ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ನೀಲನಕ್ಷೆ ಸಿದ್ಧ


Team Udayavani, Jul 4, 2019, 3:07 AM IST

bbmp

ಬೆಂಗಳೂರು: “ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ವಾರ್ಡ್‌ಗಳನ್ನು ಜನಸಂಖ್ಯೆ ಆಧಾರದ ಮೇಲೆ ಪುನರ್‌ ವಿಂಗಡಿಸಲು ನೀಲನಕ್ಷೆ ಸಿದ್ಧಪಡಿಸಲಾಗಿದ್ದು, ಅದನ್ನು ಕ್ಷೇತ್ರವಾರು ಕಂದಾಯ ಅಧಿಕಾರಿಗಳಿಗೆ ನೀಡಲಾಗಿದೆ’ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್‌ ಅವರು ತಿಳಿಸಿದ್ದಾರೆ.

ಬಿಬಿಎಂಪಿಯ ವಾರ್ಡ್‌ಗಳನ್ನು ಮರು ವಿಂಗಡಣೆ ಮಾಡುವ ಪ್ರಕ್ರಿಯೆ ಸಂಬಂಧ ಬುಧವಾರ ಮಲ್ಲೇಶ್ವರ ಐಪಿಪಿ ಕೇಂದ್ರದಲ್ಲಿ ಸಭೆ ಏರ್ಪಡಿಸಿ ಎಲ್ಲ ಕಂದಾಯ ಹಾಗೂ ಸಹಾಯ ಕಂದಯ ಅಧಿಕಾರಿಗಳಿಗೆ ಪ್ರಾತ್ಯಕ್ಷಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನೀಲನಕ್ಷೆಯನ್ನಾಧರಿಸಿ ಹೊಸ ವಾರ್ಡ್‌ಗಳ ರಚನೆಯಲ್ಲಿ ಕಂಡುಬರುವ ಲೋಪಗಳನ್ನು ಪಟ್ಟಿ ಮಾಡಿ ವಾರದೊಳಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಎಲ್ಲ 28 ವಿಧಾನಸಭಾ ಕ್ಷೇತ್ರವಾರು ಬರುವ ವಾರ್ಡ್‌ಗಳನ್ನು ಮರು ವಿಂಗಡಿಸಲಾಗಿದ್ದು, ಅದರ ನೀಲನಕ್ಷೆಯನ್ನು ಕ್ಷೇತ್ರವಾರು ಕಂದಾಯ ಅಧಿಕಾರಿಗಳಿಗೆ ನೀಡಲಾಗಿದ್ದು, ಅದನ್ನಾಧರಿಸಿ ಹೊಸದಾಗಿ ಮಾಡುತ್ತಿರುವ ವಾರ್ಡ್‌ಗಳ ಗಡಿ ರೇಖೆ ಬಳಿ ಕಂಡುಬರವ ಲೋಪಗಳನ್ನು ಪಟ್ಟಿ ಮಾಡಿ ವಾರದೊಳಗಾಗಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವಿತರಣೆ ಮಾಡುವ ನೀಲ ನಕ್ಷೆಯನ್ನಾಧರಿಸಿ ಎಲ್ಲ ಕಂದಾಯ ಹಾಗೂ ಸಹಾಯಕ ಕಂದಾಯ ಅಧಿಕಾರಿಗಳು ತಮ್ಮ ವಾರ್ಡ್‌ಗಳಿಗೆ ಭೇಟಿಕೊಟ್ಟು ಹೊಸ ವಾರ್ಡ್‌ಗಳ ವಿಸ್ತೀರ್ಣದ ಮಾಹಿತಿ, ಹಳೆಯ ವಾರ್ಡ್‌ಗಳಲ್ಲಿರುವ ಮತಗಟ್ಟೆಗಳು ಹೊಸ ವಾರ್ಡ್‌ ಗಡಿರೇಖೆ ಬೇರ್ಪಟ್ಟಿವೆೆಯೆ, ಬಡಾವಣೆ, ಕಾಲೊನಿಗಳು ಎರಡು ವಾರ್ಡ್‌ಗಳಿಗೆ ಹಂಚಿಕೆಯಾಗಿವೆಯೆ, ರಸ್ತೆಗಳ ಹೆಸರು ಬದಲಾಗಿದೆಯೆ ಎಂಬುದನ್ನು ಪಟ್ಟಿಮಾಡಿ ವರದಿ ಸಿದ್ಧಪಡಿಸಿ ಪಾಲಿಕೆಗೆ ಸಲ್ಲಿಸಲಿದ್ದು, ಅದನ್ನು ಪರಿಶೀಲಿಸಿ ಇರುವ ಲೋಪಗಳನ್ನು ಸರಿಪಡಿಸಲಾಗುವುದು.

ನಂತರ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರು ಹಾಗೂ ಪಾಲಿಕೆ ಸದಸ್ಯರಿಗೆ ಪ್ರಾತ್ಯಕ್ಷಿತೆ ನೀಡಿ ಅವರು ನೀಡುವ ಸಹಲೆಗಳನ್ನು ಪರಿಗಣಿಸಿ ಅಗತ್ಯ ಬದಲಾವಣೆ ಮಾಡಲಾಗವುದು. ಕೊನೆಗೆ ಒಂದು ತಿಂಗಳು ಸಾರ್ವಜನಿಕರ ಆಕ್ಷೇಪಣೆಗಳಿಗೆ ಅವಕಾಶ ನೀಡಲಾಗುವುದು. ನಂತರ ಅಗತ್ಯ ಮಾರ್ಪಾಡುಗಳನ್ನು ಮಾಡಿ ಅಂತಿಮ ಕರಡು ಸಿದ್ಧಪಡಿಸಿ ಹೊಸ ವಾರ್ಡ್‌ಗಳ ಮರುವಿಂಗಡನೆ ಮಾಡಲಾಗುವುದು’ ಎಂದು ತಿಳಿಸಿದರು.

“ಬಿಬಿಎಂಪಿ 198 ವಾರ್ಡ್‌ಗಳಲ್ಲಿ ಯಾವುದೇ ಬದಲಾವಣೆಗಳಿರುವುದಿಲ್ಲ. ಸರಾಸರಿ 42 ಸಾವಿರ ಅನುಪಾತದಲ್ಲಿ ವಾರ್ಡ್‌ಗಳ ಮರುವಿಂಗಡನೆ ಮಾಡಲಾಗುತ್ತಿದೆ. ಅದರಂತೆ ಆಯಾ ವಿಧಾನ ಸಭಾ ಕ್ಷೇತ್ರಗಳಲ್ಲಿರುವ ವಾರ್ಡ್‌ಗಳ ವಿಸ್ತೀರ್ಣ ಮಾತ್ರ ಬದಲಾಗುತ್ತಿದೆ. ಕೆಲ ವಿಧಾನಸಭಾ ಕ್ಷೇತ್ರದಲ್ಲಿ ವಾರ್ಡ್‌ಗಳ ಸಂಖ್ಯೆ ಕಡಿಮೆಯಾಗಲಿದ್ದು, ಇನ್ನು ಕೆಲವು ವಾರ್ಡ್‌ಗಳಲ್ಲಿ ಹೆಚ್ಚಳವಾಗಲಿವೆ. 13 ವಾರ್ಡ್‌ಗಳಲ್ಲಿ ಯಾವುದೇ ಬದಲಾವಣೆ ಮಾಡುತ್ತಿಲ್ಲ’ ಎಂದು ಹೇಳಿದರು.

ಸಭೆಯಲ್ಲಿ ವಿಶೇಷ ಆಯುಕ್ತರು(ಘನತ್ಯಾಜ್ಯ ನಿರ್ವಹಣೆ ಮತ್ತು ಆಡಳಿತ), ವಿಶೇಷ ಆಯುಕ್ತರು(ಹಣಕಾಸು ಮತ್ತು ಕಂದಾಯ), ಎಲ್ಲ ವಲಯಗಳ ಜಂಟಿ ಆಯುಕ್ತರು, ಕಂದಾಯ ವಿಭಾಗದ ಜಂಟಿ ಆಯುಕ್ತರು ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.

ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ: ಬೆಂಗಳೂರು ಮಹಾನಗರ ಪಾಲಿಕೆ(ಬಿಎಂಪಿ) ಇದ್ದ ವೇಳೆ ನಗರದಲ್ಲಿ 100 ವಾರ್ಡ್‌ಗಳಿದ್ದವು. ಬಳಿಕ 2007ರಲ್ಲಿ 7 ನಗರಸಭೆಗಳು, 1 ಪಟ್ಟಣ ಪಂಚಾಯತ್‌ ಹಾಗೂ 110 ಹಳ್ಳಿಗಳನ್ನು ಸೇರಿಸಿಕೊಂಡು ಒಟ್ಟು 198 ವಾರ್ಡ್‌ಗಳಂತೆ ಪುನರ್‌ ರಚಿಸಿ ಬಿಬಿಎಂಪಿಯನ್ನಾಗಿ ಮಾಡಲಾಯಿತು.

ಇದೀಗ 2011ರ ಜನಸಂಖ್ಯೆ (84,43,675)ಗೆ ಅನುಗುಣವಾಗಿ ವಾರ್ಡ್‌ಗಳನ್ನು ಮರುವಿಂಗಡಣೆ ಮಾಡಲಾಗುತ್ತಿದೆ. ಅದಕ್ಕಾಗಿ ಈಗಾಗಲೇ ನೀಲನಕ್ಷೆ ಸಿದ್ಧಪಡಿಸಿದ್ದು, ಯಾವ ವಿಧಾನಸಭಾ ಕ್ಷೇತ್ರದಲ್ಲಿ ಹೊಸ ವಾರ್ಡ್‌ಗಳನ್ನು ರಚಿಸಬೇಕು, ವಾರ್ಡ್‌ಗಳ ವ್ಯಾಪ್ತಿ ಎಷ್ಟಿರಬೇಕು ಎಂಬುದರ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗಿದೆ.

ಕ್ಷೇತ್ರವಾರು ಮರು ವಿಂಗಡನೆ ವಾರ್ಡ್‌ಗಳ ವಿವರ
ಹೊಸ ವಾರ್ಡ್‌ಕ್ಷೇತ್ರ ಹಳೆಯ ವಾರ್ಡ್‌
ಯಲಹಂಕ 4 4
ಮಹಾಲಕ್ಷ್ಮೀ ಲೇಔಟ್‌ 7 7
ಸಿ.ವಿ.ರಾಮನ್‌ ನಗರ 7 7
ವಿಜಯ ನಗರ 8 8
ಬಸವನಗುಡಿ 6 6
ಮಲ್ಲೇಶ್ವರ 7 6
ಹೆಬ್ಟಾಳ 8 7
ಪುಲಕೇಶಿನಗರ 7 6
ಶಿವಾಜಿನಗರ 7 5
ಶಾಂತಿನಗರ 7 6
ಗಾಂಧಿನಗರ 7 6
ರಾಜಾಜಿನಗರ 7 5
ಗೋವಿಂದರಾಜ ನಗರ 9 7
ಚಾಮರಾಜಪೇಟೆ 7 6
ಚಿಕ್ಕಪೇಟೆ 7 6
ಪದ್ಮನಾಭನಗರ 8 7
ಬಿ.ಟಿ.ಎಂ.ಲೆಔಟ್‌ 8 7
ಜಯನಗರ 7 5
ಕೆ.ಆರ್‌.ಪುರ 9 11
ಬ್ಯಾಟರಾಯನಪುರ 7 9
ಯಶವಂತಪುರ 5 7
ರಾಜರಾಜೇಶ್ವರಿ ನಗರ 9 11
ದಾಸರಹಳ್ಳಿ 8 10
ಸರ್ವಜ್ಞ ನಗರ 8 9
ಮಹದೇವಪುರ 8 10
ಬೊಮ್ಮನಹಳ್ಳಿ 8 10
ಬೆಂಗಳೂರು ದಕ್ಷಿಣ 7 9
ಆನೇಕಲ್‌ 1 1

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು

Ayurvedic Doctor: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದ ಆಯುರ್ವೇದಿಕ್‌ ವೈದ್ಯ…

Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್‌ ವೈದ್ಯ

3

Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.