1ನೇ ತರಗತಿ ವಯೋಮಿತಿ ತಗ್ಗಿಸಲು ಸಚಿವರಿಗೆ ಮನವಿ

Team Udayavani, Jun 7, 2017, 1:31 PM IST

tanveer-seth.jpg

ಬೆಂಗಳೂರು: ಒಂದನೇ ತರಗತಿಗೆ ಸೇರಲು ಐದು ವರ್ಷ ಹತ್ತು ತಿಂಗಳು ಪೂರ್ಣಗೊಳ್ಳುವುದು ಕಡ್ಡಾಯ ಎಂಬ ಸಾರ್ವಜನಿಕ ಶಿಕ್ಷಣ ಇಲಾಖೆಯ ಸುತ್ತೋಲೆ ರದ್ದುಗೊಳಿಸುವಂತೆ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಶಿಕ್ಷಣ ಸಚಿವ ತನ್ವೀರ್‌ ಸೇಠ್ ಅವರಿಗೆ ಮನವಿ ಸಲ್ಲಿಸಿದೆ.

ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ್‌, ಪ್ರಧಾನ ಕಾರ್ಯದರ್ಶಿ ವಿ.ಎಂ.ನಾರಾಯಣ ಸ್ವಾಮಿ ಅವರನ್ನೊಳಗೊಂಡ ನಿಯೋಗ ಮಂಗಳವಾರ ಸಚಿವ ತನ್ವೀರ್‌ ಸೇಠ್ ಅವರನ್ನು ಭೇಟಿ ಮಾಡಿ, 5 ವರ್ಷ 10 ತಿಂಗಳ ಪೂರೈಸಿದ ಮಕ್ಕಳಿಗೆ ಮಾತ್ರ ಪ್ರವೇಶ ನೀಡಬೇಕು ಎಂಬ ನಿಯಮವನ್ನು ಸಡಿಲ ಮಾಡಬೇಕು. 2016-17ನೇ ಸಾಲಿನಲ್ಲಿ 5 ವರ್ಷ ತುಂಬಿದ ಮಕ್ಕಳನ್ನು ದಾಖಲೆ ಮಾಡಿಕೊಂಡಿರುವಂತೆ ಈ ವರ್ಷವೂ ಅವಕಾಶ ನೀಡಬೇಕು ಎಂದು ಕೋರಿಕೊಂಡರು.

ಮಕ್ಕಳಿಗೆ ಅನ್ಯಾಯ: 5 ವರ್ಷ 10 ತಿಂಗಳು ಆಗಿರಬೇಕು ಎಂಬ ನಿಯಮ ತಂದಿರುವುದರಿಂದ ಮಕ್ಕಳ ವಯೋಮಿತಿಯಲ್ಲಿ ಅಲ್ಪಸ್ವಲ್ಪ ವ್ಯತ್ಯಾಸವಿದ್ದರೂ, ಶಾಲಾ ಮುಖ್ಯಶಿಕ್ಷಕರು ಮಕ್ಕಳನ್ನು ಸೇರಿಸಿಕೊಳ್ಳಲು ನಿರಾಕರಿಸುತ್ತಿದ್ದಾರೆ. ಸರ್ಕಾರಿ ಶಾಲೆಯಲ್ಲಿ ಪೂರ್ವಪ್ರಾಥಮಿಕ  ವ್ಯವಸ್ಥೆ ಇಲ್ಲ. ಖಾಸಗಿ ಶಾಲೆಯಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ವ್ಯವಸ್ಥೆ ಇರುವುದರಿಂದ ಪಾಲಕರು ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುತ್ತಾರೆ.

ಆಗ 5 ವರ್ಷ 10 ತಿಂಗಳು ತುಂಬಿದ ಮಗು 1ನೇ ತರಗತಿಯನ್ನು ಅದೇ ಶಾಲೆಯಲ್ಲಿ ಅಥವಾ ಬೇರೆ ಯಾವುದಾದರು ಶಾಲೆಯಲ್ಲಿ ಮುಂದುವರಿಸುತ್ತದೆ. ಅಂಗನವಾಡಿಗೆ ಹೋಗುವ ಮಕ್ಕಳಿಗೆ ಇದರಿಂದ ಅನ್ಯಾಯವಾಗುತ್ತದೆ ಎಂಬುದನ್ನು ಸಚಿವರ ಗಮನಕ್ಕೆ ತಂದರು. ಪಾಲಕ, ಪೋಷಕರ ಸ್ವಯಂ ಒಪ್ಪಿಗೆ ಮೇರಿಗೆ 5 ವರ್ಷ ಪೂರೈಸಿದ ಮಗುವಿಗೆ ಪ್ರವೇಶಾತಿ ನೀಡಬೇಕು ಹಾಗೂ ಸರ್ಕಾರಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿ (ಎಲ್‌ಕೆಜಿ, ಯುಕೆಜಿ) ತೆರೆಯಬೇಕು.

ಇಲ್ಲದಿದ್ದರೆ. ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಕೂಡ ಗಣನೀಯವಾಗಿ ಕುಸಿಯಲಿದೆ ಎಂದು ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. ಮನವಿ ಸ್ವೀಕರಿಸಿ ಮಾತನಾಡಿದ ಸಚಿವ ತನ್ವೀರ್‌ ಸೇಠ್, ಒಂದನೇ ತರಗತಿಗೆ ನಿಗದಿ ಮಾಡಿರುವ ಮಕ್ಕಳ ವಯೋಮಿತಿಯಲ್ಲಿ ಸಡಿಲಿಕೆ ಮಾಡುವ ಸಂಬಂಧ ಪರಿಶೀಲಿಸಿ, ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಲಾಗುತ್ತದೆ ಎಂಬ ಭವರವಸೆ ನೀಡಿದರು.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

3

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.