ಸರ್ಕಾರದ ಭೂಮಿ ಉಳಿಸಲು ಮನವಿ
Team Udayavani, Aug 8, 2018, 12:20 PM IST
ಮಹದೇವಪುರ: ಯುವ ಪೀಳಿಗೆಯ ಹಿತದೃಷ್ಟಿಯಿಂದ ಸರ್ಕಾರದ ಭೂಮಿಯನ್ನು ಉಳಿಸಲು ಅಧಿಕಾರಿಗಳು ಮುಂದಾಗಬೇಕೆಂದು ಗ್ರಾಪಂ ಅಧ್ಯಕ್ಷೆ ಜ್ಯೋತಿ ಹೇಳಿದರು. ಕ್ಷೇತ್ರದ ಅವಲಹಳ್ಳಿ ಗ್ರಾಪಂ ವತಿಯಿಂದ ವೀರೆನಹಳ್ಳಿಯಲ್ಲಿ ಹಮ್ಮಿಕೊಂಡಿದ್ದ ಗ್ರಾಮಸಭೆ ಉದ್ಘಾಟಿಸಿ ಮಾತನಾಡಿದರು.
ನಗರ ಪ್ರದೇಶ ವ್ಯಾಪ್ತಿಯಲ್ಲಿ ಭೂಮಿಯ ಬೆಲೆ ಗಗನಕ್ಕೇರಿರುವುದರಿಂದ ರುದ್ರಭೂಮಿಗಳಿಗೆ ಜಾಗದ ಕೊರತೆ ಉಂಟಾಗುತ್ತಿದೆ. ಹಾಗಾಗಿ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಸರ್ಕಾರಿ ಭೂಮಿಯನ್ನು ಸರ್ಕಾರ ಅಂಗ ಸಂಸ್ಥೆಗಳಿಗೆ ಗುತ್ತಿಗೆ ನೀಡುವ ಬದಲು ಸಾರ್ವಜನಿಕರ ಹಿತದೃಷ್ಟಿಯಿಂದ ರುದ್ರಭೂಮಿ ಇಲ್ಲವೆ ಕ್ರೀಡಾ ಮೈದಾನಗಳಿಗೆ ಮೀಸಲಿಡಬೇಕೆಂದು ಜಿಲ್ಲಾಧಿಕಾರಿಗಳಲ್ಲಿ ಮನವಿ ಮಾಡಿದರು.
ಬಹುದಿನಗಳ ಬೇಡಿಕೆಯಾಗಿರುವ ಚೀಮಸಂದ್ರ ಎಸ್ಸಿ ಮತ್ತು ಎಸ್ಟಿ ವರ್ಗದವರ ರುದ್ರಭೂಮಿಯನ್ನು ಬಿಎಂಟಿಸಿ ಗುತ್ತಿಗೆ ಪಡೆದಿದ್ದು ಅದನ್ನು ಮರುಪಡೆಯಲು ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದರು. ಮಹಿಳಾ ಮತ್ತು ಮಕ್ಕಳ ಇಲಾಖೆ ಅಧಿಕಾರಿ ಕವಿತಾ ಮಾತನಾಡಿ, ಇತ್ತಿಚಿನ ದಿನಗಳಲ್ಲಿ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ.
ಈ ಬಗ್ಗೆ ಸಾರ್ವಜನಿಕರು ಏಚ್ಚೇತ್ತುಕೊಳ್ಳಬೇಕು. ಬಾಲ್ಯ ವಿವಾಹದಿಂದ ಹೆಣ್ಣು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ 1098 ಸಂಖ್ಯೆಗೆ ಕರೆ ಮಾಡಿ ಎಂದು ತಿಳಿಸಿದರು. ತಾಪಂ ಸದಸ್ಯೆ ಶಶಿಕಲಾ, ಗ್ರಾಪಂ ಉಪಧ್ಯಕ್ಷೆ ಶಾಂತಮ್ಮ ಶಿವಣ್ಣ, ಸದ್ಯಸರಾದ ಜಬೀನಾ ಕೃಷ್ಣ, ಸಿದ್ದೇಶ್, ನಾಗಭೂಷಣ್, ಪಿಡಿಒ ಮಮತಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.