ಸಚಿವಾಲಯ ಸಿಬ್ಬಂದಿಯಿಂದ ಪ್ರತಿಜ್ಞಾವಿಧಿ ಸ್ವೀಕಾರ
Team Udayavani, Oct 31, 2017, 12:07 PM IST
ಬೆಂಗಳೂರು: ಜಾಗೃತಿ ಅರಿವು ಸಪ್ತಾಹದ ಅಂಗವಾಗಿ ಸೋಮವಾರ ಗೃಹ ಸಚಿವ ರಾಮಲಿಂಗಾರೆಡ್ಡಿಯವರು ಸಚಿವಾಲಯದ ಅಧಿಕಾರಿಗಳು, ನೌಕರರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಪ್ರಾಮಾಣಿಕತೆ ಮತ್ತು ಕಾನೂನಿನ ನಿಯಮಗಳನ್ನು ಅನುಸರಿಸಬೇಕು,
ಲಂಚವನ್ನು ಪಡೆಯುವುದಿಲ್ಲ ಹಾಗೂ ನೀಡುವುದೂ ಇಲ್ಲ. ಎಲ್ಲಾ ಕಾರ್ಯಗಳನ್ನು ಪ್ರಾಮಾಣಿಕ ಹಾಗೂ ಪಾರದರ್ಶಕ ರೀತಿಯಲ್ಲಿ ನಿರ್ವಹಿಸುತ್ತೇನೆ, ಅಲ್ಲದೆ ಯಾವುದೇ ಭ್ರಷ್ಟಾಚಾರದ ಘಟನೆಯನ್ನು ಸೂಕ್ತ ಸಂಸ್ಥೆಗೆ ವರದಿ ಮಾಡುತ್ತೇನೆ ಎಂದು ಗೃಹ ಸಚಿವರು ಪ್ರತಿಜ್ಞಾ ವಿಧಿ ಬೋಧಿಸಿದರು.
ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಷ್ಚಂದ್ರ ಕುಂಟಿಯಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅನಿಲ್ ಕುಮಾರ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಜಾಗೃತಿ) ಇಲಾಖೆಯ ಉಪ ಕಾರ್ಯದರ್ಶಿ ಪಲ್ಲವಿ ಆಕುರತಿ, ಅಧಿಕಾರಿಗಳು ಹಾಗೂ ನೌಕರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.