರು.

ನಾಮಪತ್ರ ಸಲ್ಲಿಕೆ ಎಲ್ಲಿ?: ಕೆ.ಆರ್‌.ಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಹಳೇ ಮದ್ರಾಸ್‌ ರಸ್ತೆಯ ಕಂದಾಯ ಅಧಿಕಾರಿ ಕಚೇರಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ಕೆಂಗೇರಿ ಉಪನಗರದ ಕರ್ನಾಟಕ ಬ್ಯಾಂಕ್‌ ಕಟ್ಟಡದ ಕಂದಾಯ ಕಚೇರಿ, ಮಹಾಲಕ್ಷ್ಮೀ ಲೇಔಟ್‌ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳು ನಾಗಪುರದ ಬಿಬಿಎಂಪಿ ಕಚೇರಿ, ಶಿವಾಜಿನಗರ ಕ್ಷೇತ್ರದ ಅಭ್ಯರ್ಥಿಗಳು ಕ್ವೀನ್ಸ್‌ ರಸ್ತೆಯ ಮತದಾರರ ನೋಂದಣಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಬಹುದು ಎಂದು ಅನಿಲ್‌ಕುಮಾರ್‌ ತಿಳಿಸಿದರು.

ಮೇಯರ್‌ ಚುನಾವಣೆ ಮುಂದೂಡಿಕೆ?: ಸೆ.27ರಂದು ಮೇಯರ್‌, ಉಪಮೇಯರ್‌ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆ ನಡೆಸಲು ಜಿಲ್ಲಾ ಚುನಾವಣೆ ಆಯೋಗ ಸಿದ್ಧತೆ ನಡೆಸಿದ್ದು, ಈ ವೇಳೆಯೇ ಪಾಲಿಕೆ ವ್ಯಾಪ್ತಿಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಚುನಾವಣೆ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮೇಯರ್‌ ಚುನಾವಣೆ ಮುಂದೂಡುವಂತೆ ಪಾಲಿಕೆ ಆಡಳಿತ ಪಕ್ಷದ ನಾಯಕ ಅಬ್ದುಲ್‌ ವಾಜಿದ್‌, ಜಿಲ್ಲಾ ಚುನಾವಣಾಧಿಕಾರಿಗೆ ಮನವಿ ನೀಡಿದ್ದಾರೆ. ಈ ಕುರಿತು ರಾಜ್ಯ ಚುನಾವಣಾ ಆಯೋಗದೊಂದಿಗೆ ಚರ್ಚಿಸುವುದಾಗಿ ಚುನಾವಣಾಧಿಕಾರಿ ಅನಿಲ್‌ಕುಮಾರ್‌ ತಿಳಿಸಿದ್ದಾರೆ.

ಮತದಾರರ ವಿವರ
ಕ್ಷೇತ್ರ ಪುರುಷ ಮಹಿಳೆ ಇತರೆ ಒಟ್ಟು
ಕೆ.ಆರ್‌.ಪುರ 2,43,160 2,20,300 152 4,63,612
ಯಶವಂತಪುರ 2,45,140 2,27,031 40 4,72,211
ಮಹಾಲಕ್ಷ್ಮೀಲೇಔಟ್‌ 1,47,887 1,38,350 48 2,86,285
ಶಿವಾಜಿನಗರ 97,460 94,574 2 1,92,036
ಒಟ್ಟು 7,33,647 6,80,255 242 14,14,144

ಕ್ಷೇತ್ರ ಮತಗಟ್ಟೆ
ಕೆ.ಆರ್‌.ಪುರ 437
ಯಶವಂತಪುರ 461
ಮಹಾಲಕ್ಷ್ಮೀ ಲೇಔಟ್‌ 270
ಶಿವಾಜಿನಗರ 193
ಒಟ್ಟು 1,361

ನಾಲ್ಕು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಇವಿಎಂ ಮೂಲಕ ಮತದಾನ ನಡೆಯಲಿದೆ. ಎಲ್ಲಿ ಮತಗಟ್ಟೆ ಸ್ಥಾಪಿಸಬೇಕು ಹಾಗೂ ಶಿಥಿಲ ಮತಗಟ್ಟೆಗಳ ಕುರಿತು ಇನ್ನೆರಡು ದಿನಗಳಲ್ಲಿ ಮಾಹಿತಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಯಾವುದೇ ಲೋಪದೋಷ ಕಂಡುಬರದಂತೆ ಜಾಗ್ರತೆ ವಹಿಸಲಾಗುವುದು.
-ಅನಿಲ್‌ ಕುಮಾರ್‌, ಜಿಲ್ಲಾ ಚುನಾವಣಾಧಿಕಾರಿ

***

ರಾಜಧಾನಿಯಲ್ಲಿ ಮಿನಿ ಸಮರಾಭ್ಯಾಸ
ಬೆಂಗಳೂರು: ರಾಜ್ಯದ ಹದಿನೈದು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯ ಮಿನಿ ಸಮರದಲ್ಲಿ ರಾಜಧಾನಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳೂ ಸೇರಿದ್ದು ಚಟುವಟಿಕೆಗಳು ಗರಿಗೆದರಿವೆ. ಯಶವಂತಪುರ, ಮಹಾಲಕ್ಷ್ಮಿ ಲೇ ಔಟ್‌, ಕೆ.ಆರ್‌.ಪುರ ಹಾಗೂ ಶಿವಾಜಿನಗರದಲ್ಲಿ ಚುನಾವಣೆ ನಡೆಯಲಿದ್ದು, ಬಿಬಿಎಂಪಿ ವ್ಯಾಪ್ತಿಗೆ ಗಡಿಗೆ ಅಂಟಿಕೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸೇರಿದರೆ ಐದು ಕ್ಷೇತ್ರಗಳಲ್ಲಿ ಚುನಾವಣೆ ಹೋರಾಟ ನಡೆಯಲಿದೆ.

ಐದು ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿತ್ತು. ಒಂದು ಕಡೆ ಜೆಡಿಎಸ್‌ ಗೆದ್ದಿತ್ತು. ಐದೂ ಕ್ಷೇತ್ರಗಳಲ್ಲಿ ಅನರ್ಹತೆಗೊಂಡವರು ಚುನಾವಣೆ ಸ್ಪರ್ಧೆಗೆ ಸಜ್ಜಾಗಿದ್ದರೂ ಸುಪ್ರೀಂ ಕೋರ್ಟ್‌ನಲ್ಲಿ ಆನರ್ಹತೆ ಪ್ರಕರಣ ಇತ್ಯರ್ಥಗೊಳ್ಳದ ಕಾರಣ ಅವರಲ್ಲಿ ಆತಂಕ ಮೂಡಿದೆ.

ಕಾಂಗ್ರೆಸ್‌ನಲ್ಲಿ ಯಶವಂತಪುರ ಕ್ಷೇತ್ರದಿಂದ ಎಂ.ರಾಜ್‌ಕುಮಾರ್‌, ಮಾಗಡಿ ಬಾಲಕೃಷ್ಣ ಸೇರಿದಂತೆ ಹಲವಾರು ಆಕಾಂಕ್ಷಿಗಳಿದ್ದರೆ, ಜೆಡಿಎಸ್‌ನಲ್ಲಿ ಜವರಾಯಿಗೌಡ ಪ್ರಬಲ ಆಕಾಂಕ್ಷಿ. ಇಲ್ಲಿ ಕಾಂಗ್ರೆಸ್‌ನಿಂದ ಎಸ್‌.ಟಿ.ಸೋಮಶೇಖರ್‌ ಗೆಲುವು ಸಾಧಿಸಿದ್ದರು. ಇದೀಗ ಅವರು ನ್ಯಾಯಾಲಯದ ತೀರ್ಪಿನತ್ತ ಚಿತ್ತ ಹರಿಸಿದ್ದು, ಒಂದೊಮ್ಮೆ ಅವಕಾಶ ಸಿಗದಿದ್ದರೆ ಕುಟುಂಬ ಸದಸ್ಯರೊಬ್ಬರನ್ನು ಕಣಕ್ಕಿಳಿಸುತ್ತಾರೆ ಎನ್ನಲಾಗಿದೆ.

ಕೆ.ಆರ್‌.ಪುರದಲ್ಲಿ ಅನರ್ಹತೆಗೊಂಡಿರುವ ಬೈರತಿ ಬಸವರಾಜ್‌ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದರು. ಇದೀಗ ಕಾಂಗ್ರೆಸ್‌ನಿಂದ ಹೆಬ್ಟಾಳ ಶಾಸಕ ಬೈರತಿ ಸುರೇಶ್‌ ಪತ್ನಿ ಪದ್ಮಾವತಿ, ಕೇಶವ್‌ ರಾಜಣ್ಣ, ವಿಧಾನ ಪರಿಷತ್‌ ಸದಸ್ಯ ನಾರಾಯಣ ಸ್ವಾಮಿ, ಸಿ.ಎಂ.ಧನಂಜಯ ಹೆಸರುಗಳು ಕೇಳಿಬರುತ್ತಿವೆ. ಕಳೆದ ಚುನಾವಣೆಯಲ್ಲಿ ಇಲ್ಲಿ ಜೆಡಿಎಸ್‌ನಿಂದ ಡಿ.ಎ.ಗೋಪಾಲ್‌ ಸ್ಪರ್ಧಿಸಿ ಸೋತಿದ್ದರು. ಬಿಜೆಪಿಯಿಂದ ನಂದೀಶ್‌ ರೆಡ್ಡಿ ಸ್ಪರ್ಧಿಸಿದ್ದರು. ಇದೀಗ ನಂದೀಶ್‌ ರೆಡ್ಡಿ ಸೆಳೆಯುವ ಯತ್ನ ಕಾಂಗ್ರೆಸ್‌ ಮತ್ತು ಜೆಡಿಎಸ್‌ನಿಂದ ನಡೆದಿದೆ.

ಶಿವಾಜಿನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ರೋಷನ್‌ಬೇಗ್‌ ಗೆಲುವು ಸಾಧಿಸಿದ್ದರು. ಇದೀಗ ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥವಾಗದಿದ್ದರೆ ಅವರ ಪುತ್ರ ರೆಹಾನ್‌ ಬೇಗ್‌ ಬಿಜೆಪಿಯಿಂದ ಸ್ಪರ್ಧೆ ಮಾಡ್ತಾರೆ ಎಂಬ ಮಾತುಗಳಿವೆ. ಕಾಂಗ್ರೆಸ್‌ನಿಂದ ಎಸ್‌.ಎ.ಹುಸೇನ್‌, ವಿಧಾನ ಪರಿಷತ್‌ ಸದಸ್ಯ ಅರ್ಷದ್‌ ರಿಜ್ವಾನ್‌, ರೆಹಮಾನ್‌ ಖಾನ್‌ ಪುತ್ರ ಮನ್ಸೂರ್‌ ಅಲಿ ಖಾನ್‌, ಆಕಾಂಕ್ಷಿಗಳಾಗಿದ್ದಾರೆ. ಇಲ್ಲಿ ಜೆಡಿಎಸ್‌ಗೆ ಅಭ್ಯರ್ಥಿ ಕೊರತೆ ಇದೆ.

ಮಹಾಲಕ್ಷ್ಮೀ ಲೇ ಔಟ್‌ ಕ್ಷೇತ್ರದಲ್ಲಿ ಈ ಹಿಂದೆ ಜೆಡಿಎಸ್‌ನಿಂದ ಗೋಪಾಲಯ್ಯ ಗೆಲುವು ಸಾಧಿಸಿದ್ದರು. ಬಿಜೆಪಿಯಿಂದ ನೆ.ಲ.ನರೇಂದ್ರಬಾಬು, ಕಾಂಗ್ರೆಸ್‌ನಿಂದ ಮಂಜುನಾಥ್‌ ಗೌಡ ಸ್ಪರ್ಧಿಸಿ ಸೋತಿದ್ದರು. ಈಗ ಕಾಂಗ್ರೆಸ್‌ನಿಂದ ಪಾಲಿಕೆ ಸದಸ್ಯ ಶಿವರಾಜ್‌ ಆಕಾಂಕ್ಷಿಯಾಗಿದ್ದಾರೆ. ಬಿಜೆಪಿಯಿಂದ ನರೇಂದ್ರಬಾಬು, ಎನ್‌.ನಾಗರಾಜ್‌, ಹರೀಶ್‌ ಆಕಾಂಕ್ಷಿಗಳು. ಆದರೆ, ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಗೊಂಡರೆ ಗೋಪಾಲಯ್ಯ ಬಿಜೆಪಿಯಿಂದ ಸ್ಪರ್ಧಿಸಬಹುದು.

ಇಲ್ಲವೇ ಅವರ ಪತ್ನಿ ಹೇಮಲತಾ ಬಿಜೆಪಿಯಿಂದ ಸ್ಪರ್ಧೆ ಮಾಡಬಹುದು ಎಂದು ಹೇಳಲಾಗುತ್ತಿದೆ. ಜೆಡಿಎಸ್‌ನಲ್ಲಿ ಭದ್ರೇಗೌಡ ಸೇರಿ ಹಲವರು ಆಕಾಂಕ್ಷಿಗಳಿದ್ದಾರೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಬಿಜೆಪಿಯ ಅತೃಪ್ತರ ಸೆಳೆಯಲು ಕಾರ್ಯತಂತ್ರ ರೂಪಿಸಿದೆ. ಹೊಸಕೋಟೆಯಲ್ಲಿ ಕಾಂಗ್ರೆಸ್‌ನಿಂದ ಎಂ.ಟಿ.ಬಿ.ನಾಗರಾಜ್‌ ಗೆಲುವು ಸಾಧಿಸಿದ್ದರು. ಸಂಸದ ಬಿ.ಎನ್‌.ಬಚ್ಚೇಗೌಡರ ಪುತ್ರ ಶರತ್‌ ಬಚ್ಚೇಗೌಡ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದರು.

ಈಗ ಅವರೂ ಆಕಾಂಕ್ಷಿಯಾಗಿದ್ದಾರೆ. ನ್ಯಾಯಾಲಯದಲ್ಲಿ ಪ್ರಕರಣ ಇತ್ಯರ್ಥಗೊಳ್ಳದಿದ್ದರೆ ಎಂ.ಟಿ.ಬಿ.ನಾಗರಾಜ್‌ ಪುತ್ರ ಬಿಜೆಪಿಯಿಂದ ಸ್ಪರ್ಧೆ ಮಾಡಬಹುದು. ಕಾಂಗ್ರೆಸ್‌ನಿಂದ ಮಾಜಿ ಸಚಿವ ಚಿಕ್ಕೇಗೌಡರ ಮೊಮ್ಮಗ ನಾರಾಯಣ ಗೌಡ, ಬೈರತಿ ಸುರೇಶ್‌ ಪತ್ನಿ ಪದ್ಮಾವತಿ ಸೇರಿ ಹಲವಾರು ಆಕಾಂಕ್ಷಿಗಳಿದ್ದಾರೆ. ಬಚ್ಚೇಗೌಡರ ಪುತ್ರನನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನವೂ ನಡೆದಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್‌: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್‌

1

Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.