ಅಕ್ರಮ ವಲಸಿಗರಿಗೆ ಕಡಿವಾಣ : ನೂತನ ಡಿಜಿ – ಐಜಿಜಿ ಪ್ರವೀಣ್ ಸೂದ್ ಸಂದರ್ಶನ


Team Udayavani, Feb 1, 2020, 10:31 AM IST

bng-tdy-2

ಬೆಂಗಳೂರು: ಜನಸಾಮಾನ್ಯ ಕೇಂದ್ರಿತ ಪೊಲೀಸ್‌ ವ್ಯವಸ್ಥೆಯನ್ನು ಬಲಪಡಿಸುವಗುರಿಹೊಂದಿದ್ದು ಗ್ರಾಮೀಣ ಭಾಗದ ಜನರ ಸಮಸ್ಯೆಗಳ ಪರಿಹಾರಕ್ಕೆ ಹತ್ತಿರವಾಗಿ ಇಲಾಖೆಯನ್ನು ಸದೃಢಗೊಳಿಸುವ ಮಹತ್ತರ ಗುರಿ ಹೊಂದಿದ್ದೇನೆ’ ಇದು ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರ ನೇರ ಮಾತು.

ರಾಜ್ಯ ಪೊಲೀಸ್‌ ಮಹಾನಿರ್ದೇಶಕರಾಗಿ ಶುಕ್ರವಾರ ಅಧಿಕಾರ ವಹಿಸಿಕೊಂಡ ಪ್ರವೀಣ್‌ ಸೂದ್‌ ಅವರು ಸೈಬರ್‌ ಅಪರಾಧಗಳಿಗೆ ಕಡಿವಾಣ, ಅಕ್ರಮ ವಲಸಿಗರಿಗೆ ಕಡಿವಾಣ, ಭಯೋತ್ಪಾದಕ ಚಟುವಟಿ ಕೆಗಳನ್ನು ಇಲ್ಲದಿರುವುಂತೆ ಮಾಡುವುದು ಸೇರಿದಂತೆ ಹಲವು ತಮ್ಮ ಕಾರ್ಯ ಯೋಜನೆಗಳ ಬಗ್ಗೆ” ಮಾಹಿತಿ ಹಂಚಿಕೊಂಡಿದ್ದಾರೆ.

 “ಜನಸ್ನೇಹಿ’ ಪೊಲೀಸ್‌ ವ್ಯವಸ್ಥೆ ಹೇಗೆ ಬಲಪಡಿಸುವಿರಿ? :  

  ಪೊಲೀಸ್‌ ಇಲಾಖೆಯ ಮುಖ್ಯಸ್ಥನಾಗಿ ಕೆಲಸ ಮಾಡುವ ಅವಕಾಶ ಓದಗಿ ಬಂದಿದೆ. ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಸಹಕಾರದೊಂದಿಗೆ ಜನಸಾಮಾನ್ಯರ ಕೇಂದ್ರಿತವಾಗಿ ಕೆಲವು ಕನಸು ಕಂಡಿದ್ದೇವೆ. ನಗರ ಪ್ರದೇಶದ ನಾಗರೀಕರು ಮಾತ್ರವಲ್ಲದೆ ಗ್ರಾಮೀಣ ಭಾಗದ ಜನರು ಕೂಡ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಅವರಿಗೆ ನ್ಯಾಯ ಸಿಗುವ ನಿಟ್ಟಿನಲ್ಲಿ ಪೊಲೀಸರ ಸೇವೆಯನ್ನು ಒದಗಿಸಲು ಕಾರ್ಯಯೋಜನೆ ರೂಪಿಸುವ ಗುರಿಯಿದೆ.

ಇಲಾಖೆಗೆ ತಾಂತ್ರಿಕ ಆಧುನೀಕರಣ ವ್ಯವಸ್ಥೆ ಎಷ್ಟರ ಮಟ್ಟಿಗಿದೆ?:  

ರಾಜ್ಯದ ಆರೂವರೆ ಕೋಟಿ ಜನಸಂಖ್ಯೆಗೆ ಒಂದು ಲಕ್ಷ ಪೊಲೀಸ್‌ ಸಿಬ್ಬಂದಿ ಇದ್ದೇವೆ. ಹೀಗಾಗಿ ಇರುವ ಪೊಲೀಸ್‌ ಬಲವನ್ನು ಬಳಸಿಕೊಂಡು ಅದರ ಜತೆಗೆ ನಾಗರೀಕರಿಗೆ ಪೊಲೀಸ್‌ ಸೇವೆ ತ್ವರಿತಗತಿಯಲ್ಲಿ, ಪರಿಣಾಮಕಾರಿಯಾಗಿ ಸಿಗುವ ನಿಟ್ಟಿನಲ್ಲಿ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳಬೇಕಿದೆ. ನಾಗರಿಕರು ನೇರವಾಗಿ ಇಲಾಖೆಯ ಜತೆ ಸಂಪರ್ಕವಿರಬಹುದಾದ ಕೆಲವು ತಾಂತ್ರಿಕ ಯೋಜನೆಗಳು ಮನಸ್ಸಿನಲ್ಲಿದ್ದು ಅವುಗಳನ್ನು ಅಧಿಕಾರಿಗಳ ಜತೆ ಚರ್ಚಿಸಿ ಜಾರಿಗೊಳಿಸುತ್ತೇನೆ.

ರಾಜ್ಯದಲ್ಲಿ ಅಕ್ರಮ ವಲಸಿಗರಿಗೆ ಕಡಿವಾಣಕ್ಕೆ ನಿಮ್ಮ ಯೋಜನೆ ಏನು?:  

ರಾಜ್ಯ ಹಾಗೂ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಪತ್ತೆ ಹಾಗೂ ಮುಂದಿನ ಕಾನೂನು ಕ್ರಮಗಳ ಕುರಿತು ಕ್ರಮ ವಹಿಸಬೇಕಿದೆ. ಈ ಬಗ್ಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಗೃಹಸಚಿವರ ಜತೆ ಸಭೆ ನಡೆಸಿ ಮುಂದಿನ ಕ್ರಮಗಳನ್ನು ಕೈಗೊಳ್ಳುತ್ತೇನೆ. „ ಸೈಬರ್‌ ಅಪರಾಧ ತಡೆಗೆ ಕ್ರಮ ಏನು? ಪ್ರಸ್ತುತ ನಾಗರಿಕರು ಎದುರಿಸುತ್ರಿರುವ ಕಠಿಣ ಅಪರಾಧ ಇದಾಗಿದೆ. ಈಗಾಗಲೇ ಸಿಐಡಿಯ ಡಿಜಿ ಆಗಿದ್ದಾಗ ಸೈಬರ್‌ ಕ್ರೈಂ ಕಡಿವಾಣಕ್ಕೆ ಸಿಬ್ಬಂದಿಗೆ ಅಗತ್ಯವಾದ ತರಬೇತಿ, ಮಾರ್ಗದರ್ಶನ ತಾಂತ್ರಿಕತೆಯನ್ನು ಪರಿಚಯಿಸಲಾಗಿದೆ. ಸೈಬರ್‌ ಅಪರಾಧದ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕಿದೆ. ಸೈಬರ್‌ ಅಪರಾಧವೇ ನಡೆಯದ ಹಾಗೆ ಜನರನ್ನು ಎಚ್ಚರಿಸಬೇಕಿತ್ತು ಈ ನಿಟ್ಟಿನಲ್ಲಿ ಕ್ರಮ ವಹಿಸುತ್ತೇನೆ.

ರಾಜ್ಯ ಭಯೋತ್ಪಾದನಾ ಚಟುವಟಿಕೆಗಳ ಸ್ಲೀಪರ್‌ ಸೆಲ್‌ ಆಗುತ್ತಿದೆ ಎಂಬ ಆರೋಪ ಇದೆಯಲ್ಲ? :

  ಈ ಸಮಸ್ಯೆ ಬುಡಸಮೇತ ಕಿತ್ತುಹಾಕುವ ಕ್ರಮ ಆಗಬೇಕಿದೆ. ಇದರ ಕಾರ್ಯನಿರ್ವ ಹಣೆಗೆ ಇಲಾಖೆಯಲ್ಲಿ ಕೆಲವು ವಿಭಾಗಗಳಿದ್ದು ಹೀಗಿರುವ ಕಾರ್ಯಶೈಲಿ ಅವಲೋಕನನಡೆಸಬೇಕಿದೆ. ಇದನ್ನು ಮಟ್ಟ ಹಾಕಲು ಯಾವ ಕ್ರಮಗಳನ್ನು ಅನುಸರಿಸಬೇಕು ಎಂಬುದರ ಬಗ್ಗೆ ಕ್ರಮ ವಹಿಸಲಾಗುತ್ತದೆ.

ಅಧಿಕಾರಿಗಳು, ಸಿಬ್ಬಂದಿಗೆ ನಿಮ್ಮ ಸಂದೇಶ ಏನು? :  

ಪೊಲೀಸ್‌ ಇಲಾಖೆ ಎಂದರೆ “ಪ್ರವೀಣ್‌ ಸೂದ್‌’ ಮಾತ್ರವಲ್ಲ. ಇದೊಂದು ಸಧೃಡ ವ್ಯವಸ್ಥೆ. ಈ ವ್ಯವಸ್ಥೆಯ ಮುಖ್ಯಸ್ಥನಾಗಿ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಹೆಮ್ಮೆ ಎನಿಸುತ್ತದೆ. ಇಲಾಖೆಯ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಜತೆ ನಾನಿದ್ದು ಒಟ್ಟಿಗೆ ಕರೆದೊಯ್ಯುತ್ತೇನೆ. ಅವರ ಅಭಿಪ್ರಾಯಗಳಿಗೆ ಮನ್ನಣೆ ನೀಡಲಿದ್ದೇನೆ. ಅವರ ಸಮಸ್ಯೆಗಳಿಗೂ ಸ್ಪಂದಿಸಿ ಕಾರ್ಯನಿರ್ವ ಹಿಸುತ್ತೇನೆ. ಆದರೆ, ತಪ್ಪು ಮಾಡಿದರೆ ಶಿಕ್ಷೆಯೂ ಸಿಗಲಿದೆ.

ಇಲಾಖೆಯ ಮುಖ್ಯಸ್ಥನಾಗಿ ಕಾರ್ಯನಿರ್ವಹಿಸಲು ಅವಕಾಶ ನೀಡಿದ ಮುಖ್ಯಮಂತ್ರಿಗಳು, ಗೃಹ ಸಚಿವರಿಗೆ ಧನ್ಯವಾದ. ರಾಜ್ಯದ ಆರೂವರೆ ಕೋಟಿ ಜನರ ಸೇವೆ ಮಾಡಲು ಅವಕಾಶ ಸಿಕ್ಕಿರುವುದು ಪುಣ್ಯ ಎಂದು ಭಾವಿಸುತ್ತೇನೆ -ಪ್ರವೀಣ್‌ ಸೂದ್‌, ರಾಜ್ಯ ಪೊಲೀಸ್‌ಮಹಾನಿರ್ದೇಶಕ

 

ಮಂಜುನಾಥ ಲಘುಮೇನಹಳ್ಳಿ

ಟಾಪ್ ನ್ಯೂಸ್

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

KN-Rajaanna

Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ

Naxals-Meet-Cm

Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.