ನಗರದ ವಿವಿಧೆಡೆ ಗಣರಾಜ್ಯೋತ್ಸವ ಸಂಭ್ರಮ


Team Udayavani, Jan 27, 2018, 12:43 PM IST

nagara-vivi.jpg

ಬೆಂಗಳೂರು: ನಗರದ ವಿವಿಧೆಡೆ 69ನೇ ಗಣರಾಜ್ಯೋತ್ಸವವನ್ನು ಸಡಗರ-ಸಂಭ್ರಮದಿಂದ ಆಚರಿಸಲಾಯಿತು. ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಮೆಟ್ರೋ, ಬೆಂಗಳೂರು ವಿಶ್ವವಿದ್ಯಾಲಯ, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ವಕೀಲರ ಸಂಘ, ಬಿಬಿಎಂಪಿ, ಸಂಘ-ಸಂಸ್ಥೆಗಳು, ಶಾಲಾ-ಕಾಲೇಜುಗಳಲ್ಲಿ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿತ್ತು.

ತ್ರಿವರ್ಣ ಧ್ವಜಾರೋಹಣ, ದೇಶಭಕ್ತಿ ಗೀತೆಗಳ ಗಾಯನ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸಹಿ ಹಂಚಿಕೆ ಗಣರಾಜ್ಯೋತ್ಸವ ಸಡಗರ ಹೆಚ್ಚಿಸಿತ್ತು. ಬಿಎಂಆರ್‌ಸಿಎಲ್‌: “ನಮ್ಮ ಮೆಟ್ರೋ’ ಕಚೇರಿಯಲ್ಲಿ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.

ಬೈಯಪ್ಪನಹಳ್ಳಿ ಡಿಪೋದಲ್ಲಿ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎಲ್‌.ಕೆ. ಅತೀಕ್‌ ಧ್ವಜಾರೋಹಣ ನೆರವೇರಿಸಿದರು. ಬಿಎಂಆರ್‌ಸಿಎಲ್‌ ಕಾರ್ಯನಿರ್ವಹಣಾ ನಿರ್ದೇಶಕ (ಕಾರ್ಯಾಚರಣೆ ಮತ್ತು ನಿರ್ವಹಣೆ) ಶಂಕರ ಮತ್ತು ಮುಖ್ಯ ಭದ್ರತಾ ಅಧಿಕಾರಿ ಪಿ.ಎಸ್‌.ಬಿ. ನಾಯರ್‌ ಉಪಸ್ಥಿತರಿದ್ದರು.  

ಬಿಎಂಟಿಸಿ: ಶಾಂತಿನಗರದಲ್ಲಿರುವ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಸಿಹಿ ಹಂಚಿ ಸಂಭ್ರಮಿಸಲಾಯಿತು. ಬಿಎಂಟಿಸಿ ಅಧ್ಯಕ್ಷ ಎಂ. ನಾಗರಾಜು (ಯಾದವ್‌) ಧ್ವಜಾರೋಹಣ ನೆರವೇರಿಸಿದರು. ನಿರ್ದೇಶಕ (ಭದ್ರತೆ ಮತ್ತು ಜಾಗೃತಿ) ಡಾ.ಎ.ಎನ್‌. ಪ್ರಕಾಶಗೌಡ, ಇತರ ಅಧಿಕಾರಿಗಳು ಉಪಸ್ಥಿತರಿದ್ದರು.  

ಕೆಎಸ್‌ಆರ್‌ಟಿಸಿ: ಗಣರಾಜ್ಯೋತ್ಸವದ ಅಂಗವಾಗಿ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪಥಸಂಚಲನದಲ್ಲಿ ಇದೇ ಮೊದಲ ಬಾರಿ ಕೆಎಸ್‌ಆರ್‌ಟಿಸಿ ಭದ್ರತಾ ಸಿಬ್ಬಂದಿ ಭಾಗವಹಿಸಿದ್ದರು. ನಿಗಮದ ಹಾಸನ ವಿಭಾಗದ ಭದ್ರತಾ ಸಿಬ್ಬಂದಿ ಸೋಮಯ್ಯ ನೇತೃತ್ವದಲ್ಲಿ 33 ಭದ್ರತಾ ಸಿಬ್ಬಂದಿ ಪರೇಡ್‌ನ‌ಲ್ಲಿ ಪಾಲ್ಗೊಂಡಿದ್ದರು.  ಈ ನಡುವೆ ಶಾಂತಿನಗರದ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಯಲ್ಲಿ ಸಿಬ್ಬಂದಿ ಮತ್ತು ಅಧಿಕಾರಿಗಳ 1,095 ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ನಿಗಮದ ಉಪಾಧ್ಯಕ್ಷ ಬಸವರಾಜ ಬುಳ್ಳಾ, ವ್ಯವಸ್ಥಾಪಕ ನಿರ್ದೇಶಕ ಎಸ್‌.ಆರ್‌. ಉಮಾಶಂಕರ್‌ ಪ್ರತಿಭಾ ಪುರಸ್ಕಾರ ಮಾಡಿದರು. ನಿರ್ದೇಶಕ ಕೆ. ಶ್ರೀನಿವಾಸ ಮತ್ತಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಲಾಲಾಬಾಗ್‌ನಲ್ಲಿ ಜರುಗಿದ ರಾಜ್ಯಮಟ್ಟದ ಫ‌ಲಪುಷ್ಪ ಪ್ರದರ್ಶನದಲ್ಲಿ ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿ ಉದ್ಯಾನಕ್ಕೆ 2017-18ನೇ ಸಾಲಿನ  ಅತ್ಯುತ್ತಮ ನಿರ್ವಹಣೆ ಪ್ರಶಸ್ತಿ ಬಂದಿದ್ದು ನಿಗಮದ ಪರವಾಗಿ ಸಹ ಕಾರ್ಯನಿರ್ವಣಾ ಎಂಜಿನಿಯರ್‌ ಬಿ.ಎಸ್‌. ಕೃಷ್ಣಪ್ಪ ಪ್ರಶಸ್ತಿ ಸ್ವೀಕರಿಸಿದರು.  

ಲೋಕಾಯುಕ್ತ: ಲೋಕಾಯುಕ್ತ ಕಚೇರಿಯಲ್ಲಿ ಶುಕ್ರವಾರ ಉಪಲೋಕಾಯುಕ್ತ ನ್ಯಾ. ಸುಭಾಷ್‌ ಬಿ. ಅಡಿ  ಧ್ವಜಾರೋಹಣ ನೆರವೇರಿಸಿದರು. ಪಿ. ವಿಶ್ವನಾಥ ಶೆಟ್ಟಿ, ಉಪಲೋಕಾಯುಕ್ತ ಎನ್‌.ಆನಂದ, ಲೋಕಾಯುಕ್ತ ರಿಜಿಸ್ಟ್ರಾರ್‌ ಎಚ್‌.ಎಂ.ನಂಜುಂಡಸ್ವಾಮಿ ಉಪಸ್ಥಿತರಿದ್ದರು.  ಪೊಲೀಸ್‌ ಇಲಾಖೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿ ನಡೆದ ಗಣರಾಜ್ಯೋತ್ಸವದಲ್ಲಿ ಡಿಜಿಪಿ ನೀಲಮಣಿ ರಾಜು ಹಾಗೂ ನಗರ ಪೊಲೀಸ್‌ ಆಯುಕ್ತರ ಕಚೇರಿಯಲ್ಲಿ ಟಿ.ಸುನಿಲ್‌ಕುಮಾರ್‌ ಧ್ವಜಾರೋಹಣ ನೆರವೇರಿಸಿದರು.

ಬೆಂಗಳೂರು ವಿವಿ: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಶುಕ್ರವಾರ ಕುಲಪತಿ ಪ್ರೊ.ವಿ ಸುದೇಶ್‌ ಅವರು ಗಣರಾಜೋತ್ಸವದ ಧ್ವಜಾರೋಹಣ ನೆರವೇರಿಸಿದರು. ನಂತರ ಮಹತ್ಮಗಾಂಧಿ ಹಾಗೂ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು. ಕುಲಸಚಿವ ಪ್ರೊ.ಬಿ.ಕೆ.ರವಿ, ವಿತ್ತಾಧಿಕಾರಿ ಡಾ.ಎ.ಲೋಕೇಶ್‌ ಉಪಸ್ಥಿತರಿದ್ದರು.  

ಗಿನ್ನಿಸ್‌ ದಾಖಲೆ: ಗಣರಾಜೋತ್ಸವದ ಸಂದರ್ಭದಲ್ಲಿ ಜಯನಗರದ  ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು ಎರಡು ಗಿನ್ನಿಸ್‌ ದಾಖಲೆ ನಿರ್ಮಿಸಿದರು. ಬನಶಂಕರಿ 2ನೇ ಹಂತದಲ್ಲಿರುವ ಶ್ರೀವೀಣಾವಾಣಿ ಸಂಗೀತ ನೃತ್ಯ ಮತ್ತು ನಾಟಕಶಾಲೆಯ ಐದು ಸಾವಿರ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾರತದ ಭೂಪಟದ ಒಳಗೆ ನಿಂತು ನಾಡಗೀತೆ ಹಾಡುವ ಮೂಲಕ ಒಂದು ಗಿನ್ನಿಸ್‌ ದಾಖಲೆ ಬರೆದರೆ, ಇನ್ನೊಂದೆಡೆ 1600 ವಿದ್ಯಾರ್ಥಿಗಳು, ಶಿಕ್ಷಕರು ಭಾರತದ ಭೂಪಟದ ಮಾದರಿ ಸೃಷ್ಟಿಸಿ ಎರಡನೇ ಗಿನ್ನಿಸ್‌ ದಾಖಲೆ ನಿರ್ಮಿಸಿದರು.

ಸುವರ್ಣ ಲೇಡಿಸ್‌ ಕ್ಲಬ್‌ ಸೇರಿ ನಗರದ ಹಲವು ಸಂಘ ಸಂಸ್ಥೆಗಳ ಕಾರ್ಯಕರ್ತೆಯರು ಹಸಿರುಡುಗೆಯಲ್ಲಿ ಬಂದು ಕಾರ್ಯಕ್ರಮಕ್ಕೆ ಮೆರುಗು ತಂದರು ಎಂದು ಕಾರ್ಯಕ್ರಮದ ಸಹಾಯಕ ಸಂಘಟಕ ಅಲೋಕ್‌ ಹೇಳಿದ್ದಾರೆ. ಬನಶಂಕರಿಯ ವೀಣಾವಾಣಿ ಸಂಗೀತ ಶಾಲೆ, ನಾಗರಬಾವಿ ಮತ್ತು ಕೋರಮಂಗಲದ ನಾರಾಯಣ ಶಾಲೆ, ಎನ್‌ಎಂಕೆಆರ್‌ವಿ ಕಾಲೇಜ್‌, ವಿಜಯ ಕಾಲೇಜ್‌, ಬಿಎನ್‌ಎಂ ಕಾಲೇಜು ಸೇರಿದಂತೆ ವಿವಿಧ ಶಾಲೆಗಳ ಮಕ್ಕಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಸುಗಮವಾಗಿ ನಡೆದ ಗಣರಾಜ್ಯೊತ್ಸವ ನಗರದ ಮಾಣೆಕ್‌ ಷಾ ಪರೇಡ್‌ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಖಾಕಿ ಕಣ್ಗಾವಲ್ಲಿನಲ್ಲಿ ಸುಗಮವಾಗಿ ನಡೆಯಿತು. ಭಯೋತ್ಪಾದಕ ಕೃತ್ಯ ಶಂಕೆ ಹಿನ್ನೆಲೆಯಲ್ಲಿ ಇಡೀ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ ಒದಗಿಸಲಾಗಿತ್ತು. ಶುಕ್ರವಾರ ಮುಂಜಾನೆಯೇ ಮೈದಾನದ ಸುತ್ತ ಸಾವಿರಾರು ಮಂದಿ ಪೊಲೀಸರು ಭದ್ರತೆಯಲ್ಲಿ ತೊಡಗಿದ್ದರು.

ಪೊಲೀಸ್‌ ತಿಮ್ಮಯ್ಯ ಸರ್ಕಲ್‌, ಚಿನ್ನಸ್ವಾಮಿ ಕ್ರೀಡಾಂಗಣ, ಎಂ.ಜಿ.ರಸ್ತೆ  ವೃತ್ತಗಳಲ್ಲಿ  ಪೊಲೀಸರು ಪ್ರತಿ ವಾಹನಗಳನ್ನು ತಪಾಸಣೆ ನಡೆಸಿದರು. ಮೈದಾನದ ಸುತ್ತ ಇರುವ ಮೆಟ್ರೋ ನಿಲ್ದಾಣ ಹಾಗೂ ಇತರೆ ಕಟ್ಟಡಗಳ ಮೇಲೆ ಶಸ್ತ್ರಾಸ್ತ್ರ ಸಮೇತ ಪೊಲೀಸ್‌ ಪಹರೆ ನಿಯೋಜಿಸಲಾಗಿತ್ತು. ಶ್ವಾನದಳ, ಬಾಂಬ್‌ ನಿಷ್ಕ್ರಿàಯ ದಳದಿಂದ ತಪಾಸಣೆ ನಡೆಯಿತು.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

14-bng

Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್‌!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.