93 ಕೈದಿಗಳಿಗೆ ಬಿಡುಗಡೆ ಭಾಗ್ಯ​​​​​​​

Team Udayavani, Aug 10, 2018, 6:35 AM IST

kashempur.jpg

ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ವೇಳೆ ರಾಜ್ಯದ ವಿವಿಧ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 93 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಬಿಡುಗಡೆ ಮಾಡಲು ಸಚಿವ ಸಂಪುಟ ನಿರ್ಧರಿಸಿದೆ.

ಗುರುವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಬಿಡುಗಡೆಯಾಗಬೇಕಿರುವ ಕೈದಿಗಳ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನಿಸಿ ಅವರ ಅನುಮೋದನೆ ಪಡೆಯಲು ನಿರ್ಧರಿಸಲಾಯಿತು.

ಸಭೆ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ, ಸಂವಿಧಾನದ 161ನೇ ಪರಿಚ್ಛೇದದಂತೆ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ 93 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿಪೂರ್ವ ಬಿಡುಗಡೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಪ್ರಕರಣ ವಾಪಸ್‌ ಕುರಿತು ಸಂಪುಟ ಉಪಸಮಿತಿ:
ರಾಜ್ಯದ ನಾನಾ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿ ಪ್ರಸ್ತುತ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಯಲ್ಲಿರುವ ಅಪರಾಧ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಗೃಹ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ನೇತೃತ್ವದಲ್ಲಿ ಸಂಪುಟ ಉ ಸಮಿತಿ ರಚಿಸಲು ನಿರ್ಧರಿಸಲಾಗಿದೆ. ಸಾರಿಗೆ ಸಚಿವರು, ಸಣ್ಣ ಕೈಗಾರಿಕೆ ಸಚಿವರು, ಕೃಷಿ ಸಚಿವರು, ಪೌರಾಡಳಿತ, ಬಂದರು ಮತ್ತು ಮೀನುಗಾರಿಕೆ ಸಚಿವರು, ಸಹಕಾರ ಸಚಿವರು ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಇದರ ಸದಸ್ಯರಾಗಿರುತ್ತಾರೆ ಎಂದು ಅವರು ತಿಳಿಸಿದರು.

ಉಳಿದಂತೆ ವಸತಿ ಶಿಕ್ಷಣ ಸಂಸ್ಥೆಗಳ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶೂ, ಸಾಕÕ…, ಟೈ, ಬೆಲ್ಟ…ಗಳನ್ನು 10.36 ಕೋಟಿ ರೂ. ವೆಚ್ಚದಲ್ಲಿ ವಿತರಿಸಲು, ಹಾಸನ ಜಿಲ್ಲೆ ಹೊಳೇನರಸೀಪುರ- ಮಾವಿನಕೆರೆ ರೈಲ್ವೆ ಮಾರ್ಗದಲ್ಲಿ ಕೇಂದ್ರ ಸರ್ಕಾರದ ನೆರವಿನೊಂದಿಗೆ 39.93 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮೇಲು ಸೇತುವೆ ಕೂಡು ರಸ್ತೆ ನಿರ್ಮಾಣಕ್ಕೆ ಸಂಪುಟ ಅನುಮೋದನೆ ನೀಡಿದೆ ಎಂದರು.

ಕೆಎಎಸ್‌ ಬಡ್ತಿ ವರ್ಷಮಿತಿ ಇಳಿಕೆ:
ಕೆಎಎಸ್‌ ಅಧಿಕಾರಿಗಳ ಪದೋನ್ನತಿಗಾಗಿ ನಿಗದಿಪಡಿಸಿರುವ ಸೇವಾವಧಿಯನ್ನು ತಲಾ ಒಂದು ವರ್ಷ ಕಾಲ ಇಳಿಸಲು ನಿರ್ಧರಿಸಲಾಗಿದೆ. ಅದರಂತೆ ನೇಮಕಾತಿಯಿಂದ ಸೂಪರ್‌ಟೈಂ ಸ್ಕೇಲ್‌ ಹುದ್ದೆಗೆ ಬಡ್ತಿ ನೀಡಲು ಈ ಹಿಂದೆ ಇದ್ದು 14 ವರ್ಷ ಸೇವಾವಧಿಯನ್ನು 13 ವರ್ಷಕ್ಕೆ ಮತ್ತು ಸೂಪರ್‌ ಟೈಂ ಸ್ಕೇಲ್‌ನಿಂದ ಸೀನಿಯರ್‌ ಸೂಪರ್‌ ಟೈಂ ಸ್ಕೇಲ್‌ ಹುದ್ದೆಗೆ ಬಡ್ತಿ ನೀಡಲು ಈ ಹಿಂದೆ ಇದ್ದ 16 ವರ್ಷದ ಅವಧಿಯನ್ನು 15 ವರ್ಷಕ್ಕೆ ಇಳಿಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ

No support for liquor bandh: Tourism Hotel Owners Association

Liquor: ಮದ್ಯ ಬಂದ್‌ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.