ಬಿಎಸ್‌ವೈ ಆಪ್ತ ಸಂತೋಷ್‌ಗೆ ರಿಲೀಫ್
Team Udayavani, Mar 3, 2018, 12:26 PM IST
ಬೆಂಗಳೂರು: ವಿನಯ್ ಅಪಹರಣ ಪ್ರಕರಣದ ಆರೋಪಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆಪ್ತ ಸಂತೋಷ್‌ಗೆ ನೀಡಲಾದ ನಿರೀಕ್ಷಣಾ ಜಾಮೀನು ರದ್ದುಪಡಿಸಬೇಕೆಂದು ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು 62ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.
ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸಂತೋಷ್ ನ್ಯಾಯಾಲಯ ನೀಡಿರುವ ನಿರೀಕ್ಷಣಾ ಜಾಮೀನು ಷರತ್ತುಗಳನ್ನು ಉಲ್ಲಂಘನೆ ಮಾಡಿದ್ದು ಅದನ್ನುರದ್ದುಗೊಳಿಸವಂತೆ ಪ್ರಕರಣದ ತನಿಖಾಧಿಕಾರಿ, ಮಲ್ಲೇಶ್ವರಂ ಉಪವಿಭಾಗದ ಎಸಿಪಿ ಎ.ಆರ್.ಬಡಿಗೇರ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಈ ಸಂಬಂಧ ಫೆ.27ರಂದು ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.
ಅಪಹರಣ ಪ್ರಕರದಲ್ಲಿ ರೌಡಿಶೀಟರ್ ಸೇರಿ ಆರು ಮಂದಿ ಆರೋಪಿಗಳು ಬಂಧನವಾಗುತ್ತಿದ್ದಂತೆ ಸಂತೋಷ್ ನಿರೀಕ್ಷಣಾ ಜಾಮೀನು ಪಡೆದುಕೊಂಡಿದ್ದರು. ಈ ವೇಳೆ ಪೊಲೀಸರ ತನಿಖೆಗೆ ಸಹಕರಿಸಬೇಕು. ಹೊರರಾಜ್ಯಕ್ಕೆ ಹೋಗಬಾರದು ಎಂಬ ಇತರೆ ಷರತ್ತುಗಳನ್ನು ಕೋರ್ಟ್ ವಿಧಿಸಿತ್ತು. ಆದರೆ, ಸಂತೋಷ್ ತನಿಖೆಗೆ ಸಹಕಾರ ನೀಡದೆ ಸಬೂಬು ಹೇಳಿ ತಪ್ಪಿಸಿಕೊಳ್ಳುತ್ತಿದ್ದರು.
ತನಿಖೆಗೆ ತನ್ನ ಮೊಬೈಲ್ ಕೊಡದೆ ನಿಯಮ ಉಲ್ಲಂ ಸಿದ್ದಾನೆ ಎಂದು ಆರೋಪಿಸಿ ಪೊಲೀಸರು ಅರ್ಜಿ ಸಲ್ಲಿಸಿದ್ದರು. ಈ ಮಧ್ಯೆ ಆರೋಪಿ ಸಂತೋಷ್ ನ್ಯಾಯಾಲಯಕ್ಕೆ ಮತ್ತೂಂದು ಅರ್ಜಿ ಸಲ್ಲಿಸಿದ್ದು, ಕಾರ್ಯಕ್ರಮ ನಿಮಿತ್ತ ದೇಶ, ವಿದೇಶ ಹೋಗಬೇಕಿದೆ. ಅದಕ್ಕೆ ನ್ಯಾಯಾಲಯ ಅನುಮತಿ ನೀಡಬೇಕು ಎಂದು ಮನವಿ ಮಾಡಿದ್ದಾನೆ. ಈ ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮಾ.3ಕ್ಕೆ ಮುಂದೂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.