ಶೀಘ್ರ ಅಂಜನಾಪುರ ರಸ್ತೆ ಪುನರ್ ನಿರ್ಮಾಣ
ಮುಖ್ಯ ಆಯುಕ್ತ ಗೌರವ್ ಗುಪ್ತ ಭರವಸೆ; ರಸ್ತೆಯಲ್ಲಿ ಭತ್ತ ನಾಟಿ ಮಾಡಿ ತೆಪ್ಪದಲ್ಲಿ ಪ್ರತಿಭಟನೆ
Team Udayavani, Sep 5, 2021, 2:40 PM IST
ಬೆಂಗಳೂರು: ರಸ್ತೆಗುಂಡಿ ಬಿದ್ದು ಹಾಳಾಗಿರುವ ಅಂಜನಾಪುರ ಮುಖ್ಯರಸ್ತೆ ಶೀಘ್ರವಾಗಿ ಪುನರ್ ನಿರ್ಮಾಣವಾಗಲಿದೆ ಎಂದು ಬಿಬಿಎಂಪಿ ಮುಖ್ಯ
ಆಯುಕ್ತ ಗೌರವ್ ಗುಪ್ತ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಂಜನಾಪುರ ಮುಖ್ಯರಸ್ತೆ ಮಳೆಯಿಂದಾಗಿ ಸಂಪೂರ್ಣಹಾಳಾಗಿದ್ದು, ರಸ್ತೆಗುಂಡಿಬಿದ್ದಿರುವುದಕ್ಕೆ
ಪ್ರತಿಭಟನೆ ನಡೆಸಿದ್ದಾರೆ. ಕೆಲವರು ಭತ್ತ ನಾಟಿ ಮಾಡಿ ತೆಪ್ಪದಲ್ಲಿ ತೆರಳಿರುವುದು ನನ್ನ ಗಮನಕ್ಕೆ ಬಂದಿದೆ ಎಂದು ಹೇಳಿದರು.
ಅಂಜನಾಪುರ ರಸ್ತೆಯನ್ನು ಬಿಡಿಎ ವತಿಯಿಂದ ನಿರ್ಮಿಸಲಾಗಿದ್ದು, ಅಲ್ಲಿನ ಪರಿಸ್ಥಿತಿಯನ್ನು ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುವುದು
ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರು ಭರವಸೆ ನೀಡಿದ್ದಾರೆ. ಆದಷ್ಟು ಬೇಗ ರಸ್ತೆ ಪುನರ್ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಇತ್ತೀಚೆಗೆ ಸುರಿದ ಮಳೆಯಿಂದ ನಗರದ ರಸ್ತೆಗಳು ಹಾಳಾಗಿವೆ. ಆ ರಸ್ತೆ ಗುಂಡಿಗಳನ್ನು ಮುಚ್ಚುವ ಹೊಣೆಯನ್ನು ವಲಯಮಟ್ಟದ ಮುಖ್ಯ
ಅಭಿಯಂತರರಿಗೆ ವಹಿಸಲಾಗಿದೆ. ಈ ಸಂಬಂಧ ಈಗಾಗಲೇ, ಮುಖ್ಯ ಅಭಿಯಂತರರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ವಲಯ
ಮಟ್ಟದಲ್ಲಿರುವ ಮುಖ್ಯ ಅಭಿಯಂತರರು ತಮ್ಮ ವ್ಯಾಪ್ತಿಗೆಬರುವ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವ ಕಾರ್ಯವನ್ನು ಈ ಕೂಡಲೇ
ಆರಂಭಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ಇದನ್ನೂ ಓದಿ:ಭೂಮಿ ಕುಪ್ಪಳಿಸುತ್ತೆ, ಭೂಕಂಪ ಅಕ್ತೈತಿ ಎಂದ ಬಬಲಾದಿ ಸಿದ್ದು ಮುತ್ಯಾ ಭವಿಷ್ಯ ನಿಜವಾಯ್ತು
ಸೋಂಕು ಹರಡದಂತೆ ಕ್ರಮ: ಶುಕ್ರವಾರ ಮಹದೇವಪುರದ ನರ್ಸಿಂಗ್ ಹೋಂನ 34 ಹಾಗೂ ಶನಿವಾರ ಧನ್ವಂತರಿ ಕಾಲೇಜಿನ 16 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ಹರಡಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸೋಂಕು ಹರಡದಂತೆ ಪಾಲಿಕೆಯಿಂದ ಹೆಚ್ಚು ನಿಗಾವಹಿಸಲಾಗಿದೆ. ಯಾವುದೇ ಪ್ರದೇಶದಲ್ಲಿ ಒಂದು ಸೋಂಕು ಪತ್ತೆಯಾದರೂ ಅಕ್ಕಪಕ್ಕದ ಎಲ್ಲ ಮನೆಯವರಿಗೂ ಕೋವಿಡ್ ಪರೀಕ್ಷೆ ನಡೆಸಲಾಗುತ್ತಿದೆ. ಸೋಂಕು ಸಂಖ್ಯೆ ಹೆಚ್ಚಳವಾಗಿರುವುದು ಕಂಡುಬಂದರೆ ಕಂಟೈನ್ಮೆಂಟ್ ಝೋನ್ ಮಾಡಿ ಮುಂಜಾಗ್ರತೆ
ವಹಿಸಲಾಗುವುದು ಎಂದು ತಿಳಿಸಿದರು.
ನಗರದಲ್ಲಿ ಪ್ರತಿನಿತ್ಯ 60 ಸಾವಿರಕ್ಕೂ ಹೆಚ್ಚು ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಸೋಂಕು ಹೆಚ್ಚಳಕ್ಕೆ ಅವಕಾಶ
ಕೊಡುವುದಿಲ್ಲ. ಜತೆಗೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಕೋವಿಡ್ ಪಾಲನೆಯೊಂದಿಗೆ ಮುನ್ನೆಚ್ಚರಿಕೆ ವಹಿಸಬೇಕು
ಎಂದು ಮನವಿ ಮಾಡಿದರು
ಗಣೇಶೋತ್ಸವದ ಬಗ್ಗೆ ಮಾಹಿತಿ ಸಂಗ್ರಹ
ಸಾರ್ವಜನಿಕ ಗಣೇಶೋತ್ಸವ ಆಚರಣಗೆ ಅವಕಾಶ ನೀಡುವ ವಿಚಾರದ ಬಗ್ಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳು ಹಾಗೂ ನಗರ ಪೊಲೀಸ್ ಆಯುಕ್ತರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.ಕಳೆದ ವರ್ಷ ಯಾವ ರೀತಿ ಆಚರಿಸಲಾಗಿತ್ತು ಎಂಬ ಮಾಹಿತಿಯನ್ನು ನೀಡಲಾಗಿದೆ. ಭಾನುವಾರ ನಡೆಯುವ ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆ ಸಂಬಂಧ ಮುಖ್ಯ ಮಂತ್ರಿಗಳು ನಿರ್ಧಾರ ತೆಗೆದು ಕೊಳ್ಳಲಿದ್ದಾರೆ ಎಂದು ಹೇಳಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಪ್ಪಣ್ಣ ಹೆಗ್ಡೆ-90ರ ಸಂಭ್ರಮ-ಅಪ್ಪಣ್ಣ ಹೆಗ್ಡೆ ಆತ್ಮವಿಶ್ವಾಸದ ಪ್ರತೀಕ : ಡಾ| ಹೆಗ್ಗಡೆ
Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ
Kundapura: ಸುಜ್ಞಾನ್ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್ ಆಚರಣೆ
Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ
ಡಿ. 31: ಸಾಸ್ತಾನ ಟೋಲ್ ವಿರುದ್ಧ ಬೃಹತ್ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.