ನಗರ ಸುಂದರವಾಗಿಡಲು 10ಸಾವಿರ ಕೋಟಿ ಬಿಡುಗಡೆ
Team Udayavani, Sep 26, 2018, 12:42 PM IST
ಯಲಹಂಕ: ನಗರದ ಸ್ಲಂಗಳು ಸೇರಿದಂತೆ ಬೆಂಗಳೂರನ್ನು ಸುಂದರವಾಗಿಡಲು 10ಸಾವಿರ ಕೋಟಿ ಬಿಬಿಎಂಪಿಗೆ ಬಿಡುಗಡೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಯಲಹಂಕ ವಲಯದ ಯಲಹಂಕ ಉಪನಗರ ವಾರ್ಡ್-4ರ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ನಗರದಲ್ಲಿ 259ದಲಿತ ಕುಟುಂಬಗಳಿಗೆ ನಿವೇಶನದ ಕ್ರಯಪತ್ರಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,ನಗರದ ಸ್ಲಮ್‌ಗಳ ಅಭಿವೃದ್ಧಿ, ರಸ್ತೆ, ಮೂಲಭೂತ ಸೌಕರ್ಯಗಳಿಗೆ ಬಿಬಿಎಂಪಿಗೆ ಅನುದಾನ ನೀಡಿದೆ.
ಈ ಹಣವನ್ನು ಕಾರ್ಪೋರೆಟರ್‌ಗಳು ಸರಿಯಾದ ರೀತಿಯಲ್ಲಿ ಉಪಯೋಗಿಸಬೇಕೆಂದು ಮನವಿ ಮಾಡಿದರು. ಬೆಂಗಳೂರು ಅಭಿವೃದ್ಧಿª ದಾರಿಯಲ್ಲಿ ಹೊಸ ಪ್ರಯೋಗ ಮಾಡಲು ಸರ್ಕಾರ ಮುಂದಾಗಿದ್ದು ಫ್ಲೈಓವರ್‌ಗಳು ಸೇರಿದಂತೆ ಅನೇಕ ಅಭಿವೃದ್ಧಿª ಕಾರ್ಯಗಳನ್ನು ಕೈಗೊಂಡಿದೆ.ಎಂದ ಅವರು ಯಲಹಂಕದ ಅಂಬೇಡ್ಕರ್ ನಗರದಲ್ಲಿ ಕಾವೇರಿ ನೀರು ಸೌಲಭ್ಯ ಕಲ್ಪಿಸಲು 32ಲಕ್ಷ ರೂ. ಅನುದಾನವನ್ನು ನೀಡಿದೆ ಎಂದು ಹೇಳಿದರು.
ಶಾಸಕ ಎಸ್.ಆರ್.ವಿಶ್ವನಾಥ್ ಮಾತನಾಡಿ ಬಿಬಿಎಂಪಿ ವ್ಯಾಪ್ತಿಯ ಸ್ಲಮ್‌ಗಳಲ್ಲಿ ಒಂಟಿ ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ ಅಗತ್ಯ ಅನುದಾನ ನೀಡಿ ಎಲ್ಲಾ ಬಡವರು ಸೂರು ನಿರ್ಮಿಸಿಕೊಳ್ಳಲು ಅನುವು ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು. ಸಂಸದ ವೀರಪ್ಪ ಮೊಯಿಲಿ, ಡಿಎಸ್.ಎಸ್. ಮುಖಂಡ ಮಾರಪ್ಪ ಬಿಬಿಎಂಪಿ ವಾರ್ಡ್ -4ರಸದಸ್ಯ ಎಂ.ಸತೀಶ್, ನೇತ್ರ ಪಲ್ಲವಿ, ಪದ್ಮಾವತಿ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Bengaluru:ಬೈಕ್ ಶೋರೂಂನಲ್ಲಿ ಬೆಂಕಿ ಅವಘಡ; ಸುಟ್ಟು ಹೋದ 50ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.