ಗಣರಾಜ್ಯೋತ್ಸವ: ಮಾಣೆಕ್ ಷಾ ಪರೇಡ್ ಮೈದಾನ ಸಕಲ ಸಜ್ಜು: ಪಥಸಂಚಲನ ತಾಲೀಮು, ಬಿಗಿ ಭದ್ರತೆ
Team Udayavani, Jan 24, 2020, 10:18 AM IST
ಬೆಂಗಳೂರು: ಈ ಬಾರಿಯ ಗಣರಾಜ್ಯೋತ್ಸವಕ್ಕೆ ನಗರದ ಕಬ್ಬನ್ ರಸ್ತೆಯ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನ ಸಕಲ ರೀತಿಯಲ್ಲಿ ಸಜ್ಜಾಗುತ್ತಿದೆ. ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಕಳೆದ ಒಂದು ವಾರದಿಂದ ತಾಲೀಮು ನಡೆಯುತ್ತಿದೆ.
ಸದ್ಯ ಮೈದಾನದಲ್ಲಿ ಒಂದೆಡೆ ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನೊಂದೆಡೆ ಕೆಎಸ್ ಆರ್ ಪಿ, ಸ್ಕೌಟ್ಸ್-ಗೈಡ್ಸ್, ಎನ್‌ಸಿಸಿ, ಸೇವಾದಳ, ವಿವಿಧ ಶಾಲಾ ಮಕ್ಕಳನ್ನು ಸೇರಿ 1,750 ಮಂದಿಯ 44 ತುಕಡಿಗಳು ಪಥಸಂಚಲನ ತಾಲೀಮು ನಡೆಸುತ್ತಿದ್ದಾರೆ.
ಶುಕ್ರವಾರ ಬಿಬಿಎಂಪಿ ಆಯುಕ್ತರು, ನಗರ ಪೊಲೀಸ್ ಆಯುಕ್ತರು ಹಾಗೂ ನಗರ ಜಿಲ್ಲಾಧಿಕಾರಿಗಳನ್ನು ಸೇರಿಂದತೆ ಸೇನಾ ಪಡೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ 44 ತುಕಡಿಗಳಿಂದ ಪಥಸಂಚಲನ ಹಾಗೂ ಕಿಕ್ಕೇರಿ ಕೃಷ್ಣಮೂರ್ತಿ ದೊಡ್ಡವಾಡ ತಂಡದಿಂದ ನಾಡಗೀತೆ ಮತ್ತು ರೈತಗೀತೆಯ ಅಂತಿಮ ಹಂತದ ತಾಲೀಮು ನಡೆಯಿತು.
ಜಂಟಿ ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಮಾತನಾಡಿ, ಭಾನುವಾರ ಬೆಳಗ್ಗೆ 8.58ಕ್ಕೆ ರಾಜ್ಯಪಾಲರು ಮೈದಾನಕ್ಕೆ ಆಗಮಿಸಲಿದ್ದಾರೆ. ಬಳಿಕ 9 ಗಂಟೆಗೆ ಧ್ವಜಾರೋಹಣ ನೆರವೇರಿಸಲಿದ್ದು, ಈ ಸಂದರ್ಭದಲ್ಲಿ ವಾಯುಪಡೆಯು ಹೆಲಿಕಾಪ್ಟರ್ ಮೂಲಕ ಪುಪ್ಪವೃಷ್ಟಿ ನಡೆಸಲಾಗುವುದು. ಆ ಬಳಿಕ ಪರೇಡ್ ವೀಕ್ಷಿಸಿ, ಗೌರವ ವಂದನೆ ಸ್ವೀಕರಿಸಿ ನಾಡಿನ ಜನತೆಯನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ.
ನಂತರದಲ್ಲಿ 2,000 ಮಕ್ಕಳಿಂದ ಮೂರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು. ಸಾರ್ವಜನಿಕರಿಗಾಗಿ 4,000 ಆಸನಗಳು, ಅತಿಗಣ್ಯರಿಗೆ 2,000 ಆಸನಗಳು, ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು, ರಕ್ಷಣಾ ಇಲಾಖೆ ಅಧಿಕಾರಿಗಳಿಗೆ 2,00 ಆಸನಗಳು, ಇತರೆ ಇಲಾಖೆ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳಿಗಾಗಿ 2,000 ಆಸನಗಳು ಸೇರಿದಂತೆ ಒಟ್ಟು 10,000 ಆಸನ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಮೈದಾನದಲ್ಲಿ ಹೆಚ್ಚಿನ ಭದ್ರತೆ:
ನಗರ ಪೊಲೀಸ್ ಆಯುಕ್ತ ಭಾಸ್ಕರ್‌ರಾವ್ ಮಾತನಾಡಿ, ಮಾಣೆಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತಾ ತಪಾಸಣೆ ನಡೆಸಲಾಗಿದೆ. 70 ಸಿ.ಸಿ.ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಮೈದಾನದ ಸಮೀಪದಲ್ಲಿರುವ ಎತ್ತರದ ಕಟ್ಟಡಗಳು, ಕಾಮಗಾರಿ ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಜತೆಗೆ ನಗರದ ಎಲ್ಲಾ ಪೊಲೀಸ್ ಠಾಣೆಗಳ ಮೂಲಕ ಆಯಾ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣ, ಹೋಟೆಲ್‌ಗಳು ಸೇರಿದಂತೆ ಎಲ್ಲೆಡೆಯೂ ಪರಿಶೀಲನೆ ನಡೆಸಲಾಗಿದೆ.
ಅಹಿತಕರ ಘಟನೆ ನಡೆಯಂತೆ ಎಚ್ಚರ ವಹಿಸಲು ಮೈದಾನದಲ್ಲಿ ಎಂಟು ಡಿಸಿಪಿಗಳ ಸೇರಿದಂತೆ 1,200 ಮಂದಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದ್ದು, 70ಕ್ಕೂ ಹೆಚ್ಚು ಸಿಸಿ ಟಿವಿಗಳು, ನಾಲ್ಕು ಬ್ಯಾಗೇಜ್ ಸ್ಕ್ಯಾನರ್ ಅಳವಡಿಸಲಾಗಿದೆ.
ಮೈದಾನದ ನಾಲ್ಕೂ ದ್ವಾರಗಳಲ್ಲೂ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಲಿದ್ದು, ಮೈದಾನದ ಒಳಗೆ ಅಥವಾ ಸುತ್ತಮುತ್ತಲ ಪ್ರದೇಶದಲ್ಲಿ ಯಾವುದೇ ಅನುಮಾನಾಸ್ಪದ ವಸ್ತು, ವ್ಯಕ್ತಿ ಕಂಡು ಬಂದರೆ ಹತ್ತಿರದ ಪೊಲೀಸ್ ಸಿಬ್ಬಂದಿಗೆ ತಿಳಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.