ಪ್ರಾದೇಶಿಕ ಅಸ್ಮಿತೆ ಅಳವಡಿಕೆ ಅತ್ಯವಶ್ಯ


Team Udayavani, Jun 20, 2018, 11:56 AM IST

pradeshika.jpg

ಬೆಂಗಳೂರು: ಕೇವಲ ಭೌಗೋಳಿಕ ಹಿನ್ನೆಲೆಯಲ್ಲಿ ಪ್ರಾದೇಶಿಕ ಪಕ್ಷವಾದರೆ ಸಾಲದು. ತನ್ನ ಕಾರ್ಯಸೂಚಿಯಲ್ಲಿ ಪ್ರಾದೇಶಿಕತೆ ಅಸ್ಮಿತೆ ಅಳವಡಿಸಿಕೊಳ್ಳಬೇಕಾದ ಅವಶ್ಯಕತೆ ಇದೆ ಎಂದು ಸಾಹಿತಿ ಡಾ.ಬರಗೂರು ರಾಮಚಂದ್ರಪ್ಪ ಹೇಳಿದ್ದಾರೆ.

ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಮಂಗಳವಾರ ಕರ್ನಾಟಕ ವಿಕಾಸರಂಗ ಹಮ್ಮಿಕೊಂಡಿದ್ದ ವ.ಚ.ಚನ್ನೇಗೌಡ ಅವರ “ಕರ್ನಾಟಕದ ರಕ್ಷಣೆ ನಮ್ಮೆಲ್ಲರ ಹೊಣೆ’ ಪುಸ್ತಕ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪ್ರಾದೇಶಿಕ ಪಕ್ಷಗಳಿಗೆ ಮುಖ್ಯವಾಗಿ ಪ್ರಾದೇಶಿಕ ಪ್ರಜ್ಞೆ ಅವಶ್ಯವಾಗಿದೆ. ಆದರೆ, ಇಂದು ದೇಶದ ಎಲ್ಲಾ ಪ್ರಾದೇಶಿಕ ಪಕ್ಷಗಳೂ ತಮ್ಮ ನಾಡಿನ ಸಂಸ್ಕೃತಿ ಹಾಗೂ ಸೈದಾಂತಿಕ ನಿಲುವು ಮರೆತು ಕಾರ್ಯಚಟುವಟಿಕೆ ನಡೆಸುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.

ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ಕೇಂದ್ರ ಸರ್ಕಾರವು ಒಂದು ದೇಶ-ಒಂದು ತೆರಿಗೆ ಎಂದು ಹೇಳಿಕೊಂಡು ಜಿಎಸ್‌ಟಿ ಜಾರಿಗೆ ತಂದು ಒಕ್ಕೂಟ ವ್ಯವಸ್ಥೆಗೆ ದಕ್ಕೆ ತಂದಿದೆ. ರಾಜ್ಯಗಳು ಕೇಂದ್ರದ ಎದುರು ಅನುದಾನಕ್ಕೆ ಭಿಕ್ಷೆ ಬೇಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮುಂದೊಂದು ದಿನ ಒಂದೇ ದೇಶ- ಒಂದೇ ಭಾಷೆ ಎಂಬ ನಿಯಮವನ್ನು ಜಾರಿಗೆ ತಂದು ಪ್ರಾದೇಶಿಕತೆಗೆ ದಕ್ಕೆ ತರಬಹುದು ಎಂದು ಆತಂಕ ವ್ಯಕ್ತಪಡಿಸಿದರಲ್ಲದೆ, ನಮ್ಮದು ವೈವಿಧ್ಯತೆಯಿಂದ ಕೂಡಿದ ದೇಶವಾಗಿರುವುದರಿಂದ ನಿಯಮಗಳಲ್ಲಿ ಏಕ ಮಾರ್ಗವನ್ನು ಕೈಬಿಡುವುದು ಒಳಿತು ಎಂದರು.  

ಪ್ರತಿಭಟನೆ ಅಥವಾ ಹೋರಾಟ ಎಂದರೆ ಕೇವಲ ಅಬ್ಬರಿಸಿ ಬೊಬ್ಬಿರಿಯುವುದಲ್ಲ. ಅದೊಂದು ನಮ್ರತೆಯ ಹಾಗೂ ಸಜ್ಜನಿಕೆಯ ಮೂಲಕ ವಿಷಯ ಪ್ರತಿಪಾದನೆ ಮಾಡುವ ಸಂಗತಿ. ಈ ನಿಟ್ಟಿನಲ್ಲಿ ಕನ್ನಡ ಪರ ಹೋರಾಟಗಾರಿಗೆ ಚಿಂತಕರ ಮಾರ್ಗದರ್ಶನದ ಅವಶ್ಯಕತೆ ಇದೆ. ಆದರೆ, ನಮ್ಮ ಚಿಂತಕರು ಹಾಗೂ ಹೋರಾಟಗಾರರ ನಡುವೆ ಬಹುದೊಡ್ಡ ಕಂದಕವಿದ್ದು, ಇದರಿಂದ ಕನ್ನಡ ಭಾಷೆ ಬೆಳವಣಿಗೆಗೆ ಸಮಸ್ಯೆಯಾಗುತ್ತಿದೆ. ಹಾಗಾಗಿ ಎರಡೂ ಪಂಗಡಗಳು ಒಟ್ಟಾಗಿ ಕುಳಿತು ಚರ್ಚೆ ಮಾಡಿ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ಕನ್ನಡ ಪರ ಚಿಂತಕ ರಾ.ನಂ.ಚಂದ್ರಶೇಖರ ಮಾತನಾಡಿ, ಕರ್ನಾಟಕದ ರಕ್ಷಣೆ ನಮ್ಮೆಲ್ಲರ ಹೊಣೆ ಪುಸ್ತಕದಲ್ಲಿ ವ.ಚ.ಚನ್ನೇಗೌಡ ಅವರು ಕನ್ನಡ ನಾಡು, ನುಡಿ ಹಾಗೂ ಹೋರಾಟಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ. ಕನ್ನಡ ಪರ ಹೋರಾಟಗಾರಿಗೆ ಬೇಕಾದ ಅಗತ್ಯ ಮಾಹಿತಿ ಇದರಲ್ಲಿದೆ ಎಂದು ತಿಳಿಸಿದರು. ಕಸಾಪ ಅಧ್ಯಕ್ಷ  ಡಾ.ಮನು ಬಳಿಗಾರ್‌ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

6-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕಳ್ಳತನ: ಇಬ್ಬರು ಆರೋಪಿಗಳ ಸೆರೆ‌, 60 ಫೋನ್‌ ಜಪ್ತಿ

5-bng

Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ

4-bng

Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

Katpadi: ಸ್ಕೂಟರ್‌ಗೆ ಟೆಂಪೋ ಢಿಕ್ಕಿ 

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Karkala: ಬೈಕ್‌ ಢಿಕ್ಕಿ; ಗಾಯ

Karkala: ಬೈಕ್‌ ಢಿಕ್ಕಿ; ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Kundapura: ರಿಕ್ಷಾದಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.