![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 20, 2018, 6:00 AM IST
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಲು ಕೇಂದ್ರ ಚುನಾವಣಾ ಆಯೋಗ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ವೇತನ ಪರಿಷ್ಕರಣೆ ಆದೇಶ ಹೊರಡಿಸಿದ್ದು, ಲಕ್ಷಾಂತರ ಸರ್ಕಾರಿ ನೌಕರರು ನಿಟ್ಟುಸಿರು ಬಿಟ್ಟಂತಾಗಿದೆ.
ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸ್ ಮೂರ್ತಿ ಅಧ್ಯಕ್ಷತೆಯ 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಒಪ್ಪಿಕೊಂಡು ರಾಜ್ಯ ಸರ್ಕಾರ ಸರ್ಕಾರಿ ನೌಕರರಿಗೆ ಶೇ. 30 ರಷ್ಟು ವೇತನ ಹೆಚ್ಚಳ ಮಾಡಲು ತೀರ್ಮಾನಿಸಿತ್ತು. ಪರಿಷ್ಕೃತ ವೇತನ 2017ರ ಜುಲೈ 1ರಿಂದ ಅನ್ವಯ ಆಗುವಂತೆ 2018 ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಆದೇಶ ಹೊರಡಿಸಲು ಮುಂದಾಗಿತ್ತು. ಅಷ್ಟರಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ಸರ್ಕಾರ ಗೊಂದಲಕ್ಕೆ ಸಿಲುಕಿತ್ತು.
ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದ ರಾಜ್ಯ ಸರ್ಕಾರ, ಚುನಾವಣೆ ಘೋಷಣೆಗೂ ಮೊದಲೇ ಸರ್ಕಾರ ವೇತನ ಪರಿಷ್ಕರಣೆಗೆ ಆಯೋಗ ರಚನೆ ಮಾಡಿ ಅದರ ಶಿಫಾರಸು ಜಾರಿಗೆ ಒಪ್ಪಿಕೊಂಡಿರುವುದರಿಂದ ಆದೇಶ ಹೊರಡಿಸಲು ಅವಕಾಶ ನೀಡುವಂತೆ ಮನವಿ ಮಾಡಿಕೊಂಡಿತ್ತು. ಆ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗ ರಾಜ್ಯ ಸರ್ಕಾರಕ್ಕೆ ಒಪ್ಪಿಗೆ ನೀಡಿದೆ. ಹೀಗಾಗಿ, ವೇತನ ಪರಿಷ್ಕರಣೆ ಆದೇಶವನ್ನು ರಾಜ್ಯ ಸರ್ಕಾರ ಹೊರಡಿಸಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.