ಮೆಟ್ರೋ ಹೆಚ್ಚುವರಿ ಟ್ರಿಪ್‌ಗ್ಳಲ್ಲಿ ದಾಖಲೆ ಪ್ರಯಾಣಿಕರು
Team Udayavani, Jan 9, 2018, 12:31 PM IST
ಬೆಂಗಳೂರು: ಕೆಲ ದಿನಗಳ ಹಿಂದೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ ಹೆಚ್ಚುವರಿ ಟ್ರಿಪ್‌ಗ್ಳನ್ನು ಮೆಟ್ರೋ ಸೋಮವಾರ ಆರಂಭಿಸಿದ್ದು, ಮೊದಲ ದಿನವೇ ದಾಖಲೆ ಪ್ರಮಾಣದಲ್ಲಿ ಪ್ರಯಾಣಿಕರು ಸಂಚರಿಸಿದ್ದಾರೆ. ಸೋಮವಾರ ಬೆಳಿಗ್ಗೆ 9-30ರಿಂದ 10-30ರ ವರೆಗಿನ ಪೀಕ್ ಅವರ್‌ನಲ್ಲಿ 44,356 ಮಂದಿ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ.
ಈ ಹಿಂದೆ ಇದೇ ಅವಧಿಯಲ್ಲಿ ಸುಮಾರು 40 ಸಾವಿರ ಜನ ಪ್ರಯಾಣಿಸಿದ್ದ ದಾಖಲೆ ಸರಿಗಟ್ಟಿದ್ದು, 4.50 ಸಾವಿರ ಹೆಚ್ಚು ಜನ ಪ್ರಯಾಣಿಸಿದ್ದಾರೆ. ಮೈಸೂರು ರಸ್ತೆಯಿಂದ ಬೈಯಪ್ಪನಹಳ್ಳಿ ನಡುವೆ ಪ್ರತಿ 3.50 ನಿಮಿಷಕ್ಕೊಂದರಂತೆ 16 ರೈಲು ಹಾಗೂ ಐದು ಶಾರ್ಟ್ ಲೂಪ್ ( ನೇರವಾಗಿ ಮೆಜೆಸ್ಟಿಕ್ -ಬೈಯಪ್ಪನಹಳ್ಳಿ) ರೈಲು ಕಾರ್ಯಾಚರಣೆ ಮಾಡಿವೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಜ. 2ರಂದು ಕೂಡ ಹೆಚ್ಚುವರಿ ಟ್ರಿಪ್‌ಗ್ಳನ್ನು ಪರಿಚಯಿಸಲಾಗಿತ್ತು. ಆದರೆ, ಈ ಸೇವೆ ಪರಿಚಯಿಸಿದ ದಿನವೇ ಒಂದೇ ಮಾರ್ಗದಲ್ಲಿ ಎರಡು ಬಾರಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆ ಉಂಟಾಗಿ ಮೆಟ್ರೋ ಸೇವೆಯಲ್ಲಿ ವ್ಯತ್ಯಯ ಆಗಿತ್ತು. ನಂತರ ಎರಡನೇ ದಿನಗಳಲ್ಲಿ ಈ ಹೆಚ್ಚುವರಿ ಟ್ರಿಪ್ ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್
Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!
Sagara: ಮಿಡಿ ಮಾವು, ವಿಶ್ವವಿದ್ಯಾಲಯದ ನಡೆದಾಡುವ ವಿಶ್ವಕೋಶ ಬಿ.ವಿ.ಸುಬ್ಬರಾವ್ ಇನ್ನಿಲ್ಲ
Perla: ರಸ್ತೆ ವಿಸ್ತರಣೆ, ನೇತ್ರಾವತಿ ನದಿ ತಡೆಗೋಡೆ ದುರಸ್ತಿಗೆ ಆಗ್ರಹ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.